ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಸೆಂಬರ್ 1ರಿಂದ ವೈದ್ಯಕೀಯ ಕಾಲೇಜುಗಳು ಆರಂಭ

|
Google Oneindia Kannada News

ಬೆಂಗಳೂರು, ನವೆಂಬರ್ 30 : ಕರ್ನಾಟಕದಲ್ಲಿ ಡಿಸೆಂಬರ್ 1ರ ಮಂಗಳವಾರದಿಂದ ವೈದ್ಯಕೀಯ ಕಾಲೇಜುಗಳು ಆರಂಭವಾಗಲಿವೆ. ಕೋವಿಡ್ ಹರಡುವಿಕೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು.

ರಾಜ್ಯದ ಎಲ್ಲಾ ವೈದ್ಯಕೀಯ ಕಾಲೇಜುಗಳು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ತರಗತಿಗಳು ಮಂಗಳವಾರ ಆರಂಭವಾಗಲಿವೆ. ಎನ್‌ಎಂಸಿ, ಯುಜಿಸಿ ಮಾರ್ಗಸೂಚಿಗಳ ಅನ್ವಯ ಕಾಲೇಜು ಆರಂಭಿಸಲಾಗುತ್ತಿದೆ.

ಕಾಲೇಜು ಆರಂಭ; ಬೆಂಗಳೂರಲ್ಲಿ 168 ಕೋವಿಡ್ ಪ್ರಕರಣ ಪತ್ತೆಕಾಲೇಜು ಆರಂಭ; ಬೆಂಗಳೂರಲ್ಲಿ 168 ಕೋವಿಡ್ ಪ್ರಕರಣ ಪತ್ತೆ

ಕಾಲೇಜುಗಳನ್ನು ಡಿಸೆಂಬರ್ 1ರಿಂದ ಪುನಾರಂಭಗೊಳಿಸಿ ತಕ್ಷಣವೇ ಪ್ರಾಯೋಗಿಕ ತರಗತಿಗಳನ್ನು ನಡೆಸಬೇಕು. ವಿದ್ಯಾರ್ಥಿಗಳಿಗೆ ಬೋಧನೆಯನ್ನು ಆನ್ ಲೈನ್ ಮತ್ತು ಆಫ್ ಲೈನ್ ಎರಡೂ ಮಾದರಿಯಲ್ಲಿ ನಡೆಸಬಹುದು ಎಂದು ಸೂಚನೆ ಕೊಡಲಾಗಿದೆ.

ಪದವಿ ಕಾಲೇಜು ತೆರೆಯುವ ವಿಚಾರವಾಗಿ ಸರ್ಕಾರಕ್ಕೆ ಎಚ್‌ಡಿಕೆ ಸಲಹೆಪದವಿ ಕಾಲೇಜು ತೆರೆಯುವ ವಿಚಾರವಾಗಿ ಸರ್ಕಾರಕ್ಕೆ ಎಚ್‌ಡಿಕೆ ಸಲಹೆ

edical colleges To Reopen From December 1

ಪ್ರಾಕ್ಟಿಕಲ್ ಕ್ಲಾಸ್‌ಗಳನ್ನು ನಡೆಸಬೇಕು. ಬೋಧನಾ ತರಗತಿಗೆ ಆನ್ ಲೈನ್ ಅಥವ ಕಾಲೇಜಿಗೆ ಬರುವ ಆಯ್ಕೆ ವಿದ್ಯಾರ್ಥಿಗಳಿಗೆ ಮುಕ್ತವಾಗಿಡಬೇಕು ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿದೆ.

ಕಾಲೇಜು ಆರಂಭಕ್ಕೆ ವಿದ್ಯಾರ್ಥಿಗಳು, ಪೋಷಕರ ಒತ್ತಾಯ: ಡಿಸಿಎಂಕಾಲೇಜು ಆರಂಭಕ್ಕೆ ವಿದ್ಯಾರ್ಥಿಗಳು, ಪೋಷಕರ ಒತ್ತಾಯ: ಡಿಸಿಎಂ

ನವೆಂಬರ್ 17ರಿಂದ ಕರ್ನಾಟಕದಲ್ಲಿ ಅಂತಿಮ ವರ್ಷದ ಪದವಿ ಕಾಲೇಜುಗಳು ಆರಂಭವಾಗಿವೆ. ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಇದೇ ಮಾದರಿಯಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿಯೂ ಕೋವಿಡ್ ಪರೀಕ್ಷೆ ನಡೆಸಲಾಗುತ್ತದೆ.

ಕಾಲೇಜಿನ ಕೊಠಡಿಗಳ ಸ್ಯಾನಿಸೈಟ್, ವಿದ್ಯಾರ್ಥಿಗಳು, ಸಿಬ್ಬಂದಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದೆ ಎಂದು ಯುಜಿಸಿ ಸುತ್ತೋಲೆಯಲ್ಲಿ ತಿಳಿಸಿದೆ.

ಬಾಕಿ ಇರುವ ಪಠ್ಯಗಳನ್ನು ಪೂರ್ಣಗೊಳಿಸಲು ಅನುಕೂಲವಾಗುವಂತೆ ವೇಳಾಪಟ್ಟಿಯನ್ನು ಸಿದ್ಧಗೊಳಿಸಬೇಕು. ವಿದ್ಯಾರ್ಥಿಗಳು ಕಾಲೇಜಿಗೆ ಹಾಜರಾಗಲು ಪೋಷಕರ ಒಪ್ಪಿಗೆ ಪತ್ರವನ್ನು ಕಡ್ಡಾಯವಾಗಿ ತರಬೇಕಿದೆ.

English summary
Medical colleges in Karnataka will reopen in Karnataka from December 1, 2020. Colleges closed after the announcement of lockdown. ಕರ್ನಾಟಕದಲ್ಲಿ ಡಿಸೆಂಬರ್ 1ರ ಮಂಗಳ
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X