Bengaluru Second Airport: ಎರಡನೇ ಏರ್‌ಪೋರ್ಟ್‌ ನಿರ್ಮಾಣದ ಸ್ಥಳ ಯಾವುದು? ಸದನದಲ್ಲಿ ಉತ್ತರಿಸಿದ ಎಂ ಬಿ ಪಾಟೀಲ್‌

ಬೆಂಗಳೂರು, ಮಾರ್ಚ್‌ 20: ಕರ್ನಾಟಕದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಎಲ್ಲಿ ಹೊಸ ಏರ್‌ಪೋರ್ಡ್‌ ನಿರ್ಮಾಣವಾಗಬೇಕು ಎಂಬ ಬಗ್ಗೆ ರಾಜ್ಯ ಸರ್ಕಾರ ಮೂರು ಸ್ಥಳಗಳನ್ನ ಅಂತಿಮಗೊಳಿಸಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನ ಸಲ್ಲಿಸಿದೆ. 2025ರ ಮಾರ್ಚ್ 5 ರಂದು ಕೇಂದ್ರ ವಿಮಾನಯಾನ ಸಚಿವಾಲಯಕ್ಕೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದದು, ಈ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ‌ಮಾಹಿತಿಯನ್ನ ನೀಡಿದೆ. ಇನ್ನೂ ಹೊಸ ವಿಮಾನ ನಿಲ್ದಾಣದ ಕುರಿತು ವಿಧಾನ ಪರಿಷತ್‌ ನಲ್ಲಿ ಸದಸ್ಯರೊಬ್ಬರು ಮಾಹಿತಿ ಕೇಳಿದ್ದಾರೆ.

ವಿಧಾನ ಪರಿಷತ್‌‌ನಲ್ಲಿ ಜವರಾಯಿಗೌಡ ಅವರು ಹೊಸ ವಿಮಾನ ನಿಲ್ದಾಣ ನಿರ್ಮಾಣ ಎಲ್ಲಿ, ಯಾವ ಸ್ಥಳದಲ್ಲಿ ಆಗಲಿದೆ ಎಂಬ ಕುರಿತು ಬುಧವಾರ ವಿಧಾನ ಪರಿಷತ್‌ ನಲ್ಲಿ ಪ್ರಶ್ನಿಸಿದ್ದಾರೆ. ಇನ್ನೂ ಈ ಬಗ್ಗೆ ಸಚಿವ ಎಂ ಬಿ ಪಾಟೀಲ್‌ ಅವರು ಸದನದಲ್ಲಿ ಉತ್ತರಿಸಿದ್ದು, HAL ವಿಮಾನ ನಿಲ್ದಾಣವನ್ನ ಡೊಮೆಸ್ಟಿಕ್ ವಿಮಾನ ನಿಲ್ದಾಣವಾಗಿ ಅಭಿವೃದ್ಧಿ ಪಡಿಸುವ ಬಗ್ಗೆ ಕೇಂದ್ರಕ್ಕೆ ಜನವರಿ 16 ರಂದು ಸರ್ಕಾರ ಮನವಿ ಸಲ್ಲಿಕೆ ಮಾಡಿತ್ತು.

MB Patil s response in the assembly on the construction site of the second airport

ಎರಡನೇ ವಿಮಾನ ನಿಲ್ದಾಣಕ್ಕೆ ನಾವು ಈಗಗಲೇ ಮೂರು ಸ್ಥಳಗಳ ಹೆಸರುಗಳನ್ನು (ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ) ಕಳುಹಿಸಿದ್ದೇವೆ.ವಿಧಾನ ಸಭೆ ಅಧಿವೇಶನದ ನಂತರ ನಾವು ದೆಹಲಿಗೆ ಭೇಟಿ ನೀಡುತ್ತೇವೆ. ಸ್ಥಳ ಅನುಮೋದನೆಗಾಗಿ AAI ಭೇಟಿ ನೀಡಬೇಕಾಗುತ್ತದೆ.ನಂತರ ರಾಜ್ಯ ಸರ್ಕಾರವು ಕಾರ್ಯಸಾಧ್ಯತೆ, ಕಾರ್ಯಸಾಧ್ಯತೆಯ ಆಧಾರದ ಮೇಲೆ ನಿರ್ಧರಿಸಬೇಕಾಗುತ್ತದೆ ಎಂದು ಸಚಿವ ಎಂ.ಬಿ ಪಾಟೀಲ್ ಮಾಹಿತಿಯನ್ನು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಅಂತಿಮ ಮಾಡಿರುವ ಜಾಗಗಳು ಯಾವುವು?

1.ಬೆಂಗಳೂರು ದಕ್ಷಿಣ ತಾಲೂಕಿನ ಚೂಡಹಳ್ಳಿ ಹತ್ತಿರ
2.ಬೆಂಗಳೂರು ದಕ್ಷಿಣ ತಾಲೂಕು ಸೋಮನಹಳ್ಳಿ ಹತ್ತಿರ‌‌
3.ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ನೆಲಮಂಗಲ ಹತ್ತಿರ

ಉತ್ಪಾದನಾ ತಾಣವಾಗಿ ರಾಜ್ಯ: ಏಪ್ರಿಲ್‌ನಲ್ಲಿ ʻಉದ್ಯಮ ಮಂಥನʼ

ರಾಜ್ಯವನ್ನು ಜಾಗತಿಕ ಮಟ್ಟದ ಉತ್ಪಾದನಾ ಕೇಂದ್ರವನ್ನಾಗಿ ರೂಪಿಸುವ ಉದ್ದೇಶದಿಂದ ಏಪ್ರಿಲ್‌ ಕೊನೆ ವಾರದಲ್ಲಿ ಎರಡು ದಿನಗಳ ʻಉದ್ಯಮ ಮಂಥನʼ ಕಾರ್ಯಕ್ರಮ ನಡೆಸಲಾಗುವುದು. ಇದರಲ್ಲಿ ಉತ್ಪಾದನಾ ವಲಯದಲ್ಲಿ ಮುಂಚೂಣಿಯಲ್ಲಿರುವ ಉದ್ದಿಮೆಗಳ ಮುಖ್ಯಸ್ಥರನ್ನು ಕರೆದು, ವಿಸ್ತೃತ ಚರ್ಚೆ ನಡೆಸಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ತಿಳಿಸಿದ್ದಾರೆ.

ವಿಧಾನಸೌದದ ತಮ್ಮ ಕಚೇರಿಯಲ್ಲಿ ಈ ಕುರಿತು ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಪ್ರಾಥಮಿಕ ಹಂತದ ಸಭೆ ನಡೆಸಿದರು. ಈ ಕಾರ್ಯಕ್ರಮದಲ್ಲಿ ವಿದೇಶಗಳ ಗಣ್ಯ ಉದ್ಯಮಿಗಳು ಮತ್ತು ಹೂಡಿಕೆದಾರರು ಕೂಡ ಭಾಗವಹಿಸಲಿದ್ದಾರೆ. ಇಲ್ಲಿ ತಂತ್ರಜ್ಞಾನ, ಬಂಡವಾಳ ಹೂಡಿಕೆ, ನೀತಿ ನಿರೂಪಣೆಯಲ್ಲಿ ಆಗಬೇಕಾದ ಸುಧಾರಣೆಗಳು ಮತ್ತು ಉದ್ಯಮಗಳಿಗೆ ಒದಗಿಸಬೇಕಾದ ಸೌಲಭ್ಯಗಳನ್ನು ಕುರಿತು ಅಗತ್ಯ ಚರ್ಚೆ ನಡೆಸಲಾಗುವುದು. ಸದ್ಯಕ್ಕೆ ಸೇವಾ ಮಾದರಿಯ ಚಟುವಟಿಕೆಗಳಿಗೆ ಹೆಸರಾಗಿರುವ ರಾಜ್ಯವನ್ನು ಉತ್ಪಾದನಾ ತಾಣವನ್ನಾಗಿ ಮಾಡಬೇಕಾದ ಸವಾಲು ನಮ್ಮ ಮುಂದಿದೆ. ಇದು ಸಾಧ್ಯವಾದರೆ, ರಾಜ್ಯದ ಆರ್ಥಿಕತೆಗೆ ಮತ್ತಷ್ಟು ಬಲ ಬರಲಿದೆʼ ಎಂದಿದ್ದಾರೆ.

ಮುಂದಿನ 6 ತಿಂಗಳಲ್ಲಿ ಕೈಗಾರಿಕಾ ಬೆಳವಣಿಗೆಗೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳು, ಯೋಜನೆಗಳು ಮತ್ತು ಹೂಡಿಕೆ ಆಕರ್ಷಣೆಗೆ ತೆಗೆದುಕೊಳ್ಳಬೇಕಾದ ಉಪಕ್ರಮಗಳನ್ನು ಉದ್ಯಮ ಮಂಥನದ ಆಧಾರದ ಮೇಲೆ ತೆಗೆದುಕೊಳ್ಳಲಾಗುವುದು. ಜತೆಗೆ ಉದ್ಯಮಗಳ ಸ್ಥಾಪನೆಗೆ ಭೂಮಿಯ ಲಭ್ಯತೆ, ಕೈಗಾರಿಕಾ ಮೂಲಸೌಕರ್ಯ ವೃದ್ಧಿಗೆ ಖಾಸಗಿ ಪಾಲುದಾರಿಕೆ, ಪ್ಲಗ್‌ & ಪ್ಲೇ ಮಾದರಿಯ ಸೌಲಭ್ಯ ಮತ್ತು ಕೆಲಸಗಾರರಿಗೆ ವಸತಿ ಸೌಕರ್ಯಕ್ಕಾಗಿ ಕೈಗಾರಿಕಾ ಡಾರ್ಮಿಟರಿ ಮುಂತಾದ ವಿಚಾರ ಕುರಿತು ಗಮನ ಹರಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.

ಇದಲ್ಲದೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಅಧಿಕಾರಿ/ಸಿಬ್ಬಂದಿ ವರ್ಗಕ್ಕೆಗೆ ಸಂವಹನ, ಸರಕಾರದ ನೀತಿಗಳು, ಸಾಮಾಜಿಕ ಮಾಧ್ಯಮಗಳು, ಏಕಗವಾಕ್ಷಿ ವ್ಯವಸ್ಥೆ ಇತ್ಯಾದಿಗಳನ್ನು ಕುರಿತು ಎರಡು ಹಂತಗಳಲ್ಲಿ ತರಬೇತಿ ನೀಡಲಾಗುವುದು. ಈ ಸಂಬಂಧ ಈಗಾಗಲೇ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+