ಎಸ್ಸಿಎಸ್ಟಿ ನೋಂದಾಯಿತ ಪತ್ರಕರ್ತರಿಗೆ ಮೀಡಿಯಾ ಕಿಟ್

Posted By:
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 14 : ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ ಮೀಡಿಯಾ ಕಿಟ್ ವಿತರಿಸಲು ನಿರ್ಧರಿಸಿದೆ.

ಹಿರಿಯ ಪತ್ರಕರ್ತರಾದ ವೆಂಕಟನಾರಾಯಣ, ವೆಂಕಟಸುಬ್ಬುಗೆ ಸನ್ಮಾನ

ಈ ಯೋಜನೆಯ ಫಲ ಅನುಭವಿಸಲಿಚ್ಛಿಸುವ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅರ್ಜಿ ನಮೂನೆಯನ್ನು ಪಡೆಯಬಹುದು, ಅಥವಾ ಇಲಾಖೆಯ ವೆಬ್‍ಸೈಟ್ karnatakainformation.gov.inನಿಂದ ಅರ್ಜಿಯನ್ನು ಡೌನ್‍ಲೋಡ್ ಮಾಡಿಕೊಳ್ಳಬಹುದು.

Media kit to sc and st journalists, application invited

ನೊಂದಾಯಿತ ಪತ್ರಕರ್ತರ ಹೆಸರು, ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ (ಉಪ ಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ಭರ್ತಿಮಾಡಿ ಸ್ವ-ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು.

ಸದರಿ ಅರ್ಜಿಯೊಂದಿಗೆ ಕರ್ತವ್ಯ ನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ವಿವರ, ಪ್ರಸಾರ ಸಂಖ್ಯೆ, ಪತ್ರಿಕೆಯ ಮಾಧ್ಯಮ ಪಟ್ಟಿಯ ವಿವರ, ಜಾತಿ ಪ್ರಮಾಣ ಪತ್ರ, ವಿಳಾಸ ಹಾಗೂ ವಯಸ್ಸನ್ನು ದೃಢೀಕರಿಸುವ ದಾಖಲೆಗಳ ಪ್ರತಿಯನ್ನು ಲಗತ್ತಿಸಿ ದಿನಾಂಕ: 27-09-2017 ರ ಸಂಜೆ 5.00 ಗಂಟೆಯೊಳಗೆ ನೀಡಬೇಕು.

ಅರ್ಜಿ ಕಳಿಸಬೇಕಾದ ವಿಳಾಸ : ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, #17, "ವಾರ್ತಾಸೌಧ", ಭಗವಾನ್ ಮಹಾವೀರ ರಸ್ತೆ, ಬೆಂಗಳೂರು - 560 001. ಸದರಿ ಲಕೋಟೆಯ ಮೇಲ್ಭಾಗದಲ್ಲಿ "ನೊಂದಾಯಿತ ಪತ್ರಕರ್ತರಿಗೆ ಮೀಡಿಯಾ ಕಿಟ್‍ಗಾಗಿ ಅರ್ಜಿ" ಎಂದು ನಮೂದಿಸಿರಬೇಕು.

ಹೆಚ್ಚಿನ ಮಾಹಿತಿಗಾಗಿ ಸುದ್ದಿ ಮತ್ತು ಪತ್ರಿಕಾ ವಿಭಾಗದ ಉಪ ನಿರ್ದೇಶಕರು ಇವರನ್ನು ದೂರವಾಣಿ ಸಂಖ್ಯೆ 080-22028037/87 ರ ಮೂಲಕ ಸಂಪರ್ಕಿಸಬಹುದು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka government has invited scheduled caste and scheduled tribe acredited journalists to apply for media kit. Interested journalists can apply for media kit with required documents before 29th September.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ