ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿಗೆ ಖಡಕ್ ಆಗಿ ಇದನ್ನು ಕೇಳಿ; ಬಿಎಸ್‌ವೈಗೆ ಸಿದ್ದರಾಮಯ್ಯ ಸಲಹೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 18 : ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ದೆಹಲಿಯಲ್ಲಿದ್ದಾರೆ. ಪ್ರವಾಹ ಪರಿಹಾರ, ಜಿಎಸ್‌ಟಿ ಪಾಲು ಸೇರಿದಂತೆ ವಿವಿಧ ವಿಚಾರಗಳ ಕುರಿತು ಅವರು ಪ್ರಧಾನಿ ನರೇಂದ್ರ ಮೋದಿ ಬಳಿ ಮಾತುಕತೆ ನಡೆಸಲಿದ್ದಾರೆ.

ಶುಕ್ರವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ. "ನರೇಂದ್ರ ಮೋದಿ ಅವರ ಬಳಿ ರಾಜ್ಯದ ಹಿತರಕ್ಷಣೆಗಾಗಿ ನಾಲ್ಕು ಮಾತುಗಳನ್ನು ಖಡಕ್ ಆಗಿ ಕೇಳಲು ಬಳಸಿಕೊಳ್ಳಿ. ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ" ಎಂದು ಸಲಹೆ ನೀಡಿದ್ದಾರೆ.

ಸಂಪುಟ ಸಂಕಟ: ದೆಹಲಿಗೆ ಮುಖ್ಯಮಂತ್ರಿ ಯಡಿಯೂರಪ್ಪ!ಸಂಪುಟ ಸಂಕಟ: ದೆಹಲಿಗೆ ಮುಖ್ಯಮಂತ್ರಿ ಯಡಿಯೂರಪ್ಪ!

ಯಡಿಯೂರಪ್ಪ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ರನ್ನು ಗುರುವಾರ ಭೇಟಿಯಾಗಿದ್ದರು. ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಲು ಸಮಯ ನಿಗದಿಯಾಗಿದೆ. ಮೋದಿ ಜೊತೆ ಏನು ಮಾತನಾಡಬೇಕು ಎಂದು ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ.

ನಾಯಕತ್ವ ಬದಲಾವಣೆ: ಹೈಕಮಾಂಡ್ ಭೇಟಿಗೆ ಶಾಸಕರ ನಿರ್ಧಾರ?ನಾಯಕತ್ವ ಬದಲಾವಣೆ: ಹೈಕಮಾಂಡ್ ಭೇಟಿಗೆ ಶಾಸಕರ ನಿರ್ಧಾರ?

"ಗೆಲುವಿನ ಕಿರೀಟಗಳನ್ನೆಲ್ಲ ಮುಡಿಗೇರಿಸುವ ನರೇಂದ್ರ ಮೋದಿ ಅವರಿಗೆ ವೈಫಲ್ಯಗಳ ಹೊಣೆಯನ್ನು ರಾಜ್ಯಗಳ ಹೆಗಲ ಕಡೆ ಜಾರಿಸುವ ಚಾಳಿ ಇದೆ. ಪ್ರಧಾನಿಗಳಿಗೆ ಅವರಿಗೆ ಜವಾಬ್ದಾರಿ ನೆನಪಿಸಿ ರಾಜ್ಯಕ್ಕೆ ನ್ಯಾಯ ಕೊಡಿಸಿ" ಎಂದು ಸಿದ್ದರಾಮ್ಯಯ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆ? ಅಥವಾ ನಾಯಕತ್ವ ಬದಲಾವಣೆ?ರಾಜ್ಯ ಸಚಿವ ಸಂಪುಟ ವಿಸ್ತರಣೆ? ಅಥವಾ ನಾಯಕತ್ವ ಬದಲಾವಣೆ?

ಕುರ್ಚಿ ಉಳಿಸಿಕೊಳ್ಳುವ ಕಸರತ್ತು

ಕುರ್ಚಿ ಉಳಿಸಿಕೊಳ್ಳುವ ಕಸರತ್ತು

"ಮುಖ್ಯಮಂತ್ರಿ ಯಡಿಯೂರಪ್ಪ ಅವರೇ, ಕಾಡಿಬೇಡಿ ಕೊನೆಗೂ ಪ್ರಧಾನಿಗಳ ಭೇಟಿಗೆ ಅವಕಾಶ ಪಡೆದಿದ್ದೀರಿ. ಈ ಅವಕಾಶವನ್ನು ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ ಬಳಸಿಕೊಳ್ಳದೆ ರಾಜ್ಯದ ಹಿತರಕ್ಷಣೆಗಾಗಿ ನಾಲ್ಕು ಮಾತುಗಳನ್ನು ಖಡಕ್ ಆಗಿ ಕೇಳಲು ಬಳಸಿಕೊಳ್ಳಿ. ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪರಿಹಾರವನ್ನು ಕೊಡುವಂತೆ ಕೇಳಿ

ಪರಿಹಾರವನ್ನು ಕೊಡುವಂತೆ ಕೇಳಿ

"ಕಳೆದ ವರ್ಷದ ಅತಿವೃಷ್ಟಿಗೆ ರೂ.35,000 ಕೋಟಿ ಪರಿಹಾರ ಕೇಳಿದ್ದೀರಿ,‌ ಆದರೆ ಕೇಂದ್ರ ಸರ್ಕಾರ ನೀಡಿದ್ದು ರೂ.1,869 ಕೋಟಿ‌. ಈ ಬಾರಿ ರೂ.8,000 ಕೋಟಿ ನಷ್ಟವಾಗಿದೆ ಎಂದು ಹೇಳುತ್ತಿದ್ದೀರಿ. ಕಳೆದ ವರ್ಷದ ಬಾಕಿ ಜೊತೆ ಈ ವರ್ಷದ ಪರಿಹಾರವನ್ನು ಉದಾರವಾಗಿ ಕೊಡುವಂತೆ ಕೇಳಿಕೊಳ್ಳಿ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಪ್ರಧಾನಿಗಳಿಗೆ ಜವಾಬ್ದಾರಿ ನೆನಪಿಸಿ

ಪ್ರಧಾನಿಗಳಿಗೆ ಜವಾಬ್ದಾರಿ ನೆನಪಿಸಿ

"ಗೆಲುವಿನ ಕಿರೀಟಗಳನ್ನೆಲ್ಲ ಮುಡಿಗೇರಿಸುವ ನರೇಂದ್ರ ಮೋದಿ ಅವರಿಗೆ ವೈಫಲ್ಯಗಳ ಹೊಣೆಯನ್ನು ರಾಜ್ಯಗಳ ಹೆಗಲ ಕಡೆ ಜಾರಿಸುವ ಚಾಳಿ ಇದೆ. ಪ್ರಧಾನಿಗಳಿಗೆ ಅವರಿಗೆ ಜವಾಬ್ದಾರಿ ನೆನಪಿಸಿ ರಾಜ್ಯಕ್ಕೆ ನ್ಯಾಯ ಕೊಡಿಸಿ. ಕೊರೊನಾ ನಿಯಂತ್ರಣದ ಸಾಮಗ್ರಿ ಖರೀದಿಯನ್ನು ಕೇಂದ್ರೀಕೃತಗೊಳಿಸಿರುವ ಕೇಂದ್ರ ಸರ್ಕಾರ, ಕರ್ನಾಟಕದ ಬೇಡಿಕೆಯ ಶೇಕಡಾ ಹತ್ತರಷ್ಟೂ ಪೂರೈಸಿಲ್ಲ. ವೆಂಟಿಲೇಟರ್ ಮತ್ತು ಆಮ್ಲಜನಕ ಪೂರೈಕೆಯ ಸಾಧನಗಳ ಕೊರತೆಯಿಂದ ಜನ ಸಾಯುತ್ತಿರುವುದನ್ನು ಗಮನಕ್ಕೆ ತಂದು ನರೇಂದ್ರ ಮೋದಿ ಅವರ ಕಣ್ಣು ತೆರೆಸಿ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Recommended Video

Nepalದ ಹೊಸ ಪುಸ್ತಕಗಳಳಲ್ಲಿ ಭಾರತವನ್ನು ಸೇರಿಸಿಕೊಂಡ ಭೂಪಟ | Oneindia Kannada
ಜಿಎಸ್‌ಟಿ ಪರಿಹಾರ ಕೇಳಿ

ಜಿಎಸ್‌ಟಿ ಪರಿಹಾರ ಕೇಳಿ

"ರಾಜ್ಯಕ್ಕೆ ಜಿಎಸ್‌ಟಿಯ ನ್ಯಾಯಬದ್ಧ ಪಾಲು ನೀಡಲು ಒತ್ತಾಯಿಸಿ. ರಾಜ್ಯಕ್ಕೆ ನೀಡಬೇಕಾಗಿರುವ ಜಿಎಸ್‌ಟಿ ಪರಿಹಾರ ರೂ.25,508 ಕೋಟಿ ನೀಡದೆ ದ್ರೋಹ ಬಗೆದಿರುವ ಕೇಂದ್ರ ಸರ್ಕಾರ, ಸಾಲ ಎತ್ತಲು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕೈಗೆ ಭಿಕ್ಷಾಪಾತ್ರೆ ನೀಡಿದೆ. ಯಡಿಯೂರಪ್ಪ ಅವರೇ, ನಿಮ್ಮ ನಾಯಕರ ಎದೆಯಳತೆಯ ಮುಂದೆ ಮಣಿಯದೆ ಧೈರ್ಯದಿಂದ ಈ ಅನ್ಯಾಯ ಸರಿಪಡಿಸಲು ಹೇಳಿ" ಎಂದು ಹೇಳಿದ್ದಾರೆ.

English summary
Karnataka chief minister B. S. Yediyurappa in New Delhi. CM will meet prime minister Narendra Modi on September 18, 2020. Opposition leader Siddaramaiah suggestion to Yediyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X