ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೈದ್ಯಕೀಯ ಆಮ್ಲಜನಕ ಪೂರೈಕೆಗೆ ವಾರ್‌ರೂಮ್ ರಚನೆ: ಕೆ. ಸುಧಾಕರ್

|
Google Oneindia Kannada News

ಬೆಂಗಳೂರು, ಏಪ್ರಿಲ್ 18: ಕೊರೊನಾ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ವೈದ್ಯಕೀಯ ಆಮ್ಲಜನಕ ಪೂರೈಕೆಗೆ ವಾರ್ ರೂಮ್ ರಚಿಸಲಾಗಿದೆ ಎಂದು ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.

ಕರ್ನಾಟಕದಲ್ಲಿ 7 ವೈದ್ಯಕೀಯ ಆಮ್ಲಜನಕ ತಯಾರಿಕಾ ಘಟಕಗಳಿವೆ, ನಿತ್ಯ 812 ಟನ್‌ ಅಷ್ಟು ಆಮ್ಲಜನಕ ಉತ್ಪಾದಿಸುತ್ತವೆ. ಶನಿವಾರ ರಾಜ್ಯದಲ್ಲಿ 272.61 ಟನ್‌ ಅಷ್ಟು ಆಮ್ಲಜನಕ ಬಳಕೆ ಮಾಡಲಾಗಿದೆ.ಹೀಗಾಗಿ ಯಾರೂ ಕೂಡ ಅನಗತ್ಯವಾಗಿ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಸುಧಾಕರ್ ಹೇಳಿದ್ದಾರೆ.

ಇನ್ನು ಯಾವ ಆಸ್ಪತ್ರೆಗಳಲ್ಲಿ ಹಾಸಿಗೆಗಳು ಖಾಲಿ ಇವೆ ಎಂಬುದರ ಕುರಿತು ಕೂಡ ಶೀಟ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ. ರಾಜ್ಯದಲ್ಲಿರೆಮ್‌ಡೆಸಿವಿರ್ ಔಷಧಿ, ಆಕ್ಸಿಜನ್ ಗೆ ಕೊರತೆಯಿದೆ ಎಂದು ಕೂಗು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವ ಡಾ ಕೆ ಸುಧಾಕರ್, ಬೆಂಗಳೂರಿನಲ್ಲಿ ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯುಂಟಾಗಿರಬಹುದು, ಆದರೆ ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಲ್ಲ ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಯವರು ಹಣ ಪಾವತಿಸದಿರುವುದರಿಂದ ಆಮ್ಲಜನಕ ಸಿಗದಿರಬಹುದು, ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರತೆಯಿಲ್ಲ, ಸದ್ಯಕ್ಕೆ ರೆಮೆಡಿಸಿವಿರ್, ಆಕ್ಸಿಜನ್ ಕೊರತೆಯಿಲ್ಲ, ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಮನವಿ ಮಾಡಿಕೊಂಡರು.

ರಾಜ್ಯದಲ್ಲಿ 800 ಮೆಟ್ರಿಕ್ ಟನ್ ಆಕ್ಸಿಜನ್ ಉತ್ಪಾದನೆ ಮಾಡುವ ಶಕ್ತಿ ನಮ್ಮಲ್ಲಿದೆ. ಈಗಿನ ಪರಿಸ್ಥಿತಿಯಲ್ಲಿ 200ರಿಂದ 300 ಮೆಟ್ರಿಕ್ ಟನ್ ಆಕ್ಸಿಜನ್ ಅಗತ್ಯವಿದೆ. ಕೇಂದ್ರದಿಂದ 300 ಮೆಟ್ರಿಕ್ ಟನ್ ವಿತರಣೆಯಾಗಿದೆ. ಇನ್ನೂ ಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೇವೆ, ಹೀಗಾಗಿ ಸದ್ಯಕ್ಕೆ ಆಕ್ಸಿಜನ್ ಕೊರತೆ ಉಂಟಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

Medical Oxygen For Treatment Of Covid-19 Patients A Dedicated War Room Has Been Created

ಆಸ್ಪತ್ರೆಗಳಲ್ಲಿ ಐಸಿಯು ಬೆಡ್ ಗಳ ಕೊರತೆಯುಂಟಾಗದಂತೆ ವಲಯವಾರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿದ್ದೇವೆ. ಐಸಿಯು ಬೆಡ್ ಹೆಚ್ಚಳಕ್ಕೆ ನಿತ್ಯ ಕ್ರಮ ವಹಿಸುತ್ತಿದ್ದೇವೆ ಎಂದಿದ್ದಾರೆ.

ಬೆಂಗಳೂರಲ್ಲಿ ಪರಿಸ್ಥಿತಿ ಕಠಿಣ: ಕೊರೊನಾ ಎರಡನೇ ಅಲೆ ಬೆಂಗಳೂರು ನಗರದಲ್ಲಿ ಸಮುದಾಯಕ್ಕೆ ಹರಡಿದೆ, ಹೀಗಾಗಿಯೇ ಪ್ರತಿದಿನ ಶೇಕಡಾ 10ಕ್ಕೂ ಹೆಚ್ಚು ಪ್ರಕರಣಗಳು ನಗರದಲ್ಲಿ ವರದಿಯಾಗುತ್ತಿವೆ. ಬೆಂಗಳೂರಿಗೆ ವಿಶೇಷ ಕಠಿಣ ಕ್ರಮ, ಕಾರ್ಯಯೋಜನೆ ರೂಪಿಸುತ್ತೇವೆ ಎಂದು ಹೇಳಿದ್ದಾರೆ.

Recommended Video

#Covid19update : ಒಂದೇ ದಿನ ದೇಶದಲ್ಲಿ 2,73,810 ಜನರಿಗೆ ಕೊರೊನಾ ಸೋಂಕು! | Oneindia Kannada

ಬೆಂಗಳೂರಿಗೆ ವಿಶೇಷವಾದ ಕಠಿಣ ನಿಯಮ ಜಾರಿಗೆ ತರುತ್ತೇವೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿದ್ದು, ನಾಳೆ ಬೆಂಗಳೂರಿನ ಎಲ್ಲಾ ಶಾಸಕರ ಸಭೆ ನಡೆಯುತ್ತದೆ, ಅದರಲ್ಲಿ ಎಲ್ಲರ ಜೊತೆ ಚರ್ಚಿಸಿ ಬೆಂಗಳೂರಿಗೆ ಬಿಗಿ ಕ್ರಮಕ್ಕೆ ನಿರ್ಧರಿಸುತ್ತೇವೆ. ಈಗಾಗಲೇ ಕೇಂದ್ರ ಸರ್ಕಾರ ಕೂಡ ಹೇಳಿದೆ, ತಾಂತ್ರಿಕ ಸಲಹಾ ಸಮಿತಿ ಕೂಡ ವರದಿ ನೀಡಿದೆ, ಇಲ್ಲಿ ವೈಯಕ್ತಿಕ ನಿಲುವು ಬೇಕಾದ್ದಲ್ಲ, ವೈಜ್ಞಾನಿಕ ನೆಲೆಗಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.

English summary
Minister K Sudhakar said that In order to facilitate availability of medical oxygen for treatment of Covid-19 patients a dedicated war room has been created at the Office of the Drugs Controller.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X