ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಷ್ಕರ ಕೈ ಬಿಡಲು ಸಚಿವ ಡಾ.ಕೆ. ಸುಧಾಕರ್ ವೈದ್ಯರಲ್ಲಿ ಮನವಿ

|
Google Oneindia Kannada News

ಬೆಂಗಳೂರು, ಸೆ. 15: ಆರ್ಥಿಕ ದುಸ್ಥಿತಿಯಲ್ಲೂ ವೈದ್ಯರ ವೇತನ ಪರಿಷ್ಕರಿಸಲು ಸರಕಾರ ಒಪ್ಪಿದ್ದು, ಮುಷ್ಕರ ಕೈ ಬಿಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ವೈದ್ಯರಲ್ಲಿ ಮನವಿ ಮಾಡಿದರು.

ವೇತನ ಪರಿಷ್ಕರಣೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಮುಷ್ಕರಕ್ಕೆ ಕರೆ ಕೊಟ್ಟಿದ್ದ ವೈದ್ಯಾಧಿಕಾರಿಗಳ ಸಂಘದ ಪದಾಧಿಕಾರಿಗಳೊಂದಿಗೆ ಮಂಗಳವಾರ ಸಭೆ ನಡೆಸಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಮುಷ್ಕರ ಕೈಬಿಡಲು ವೈದ್ಯರ ನಕಾರ: ಯಾರು ಏನಂದ್ರು?ರಾಜ್ಯದಲ್ಲಿ ಮುಷ್ಕರ ಕೈಬಿಡಲು ವೈದ್ಯರ ನಕಾರ: ಯಾರು ಏನಂದ್ರು?

ವೈದ್ಯರ ಬೇಡಿಕೆಯಾದ ವೇತನ ಪರಿಷ್ಕರಣೆ ಸಂಬಂಧ ನಡೆಸಿದ ಸಭೆ ಫಲಪ್ರದವಾಗಿದೆ. ವೈದ್ಯರು ಆರೋಗ್ಯ ಕ್ಷೇತ್ರದಲ್ಲಿ ವಸ್ತು ನಿಷ್ಠೆಯಿಂದ ಕರ್ತವ್ಯ ನಿಭಾಯಿಸುತ್ತಿದ್ದಾರೆ. ಅವರಿಗೆ ನೈತಿಕ ಸ್ಫೂರ್ತಿ ಕೊಡುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಂಡಿದ್ದೇವೆ.

 Medical Education Minister Dr.K. Sudhakar appealed to the govt doctors to give up protest

ಕಳೆದ ಆರು ತಿಂಗಳಲ್ಲಿ ಆರೋಗ್ಯ ಇಲಾಖೆಯ ಎಲ್ಲಾ ಪ್ರಸ್ತಾವನೆಗಳಿಗೂ ಮುಖ್ಯಮಂತ್ರಿಗಳು ಒಪ್ಪಿದ್ದಾರೆ. ಅದರಂತೆ ಈ ಬೇಡಿಕೆಯು ಈಡೇರಲಿದೆ. ಆರ್ಥಿಕ ಇತಿಮಿತಿಯಲ್ಲಿ ಹೆಚ್ಚು ಮಾಡಲು ಕ್ರಮ ಕೈಗೊಳ್ಳುತ್ತೇವೆ. ಈ ಸಂಬಂಧ ಆರ್ಥಿಕ ಇಲಾಖೆಗೆ ಪೂರ್ಣ ಮಾಹಿತಿ ನೀಡಿದ್ದೇವೆ ಎಂದರು.

Recommended Video

Casino ವಿಚಾರದಲ್ಲಿ CT Ravi ವಿರುದ್ಧ Eshwara Khandre ಗರಂ | Oneindia Kannada

ವೈದ್ಯರಿಗೆ 6 ವರ್ಷ, 13 ವರ್ಷ ಹಾಗೂ 20 ವರ್ಷ ಸೇವೆ ಆಧಾರದ ಮೇಲೆ ಮೂರು ಹಂತದ ಬಡ್ತಿ ಮತ್ತು ವೇತನ ಪರಿಷ್ಕರಣೆ ಆಗಬೇಕಿದೆ. ಈ ಬಗ್ಗೆ ಪದಾಧಿಕಾರಿಗಳಿಂದ ಮಾಹಿತಿ ಪಡೆಯಲಾಗಿದೆ. ಇದರಿಂದ ಸರಕಾರಕ್ಕೆ ಹೆಚ್ಚಿನ ಹೊರೆ ಬೀಳಲಿದೆ. ಆದರೂ ಸಹ ವೈದ್ಯರ ಬೇಡಿಕೆಗೆ ಮನ್ನಣೆ ನೀಡಲಿದ್ದೇವೆ ಎಂದರು.

English summary
Medical education minister Dr Sudhakar appealed to the doctors that the government has agreed to revise doctors' salaries even in the face of economic hardship
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X