• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನೀರಾವರಿ ಯೋಜನೆಗಳ ಕುರಿತು ಚರ್ಚಿಸಲು ಮತ್ತೊಂದು ಸಭೆ

|

ಬೆಂಗಳೂರು, ನವೆಂಬರ್ 18 : ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳ ಕುರಿತು ಸೂಕ್ತ ನಿಲುವು ತಳೆಯುವ ನಿಟ್ಟಿನಲ್ಲಿ ಡಿಸೆಂಬರ್ 6 ರಂದು ಎಲ್ಲ ಮಾಜಿ ಮುಖ್ಯಮಂತ್ರಿಗಳು ಹಾಗೂ ಮಾಜಿ ನೀರಾವರಿ ಸಚಿವರ ಸಭೆ ಕರೆಯಲು ನಿರ್ಧರಿಸಲಾಯಿತು.

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹದಾಯಿ ನ್ಯಾಯಾಧೀಕರಣದ ಇತ್ತೀಚಿನ ಬೆಳವಣಿಗೆ ಕುರಿತು ವಿರೋಧ ಪಕ್ಷಗಳು ಹಾಗೂ ಸಂಬಂಧಪಟ್ಟವರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ಮಹದಾಯಿ ವಿವಾದ : ಸುಪ್ರೀಂಕೋರ್ಟ್‌ಗೆ ಕರ್ನಾಟಕ ಅರ್ಜಿ

ಮಹದಾಯಿ ನ್ಯಾಯಾಧೀಕರಣದ ನೀರು ಹಂಚಿಕೆ ತೀರ್ಪು ನೀಡಿದ ನಂತರ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಸಭೆಗೆ ಮಾಹಿತಿ ನೀಡಲಾಯಿತು.

ಮಹದಾಯಿ ಒಂದು ಹನಿ ನೀರು ವ್ಯರ್ಥವಾಗಲು ಬಿಡಲ್ಲ : ಡಿ.ಕೆ.ಶಿವಕುಮಾರ್

ರಾಜ್ಯದ ರೈತರ ಹಿತದೃಷ್ಟಿಯಿಂದ ನೀರಿನ ಬಳಕೆಗೆ ಕಾಮಗಾರಿ ಪ್ರಾರಂಭಿಸಲು ಸರ್ಕಾರ ತಯಾರಿ ನಡೆಸಲು ಅನುವಾಗುವಂತೆ ನೀರು ಹಂಚಿಕೆಯ ಗೆಜೆಟ್ ನೋಟಿಫಿಕೇಶನ್ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿಗಳು ಪತ್ರ ಬರೆದಿದ್ದಾರೆ.

ಶೀಘ್ರದಲ್ಲೇ ಮಹದಾಯಿ ಮೇಲುಸ್ತುವಾರಿ ಸಮಿತಿ ರಚನೆ

ನಿಯಮ 5(3)ರಡಿ ಸ್ಪಷ್ಟೀಕರಣಕ್ಕೆ ಮನವಿ ಸಲ್ಲಿಸಲಾಗಿದೆ ಹಾಗೂ ಹೆಚ್ಚುವರಿ ನೀರು ಪಡೆಯುವ ನಿಟ್ಟಿನಲ್ಲಿ ಸ್ಪೆಷಲ್ ಲೀವ್ ಪೆಟಿಷನ್ ಸಲ್ಲಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಲಾಯಿತು. ಆ ಭಾಗದ ರೈತರ ಹಿತಾಸಕ್ತಿ ಕಾಯಲು ಒಟ್ಟಾಗಿ ಶ್ರಮಿಸಲು ತೀರ್ಮಾನಿಸಲಾಯಿತು.

English summary
Karnataka Chief Minister H.D.Kumaraswamy called another meeting on December 6 to discuss about irrigation projects of the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X