MB Patil vs Murugesh Nirani: 'ದನಕಾಯುವವನು' ಎಂದು ಹೇಳಿಲ್ಲ, ನಿನ್ನ ಸಂತ್ಯಾಂಶ ಬಿಚ್ಚಿಡುತ್ತೇನೆ: ಸಚಿವರ ಎಚ್ಚರಿಕೆ

ಬೆಂಗಳೂರು, ಸೆಪ್ಟಂಬರ್ 02: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಹಗರಣ ಬಯಲಾಗುತ್ತಿದ್ದಂತೆ ಸರ್ಕಾರ ಬೇರೆ ಬೇರೆಯವರಿಗೆ ನೀಡಿರುವ ನಿವೇಶನಗಳ ಮಾಹಿತಿ ಬಯಲಾಗಿದೆ. ಈ ಪೈಕಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಯವರು 'ಸಿದ್ದಾರ್ಥ ಟ್ರಸ್ಟ್'ಗೆ ನೀಡಿರುವ ಸಿಎ ನಿವೇಶನ ಬಗ್ಗೆ ಮೇಲಿಂದ ಮೇಲೆ ಚರ್ಚೆ ಆಗುತ್ತಿದೆ. ಇದೀಗ ಸಚಿವ ಎಂಬಿ ಪಾಟೀಲ ಮತ್ತು ಮಾಜಿ ಸಚಿವ ಮುರುಗೇಶ ನಿರಾಣಿ ಮಧ್ಯೆ ನೇರ ಹಣಾಹಣಿಗೆ ಸಾಕ್ಷಿಯಾಗುತ್ತದೆ.

ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ನಿಯಮಾನುಸಾರ ಟ್ರಸ್ಟ್‌ಗೆ ಸಿಎ ನಿವೇಶನ ನೀಡಲಾಗಿದೆ. ಇದರಲ್ಲಿ ಯಾವುದೇ ಅಕ್ರಮ ಆಗಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿ ವಿವರಿಸಿದ್ದೇನೆ. ಎಲ್ಲಿಯೂ ಏಕವಚನ ಪದ ಪ್ರಯೋಗ ಮಾಡಿಲ್ಲ. ಆದರೂ ಎಐಸಿಸಿ ಅಧ್ಯಕ್ಷರ ಹೆಸರು ಎಳೆದು ತಂದು ವಿವಾದ ಮಾಡಲಾಗುತ್ತದೆ ಎಂದು ಬಿಜೆಪಿ ಹಾಗೂ ಮಾಜಿ ಸಚಿವ ಮುರುಗೇಶ ನಿರಾಣಿ ವಿರುದ್ಧ ಸಚಿವರು ಕಿಡಿ ಕಾರಿದರು.

MB Patil vs Murugesh Nirani CA Site Distribution for Siddharth Trust Row

ಖರ್ಗೆ ಹೆಸರು ಅನವಶ್ಯಕವಾಗಿ ತಂದು ವಿವಾದ

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಎಂಬಿ ಪಾಟೀಲ ಅವರು, ಮಿ. ಮುರುಗೇಶ ನಿರಾಣಿ ಬಾಗಲಕೋಟೆಯಲ್ಲಿ ನೀನು ಮಾಡಿರುವ ಸುದ್ದಿಗೋಷ್ಠಿ ಗಮನಿಸಿದ್ದೇನೆ. ಸಿದ್ದಾರ್ಥ ಟ್ರಸ್ಟ್ ಗೆ ಯಾವುದೇ ರಿಯಾಯಿತಿ ಇಲ್ಲದೆ ಸಿಎ ನಿವೇಶನ ನೀಡಿದ್ದರೂ, ಎಐಸಿಸಿ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆಯವರ ಹೆಸರನ್ನು ಅನವಶ್ಯಕವಾಗಿ ಎಳೆದು ತಂದು ಹಗರಣವಾಗಿದೆ ಎಂದು ಬಿಜೆಪಿ ಅವರು ಬಿಂಬಿಸುತ್ತಿದೆ.

ಇದಕ್ಕೆ ಪ್ರತಿಯಾಗಿ ನಾನು ಸುದ್ದಿಗೋಷ್ಠಿ ನಡೆಸಿ, ಬಿಜೆಪಿ ಅವಧಿಯಲ್ಲಿ ಬಿಜೆಪಿ ನಾಯಕರು ಯಾರು ಯಾರು ಎಷ್ಟೆಷ್ಟು ಲಾಭ ಪಡೆದಿದ್ದಾರೆ ಎಂಬುದು ತಿಳಿಸುವುದು ನನ್ನ ಉದ್ದೇಶವಾಗಿತ್ತು. ಈ ಸಂದರ್ಭದಲ್ಲಿ ಮಿ. ನಿರಾಣಿ ತನ್ನ ಶಿಕ್ಷಣ ಸಂಸ್ಥೆ ಮತ್ತು ಸಕ್ಕರೆ ಕಾರ್ಖಾನೆಗೆ ಪಡೆದಿರುವ ಲಾಭದ ಮಾಹಿತಿಯನ್ನು ನೀಡಿದ್ದೇನೆ ಎಂದು ಅವರು ತಿರುಗೇಟು ನೀಡಿದ್ದಾರೆ.

MB Patil vs Murugesh Nirani CA Site Distribution for Siddharth Trust Row

'ದನಕಾಯುವವನು' ಎಂದಿಲ್ಲ: ನಿನ್ನ ಸಂತ್ಯಾಂಶ ಬಿಚ್ಚಿಡುತ್ತೇನೆ!

ಆದರೆ, 'ದನಕಾಯುವವನು' ಎಂಬ ಶಬ್ದವನ್ನು ನಾನು ಎಲ್ಲಿಯೂ ಬಳಸಿಲ್ಲ ಮತ್ತು ಏಕವಚನದಲ್ಲೂ ನಾನು ಮಾತನಾಡಿಲ್ಲ. ಅಷ್ಟಕ್ಕೂ, ದನಕಾಯುವುದು ಗೌರವದ ಕಾಯಕ. ದನಕಾಯುವವರನ್ನು ನಾನು ಗೌರವಿಸುತ್ತೇನೆ. ಮಿ. ನಿರಾಣಿ ತಾನಾಗಿಯೇ 'ದನಕಾಯುವವ' ಎಂದು ತಿಳಿದುಕೊಂಡು, ನನ್ನ ಸಂಸ್ಥೆ ಮತ್ತು ನನ್ನ ಕುರಿತು ಏಕವಚನದಲ್ಲಿ ಕೆಟ್ಟ ಭಾಷೆ ಬಳಸಿದ್ದಾನೆ. ನಾನು ವಿಜಯಪುರ ಜಿಲ್ಲೆಯವ. ಇಂಥಹ ಎಲ್ಲ ಭಾಷೆಗಳು ನನಗೂ ಬರುತ್ತವೆ. ನಾನೇ ಸ್ವತಃ ಬಾಗಲಕೋಟೆಗೆ ಬಂದು ನಿನ್ನ ಭಾಷೆಯಲ್ಲಿಯೇ ನಿನ್ನ ಸತ್ಯಾಂಶವನ್ನು ಬಿಚ್ಚಿಡುತ್ತೇನೆ ಎಂದು ಹೇಳಿದರು.

ಅನವಶ್ಯಕವಾಗಿ ನನ್ನ ತಂಟೆಗೆ ಬಂದವರಿಗೆ ಹಿಂದೆಯೂ ಬಿಟ್ಟಿಲ್ಲ, ಇಂದು ಮತ್ತು ಮುಂದೆಯೂ ಬಿಡುವುದಿಲ್ಲ. ಅದರ ಕಹಿ ಅನುಭವ ಈ ಹಿಂದೆ ನಿನಗೆ ಆಗಿದೆ ಎನ್ನುವುದನ್ನು ನೆನಪಿಸುತ್ತೇನೆ ಎಂದು ಅವರು ಈ ಭಾರಿ ಏಕವನದಲ್ಲಿಯೇ ಗುಡುಗಿದ್ದಾರೆ.

ಇತ್ತೀಚೆಗೆ ಸುದ್ದಿಗೋಷ್ಠಿ ನಡೆಸಿದ್ದ ಎಂಬಿ ಪಾಟೀಲರು, ಸಿಎ ನಿವೇಶನವನ್ನು ಎಐಸಿಸಿ ಅಧ್ಯಕ್ಷರ ಕುಟುಂಬವು ಸಕ್ರಿಯವಾಗಿರುವ ಟ್ರಸ್ಟ್‌ಗೆ ಯಾವುದೇ ಅಕ್ರಮ ಇಲ್ಲದೇ ಹಾಗೂ ವಿನಾಯಿತಿ ಇಲ್ಲದೇ ಸದುದ್ದೇಶ ಕಾರಣಗಳಿಗೆ ಜಾಗ ಮಾರಾಟ ಮಾಡಲಾಗಿದೆ ಎಂದು ದಾಖಲೆ ಸಮೇತ ತಿಳಿಸಿದ್ದರು. ವಿವಾದ ಮಾಡುತ್ತಿರುವ ಬಿಜೆಪಿ ನಾಯಕರ ಹೆಸರು ಹೇಳಿಕೆ ಆಕ್ರೋಶ ವ್ಯಕ್ತಪಡಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+