ಪದಕ ಹಿಂತಿರುಗಿಸಲು ಸಂಸದ ರಾಜೀವ್ ಚಂದ್ರಶೇಖರ್ ಮನವಿ
ನವದೆಹಲಿ, ಸೆಪ್ಟೆಂಬರ್ 28: ಏಕಶ್ರೇಣಿ-ಏಕ ಪಿಂಚಣಿ ಜಾರಿಗೆ ಒತ್ತಾಯಿಸಿ ಸೇವಾ ಪದಕ ಹಾಗೂ ಶೌರ್ಯ ಪದಕಗಳನ್ನು ಹಿಂತಿರುಗಿಸಿದ್ದ ನಿವೃತ್ತ ಹಾಗೂ ಹಿರಿಯ ಸೈನಿಕರಿಗೆ ಅವುಗಳನ್ನು ಗೌರವಯುತವಾಗಿ ಹಿಂತಿರುಗಿಸಬೇಕು ಎಂದು ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಅವರು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಮನವಿ ಮಾಡಿ, ಪತ್ರ ಬರೆದಿದ್ದಾರೆ.
ಸೇನಾ ಮುಖ್ಯಸ್ಥರಾದ ನೀವು, ಒಂದು ಕಾರ್ಯಕ್ರಮವನ್ನು ಮಾಡಿ ಆ ಎಲ್ಲ ಪದಕಗಳನ್ನು ಗೌರವಯುತವಾಗಿ ಹಿಂತಿರುಗಿಸುವಂತಾಗಬೇಕು ಎಂದು ವಿನಂತಿ ಮಾಡಿದ್ದಾರೆ. "ಪದಕಗಳನ್ನು ಹಿಂತಿರುಗಿಸಿದ ಹಲವರು ವಯಸ್ಸಿನಲ್ಲಿ ಹಿರಿಯರಿದ್ದಾರೆ. ಪದಕಗಳನ್ನು ಹಿಂತಿರುಗಿಸಿದರೆ ಅವರ ಕುಟುಂಬದವರು ಗೌರವವಾಗಿ ಅದನ್ನು ಜೋಪಾನ ಮಾಡುತ್ತಾರೆ ಎಂದಿದ್ದಾರೆ.

ನಿಸ್ವಾರ್ಥವಾದ ಸೇವೆ ಹಾಗೂ ತ್ಯಾಗವನ್ನು ಗುರುತಿಸಿ ದೇಶದ ಕಡೆಯಿಂದ ಅವರಿಗೆ ಪದಕಗಳನ್ನು ನೀಡಲಾಗಿದೆ. ದೇಶದ ಸಾರ್ವಭೌಮತೆಯನ್ನು ಉಳಿಸಲು ಅವರು ತೋರಿದ ಶೌರ್ಯವನ್ನು ಸ್ಮರಿಸಬೇಕಿದೆ. ಇನ್ನೇನು ಏಕ ಶ್ರೇಣಿ- ಏಕ ಪಿಂಚಣಿ ಕಾರ್ಯರೂಪಕ್ಕೆ ಬರಲಿದೆ. ಹಿಂತಿರುಗಿಸಿದ ಪದಕಗಳನ್ನು ಗೌರವಪೂರ್ವಕವಾಗಿ ಮರಳಿ ನೀಡಬೇಕು ಎಂದು ರಾಜೀವ್ ಚಂದ್ರಶೇಖರ್ ಮನವಿ ಮಾಡಿಕೊಂಡಿದ್ದಾರೆ.

-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ
Download










Click it and Unblock the Notifications