ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಂ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರಗೆ ಮೊದಲ ಬಾರಿ ಭಾರಿ ಹಿನ್ನಡೆ!

|
Google Oneindia Kannada News

ಬೆಂಗಳೂರು, ನ. 16: ಶಿರಾ ಹಾಗೂ ಆರ್ ಆರ್ ನಗರ ಉಪ ಚುನಾವಣೆ ಗೆದ್ದು ಬೀಗುತ್ತಿದ್ದ ರಾಜ್ಯ ಬಿಜೆಪಿ ಸರ್ಕಾರಕ್ಕೆ ಬಸವಕಲ್ಯಾಣ ಚುನಾವಣೆ ತಯಾರಿಯಲ್ಲಿ ಭಾರಿ ಹಿನ್ನಡೆ ಆಗಿದೆ. ಪುತ್ರ ಬಿ.ವೈ. ವಿಜಯೇಂದ್ರ ಅವರ ಮಾತನ್ನು ಕೇಳಿಕೊಂಡು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಆದೇಶ ಮಾಡಿದ್ದರು ಎನ್ನಲಾಗಿದೆ. ಮರಾಠ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ 50 ಕೋಟಿ ರೂ.ಗಳನ್ನು ಕಾಯ್ದಿರಿಸುವಂತೆಯೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದರು.

ಉಪ ಚುನಾವಣೆಯಲ್ಲಿ ಎರಡು ಕ್ಷೇತ್ರಗಳನ್ನು ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿದ್ದ ಸಿಎಂ ಯಡಿಯೂರಪ್ಪ ಅವರಿಗೆ ಹಿನ್ನೆಡೆಯಾಗಿದೆ. ಬಸವಕಲ್ಯಾಣ ಉಪ ಚುನಾವಣೆ ಹಿನ್ನೆಲೆಯಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಅವರು ಮುಂದಾಗಿದ್ದಾರೆ. ಅದಕ್ಕೆ ಇಡೀ ರಾಜ್ಯಾದ್ಯಂತ ಭಾರಿ ವಿರೋಧ ವ್ಯಕ್ತವಾಗಿದೆ. ಜಾತಿ ಆಧಾರಿತ ಪ್ರಾಧಿಕಾರ ಅಥವಾ ಭಾಷಾ ಅಲ್ಪಸಂಖ್ಯಾತರಿಗೆ ಪ್ರಾಧಿಕಾರ ರಚನೆ ಮಾಡಬಾರದು ಎಂದು ತೀವ್ರ ವಿರೋಧ ವ್ಯಕ್ತವಾಗಿದೆ.

ಜೊತೆಗೆ ಲಿಂಗಾಯತ ಸಮುದಾಯಕ್ಕೆ ಸೇರಿರುವ ಮುಖ್ಯಮಂತ್ರಿಗಳು ತಮ್ಮ ಸಮುದಾಯವನ್ನೇ ಕಡೆಗಣನೆ ಮಾಡುತ್ತಿದ್ದಾರೆಂದು ಹಲವರು ಆರೋಪಿಸಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

ವಿಜಯೇಂದ್ರಗೆ ಭಾರಿ ಹಿನ್ನಡೆ

ವಿಜಯೇಂದ್ರಗೆ ಭಾರಿ ಹಿನ್ನಡೆ

ಸ್ವಪಕ್ಷೀಯ ನಾಯಕರಿಂದಲೂ ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವಂತೆ ಆಗ್ರಹ ಕೇಳಿ ಬಂದಿದೆ. ಉಪ ಚುನಾವಣೆಗಳ ಮೇಲೆ ಉಪ ಚುನಾವಣೆ ಗೆದ್ದು ಜೆಡಿಎಸ್ ಹಾಗೂ ಕಾಂಗ್ರೆಸ್ ಭದ್ರಕೋಟೆಗಳನ್ನು ವಶಪಡಿಸಿಕೊಂಡು ಕಮಲ ಅರಳುವಂತೆ ಮಾಡುತ್ತಿದ್ದ ರಾಜ್ಯ ಬಿಜೆಪಿ ಬಿ.ವೈ. ವಿಜಯೇಂದ್ರ ಅವರಿಗೆ ಮೊದಲ ಬಾರಿ ಭಾರಿ ಹಿನ್ನಡೆಯಾಗಿದೆ.

ರಾಜಕೀಯ ನಿರ್ಧಾರಗಳನ್ನು ಅಳೆದು ತೂಗಿ ತೆಗೆದುಕೊಳ್ಳದೇ ಕೇವಲ ಚುನಾವಣಾ ದೃಷ್ಟಿಯಿಂದ ಸಮುದಾಯದ ಒಲೈಕೆಗೆ ಮುಂದಾದರೆ ಏನಾಗಬಹುದು ಎಂಬುದಕ್ಕೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ನಿರ್ಧಾರಕ್ಕೆ ಎದುರಾಗಿರುವಗೆ ಮುಂದಾಗಿರುವುದು ಒಂದು ಉದಾಹರಣೆಯಾಗಿದೆ.

ಲಿಂಗಾಯತ ಪ್ರಾಧಿಕಾರ ಬೇಡ

ಲಿಂಗಾಯತ ಪ್ರಾಧಿಕಾರ ಬೇಡ

ಮರಾಠ ಅಭಿವೃದ್ಧಿ ಪ್ರಾಧಿಕಾರದಂತೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚಿಸುವಂತೆ ಈಗಾಗಲೇ ಲಿಂಗಾಯತ ಸಂಘಟನೆಗಳು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಆಗ್ರಹಿಸಿವೆ. ಇದೀಗ ಕಾಂಗ್ರೆಸ್ ನಾಯಕರೂ ಕೂಡ ಮರಾಠ ಅಭಿವೃದ್ಧಿ ನಿಗಮದ ಔಚಿತ್ಯವನ್ನು ಪ್ರಶ್ನೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿರುವ ಲಿಂಗಾಯತ ಸಮುದಾಯದ ನಾಯಕ, ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರು, ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ಮಾಡುವ ಬದಲು ಲಿಂಗಾಯತರಿಗೆ ಮೀಸಲಾತಿ ಕೊಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಆಗ್ರಹಿಸಿದ್ದಾರೆ. ಮಹಾರಾಷ್ಟ್ರ ಮಾದರಿಯಲ್ಲಿ ಶೇಕಡಾ 16ರಷ್ಟು ಮೀಸಲಾತಿಯನ್ನು ರಾಜ್ಯ ಸರ್ಕಾರ ಕೊಡಬೇಕು ಎಂದಿದ್ದಾರೆ.

ಮೀಸಲಾತಿ ಕೊಡಿ

ಮೀಸಲಾತಿ ಕೊಡಿ

ಈ ಸಂಬಂಧ ಬಸವರಾಜ್ ಹೊರಟ್ಟಿ ಅವರು ಯಡಿಯೂರಪ್ಪ ಅವರ ಮುಂದಿಟ್ಟಿರುವ ಬೇಡಿಕೆಯನ್ನು ನಾನು ಬೆಂಬಲಿಸುತ್ತೇನೆ. ಕೇವಲ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ, ನೂರಿನ್ನೂರು ಕೋಟಿ ರೂಪಾಯಿಗಳ ಸಹಾಯಧನ ಕೊಟ್ಟರೆ ಪ್ರಯೋಜನ ಆಗುವುದಿಲ್ಲ. ಲಿಂಗಾಯತರಲ್ಲಿ ಸಾಕಷ್ಟು ಬಡವರಿದ್ದಾರೆ.

ಮೀಸಲಾತಿ ಸಿಕ್ಕರೆ ಶಿಕ್ಷಣ ಉದ್ಯೋಗದಲ್ಲಿ ಅನುಕೂಲ ಆಗಲಿದೆ. ಈ ವಿಚಾರವನ್ನು ಲಿಂಗಾಯತ ಸಮುದಾಯ ಸಹ ಅರ್ಥ ಮಾಡಿಕೊಳ್ಳಬೇಕು. ಮೀಸಲಾತಿಗಾಗಿ ನಾನೂ ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದು ಮನವಿ ಮಾಡುತ್ತೇನೆ ಎಂದು ಮಾಜಿ ಸಚಿವ, ಲಿಂಗಾಯತ ಸಮುದಾಯದ ನಾಯಕ ಎಂ.ಬಿ. ಪಾಟೀಲ್ ಹೇಳಿಕೆ ನೀಡಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರತಿಕ್ರಿಯೆ ಕೊಟ್ಟಿದ್ದಾರೆ.

Recommended Video

ಹಾಗಾದ್ರೆ ಈ ಆಟಗಾರರ ಭವಿಷ್ಯ !! | RCB | Oneindia Kannada
ಸಮಾಜ ಒಡೆಯಲು ಪ್ರಾಧಿಕಾರ!

ಸಮಾಜ ಒಡೆಯಲು ಪ್ರಾಧಿಕಾರ!

ಮರಾಠ ಪ್ರಾಧಿಕಾರ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಡಿ.ಕೆ. ಶಿವಕುಮಾರ್ ಅವರು, ನಮ್ಮ ರಾಜ್ಯದಲ್ಲಿರುವ ಮರಾಠ ಜನರಿಗೆ ಅನುದಾನ ಕೊಡಬಾರದು ಅಂತೇನಿಲ್ಲ. ಆದರೆ ಅವರನ್ನು (ಕರ್ನಾಟಕದಲ್ಲಿನ ಮರಾಠಿಗರನ್ನು) ಪ್ರತ್ಯೇಕವಾಗಿ ಯಾಕೆ ನೋಡುತ್ತೀರಾ? ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಪ್ರಶ್ನೆ ಮಾಡಿದ್ದಾರೆ.

ಈ ಮೊದಲು ನಾವು ಅವರಿಗೆ ಸಹಾಯ ಮಾಡಿಲ್ಲವಾ? ಈಗ್ಯಾಕೆ ಸಮಾಜ ಒಡೆಯುವ ಕೆಲಸ ಮಾಡಬೇಕು? ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚನೆ ಬಗ್ಗೆ ಪಕ್ಷದಲ್ಲಿ ಚರ್ಚಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಇದೀಗ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದರೂ ಕಷ್ಟ, ಬಿಟ್ಟರೂ ಕಷ್ಟ ಎಂಬಂತಹ ಸ್ಥಿತಿ ನಿರ್ಮಾಣವಾಗಿದ್ದು, ಇದರ ನೇರ ಪರಿಣಾಮ ಬಸವಕಲ್ಯಾಣ ಉಪ ಚುನಾವಣೆಯ ಮೇಲಾಗಲಿದೆ ಎಂಬುದು ತಜ್ಞರ ಅಭಿಪ್ರಾಯ!

English summary
Former Home Minister M.B. Patil said that instead of forming the Lingayat Development Authority, the reservation should be made to the Lingayats. M.B. Patil has urged to Chief Minister B.S. Yediyurappa that state government should give 16% reservation on the Maharashtra model. Know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X