ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಸಚಿವರ ಜೊತೆ ದೆಹಲಿ ಭೇಟಿ ಸಂಪೂರ್ಣ ಯಶಸ್ವಿ: ಎಚ್ಡಿಕೆ ದಿಲ್ ಖುಷ್

|
Google Oneindia Kannada News

Recommended Video

ಕೇಂದ್ರ ಸಚಿವರುಗಳ ಜೊತೆ ಸಭೆ ಯಶಸ್ವಿಯಾಗಿದ್ದಕ್ಕೆ ಎಚ್ ಡಿ ಕುಮಾರಸ್ವಾಮಿ ಫುಲ್ ಖುಷ್ | Oneindia Kannada

ನವದೆಹಲಿ, ಜುಲೈ 18: ಕೇಂದ್ರ ಸರಕಾರದ ವಿವಿಧ ಸಚಿವರೊಂದಿಗೆ ನಡೆಸಿದ ಮಾತುಕತೆಯ ಫಲವಾಗಿ ಸುಮಾರು 2,500 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಅನುದಾನವನ್ನು ಪಡೆದುಕೊಳ್ಳುವಲ್ಲಿ ಮತ್ತು ವಿವಿಧ ಯೋಜನೆಗಳಿಗೆ ಅನುಮತಿ ದೊರಕಿಸಿಕೊಳ್ಳುವಲ್ಲಿ ತಮ್ಮ ಎರಡು ದಿನಗಳ ದೆಹಲಿ ಭೇಟಿಯು ಸಂಪೂರ್ಣವಾಗಿ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಮುಂಗಾರು ಅಧಿವೇಶನದ ಹಿನ್ನೆಲೆಯಲ್ಲಿ ರಾಜ್ಯದ ಸಂಸದರು ಮತ್ತು ರಾಜ್ಯಸಭಾ ಸದಸ್ಯರೊಂದಿಗೆ ಚರ್ಚಿಸಿದ ಹಿನ್ನೆಲೆಯಲ್ಲಿ ದೆಹಲಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿಗಳು ಈ ವೇಳೆಯಲ್ಲಿ ಕೇಂದ್ರ ಸರಕಾರದ ಆಹಾರ ಮತ್ತು ನಾಗರೀಕರ ಸರಬರಾಜು ಸಚಿವರು, ಭೂ ಸಾರಿಗೆ ಮತ್ತು ಜಲಸಂಪನ್ಮೂಲ ಸಚಿವರು, ಕೃಷಿ ಸಚಿವರು, ರೈಲ್ವೆ ಮತ್ತು ಕಲ್ಲಿದ್ದಲು ಸಚಿವರು ಸೇರಿದಂತೆ ರಕ್ಷಣಾ ಸಚಿವರನ್ನು ಖುದ್ದಾಗಿ ಭೇಟಿ ಮಾಡಿ ಚರ್ಚಿಸಿದ್ದರು.

ಎಚ್ಡಿಕೆ- ನಿತಿನ್ ಗಡ್ಕರಿ ಮಹತ್ವದ ಸಭೆ: ಯಾವ ಯಾವ ಹೆದ್ದಾರಿಗೆ ರಾಜ್ಯದಿಂದ ಮನವಿಎಚ್ಡಿಕೆ- ನಿತಿನ್ ಗಡ್ಕರಿ ಮಹತ್ವದ ಸಭೆ: ಯಾವ ಯಾವ ಹೆದ್ದಾರಿಗೆ ರಾಜ್ಯದಿಂದ ಮನವಿ

'ತಮ್ಮ ಭೇಟಿಯ ವೇಳೆ ರಾಜ್ಯದ ಕೋರಿಗೆಗಳಿಗೆ ಎಲ್ಲಾ ಸಚಿವರುಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಸಂತೋಷ ತಂದಿದೆ. ಹಾಗೆಯೇ, ಸಚಿವರೊಂದಿಗೆ ನಡೆಸಿದ ಮಾತುಕತೆಯೂ ಫಲಪ್ರದವಾಗಿತ್ತು. ಇದಕ್ಕಾಗಿ ಸಹಕಾರ ನೀಡಿದ ಎಲ್ಲಾ ಸಚಿವರನ್ನು ರಾಜ್ಯದ ಪರವಾಗಿ ಅಭಿನಂದಿಸುವುದಾಗಿ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಆಹಾರ ಮತ್ತು ನಾಗರೀಕ ಸರಬರಾಜು ಸಚಿವರಾದ ರಾಮ್ ವಿಲಾಸ್ ಪಾಸ್ವಾನ್ ಅವರೊಂದಿಗೆ ಚರ್ಚಿಸಿದ ವೇಳೆ 2014ರಿಂದ ಇಂದಿನವರೆಗೆ ರಾಜ್ಯಕ್ಕೆ ಬಿಡುಗಡೆಯಾಗಬೇಕಿದ್ದ ಬೆಂಬಲ ಬೆಲೆಯ ಬಾಕಿ ಮೊತ್ತವಾದ 954 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಆದೇಶ ನೀಡಿರುತ್ತಾರೆ ಎಂದು ಕುಮಾರಸ್ವಾಮಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ರಾಜ್ಯದಲ್ಲಿ 85 ಲಕ್ಷ ಲೀಟರ್ ಗಳಷ್ಟು ಹಾಲು ಉತ್ಪಾದನೆಯಾಗುತ್ತಿದ್ದು, ರಾಜ್ಯದ ಹಲವಾರು ಜಿಲ್ಲೆಗಳಲ್ಲಿರುವ ಜಿಲ್ಲಾ ಹಾಲು ಉತ್ಪಾದಕರ ಸಂಘಗಳಲ್ಲಿ ಮೆಗಾಡೈರಿಗಳನ್ನು ಸ್ಥಾಪಿಸಬೇಕೆನ್ನುವ ರಾಜ್ಯದ ಉದ್ದೇಶವನ್ನು ಮೆಚ್ಚಿಕೊಂಡ ಕೃಷಿ ಸಚಿವರಾದ ರಾಧಾ ಮೋಹನ್ ಸಿಂಗ್ ಅವರು ಇದಕ್ಕಾಗಿ 900 ಕೋಟಿ ರೂ.ಗಳ ಅನುದಾನ ಬಿಡುಗಡೆಗೆ ಸಮ್ಮತಿ ಸೂಚಿಸಿದ್ದಾರೆ. ಮುಂದೆ ಓದಿ..

ಹಾಸನ, ಕೋಲಾರ ಮತ್ತು ದಕ್ಷಿಣ ಕನ್ನಡ

ಹಾಸನ, ಕೋಲಾರ ಮತ್ತು ದಕ್ಷಿಣ ಕನ್ನಡ

ಈ ಅನುದಾನದಲ್ಲಿ ಹಾಸನ, ಕೋಲಾರ ಮತ್ತು ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೆಗಾಡೈರಿಗಳನ್ನು ಸ್ಥಾಪಿಸಲಾಗುವುದು.
ರಾಜ್ಯದಲ್ಲಿ ಮಾರುಕಟ್ಟೆಗಳನ್ನು ಉನ್ನತೀಕರಿಸಲು ಅಗತ್ಯವಿರುವ ಅನುದಾನ, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಣ್ಣು ಪರೀಕ್ಷಾ ಕೇಂದ್ರಗಳ ಸ್ಥಾಪನೆ, ಆವರ್ತ ನಿಧಿ, ಬೆಂಬಲ ಬೆಲೆ ಹಾಗೂ ಅಡಿಕೆ ಮತ್ತು ತೆಂಗು ಬೆಳೆಗಾರರ ರಕ್ಷಣೆಗಾಗಿ ಅಗತ್ಯವಿರುವ ಕ್ರಮಗಳಿಗೆ ಅನುದಾನವನ್ನು ಒದಗಿಸುವ ಬಗ್ಗೆ ಕೃಷಿ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ - ಮುಖ್ಯಮಂತ್ರಿ ಕುಮಾರಸ್ವಾಮಿ.

ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ

ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ

ಬೆಂಗಳೂರು - ಮೈಸೂರು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ರಾಜ್ಯದಲ್ಲಿರುವ ಪ್ರಮುಖ ಹೆದ್ದಾರಿಗಳ ನಿರ್ಮಾಣಕ್ಕೆ ಇರುವ ಅಡಚಣೆಗಳನ್ನು ಸರಕಾರ ನಿವಾರಿಸಿದ್ದು, ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪ್ರಾರಂಭಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ರಾಜ್ಯ ಸರಕಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಹೆದ್ದಾರಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿಕೊಡುವಂತೆ ಕೇಂದ್ರ ಭೂಸಾರಿಗೆ ಮತ್ತು ಜಲಸಂಪನ್ಮೂಲ ಸಚಿವರಾದ ನಿತಿನ್ ಗಡ್ಕರಿ ಅವರಿಗೆ ಮಾಡಿರುವ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ - ಕುಮಾರಸ್ವಾಮಿ.

ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್

ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್

ಮೆಟ್ರೋ ವಿಸ್ತರಣೆ ಸಂದರ್ಭದಲ್ಲಿ ನಿಲ್ದಾಣ ಕಾಮಗಾರಿಗಳ ಪೈಕಿ ಕೆಲವೊಂದು ಪ್ರದೇಶದಲ್ಲಿ ಅದು ರಕ್ಷಣಾ ಇಲಾಖೆಯ ವ್ಯಾಪ್ತಿಗೆ ಒಳಪಡುತ್ತದೆ. ಈ ಬಗ್ಗೆ ಅವರಿಂದ ಅನುಮತಿ ಪಡೆದುಕೊಳ್ಳುವ ಸಂಬಂಧವಾಗಿ ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚಿಸಿ ಅನುಮತಿ ಪಡೆದುಕೊಳ್ಳುವ ಸಂಬಂಧ ಅಗತ್ಯವಿರುವ ನೆರವನ್ನು ನೀಡುವುದಾಗಿ ತಿಳಿಸಿದ್ದಾರೆ - ಸಿಎಂ ಕುಮಾರಸ್ವಾಮಿ.

ಪೊಲೀಸ್ ಬಲದ ಕಾರ್ಯಕ್ಷಮತೆ

ಪೊಲೀಸ್ ಬಲದ ಕಾರ್ಯಕ್ಷಮತೆ

ಕೊಂಕಣ ರೈಲ್ವೆಯಲ್ಲಿರುವ ಪೊಲೀಸ್ ಬಲದ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಹಾಲಿಯಾಗಿರುವ 900 ಹುದ್ದೆಗಳ ಜೊತೆಗೆ ಸರಕಾರ ರೈಲ್ವೆ ಪೊಲೀಸ್ ದಳದ (ಜಿಆರ್ಪಿ) ಸಂಖ್ಯಾಬಲಕ್ಕೆ ಹೆಚ್ಚುವರಿಯಾಗಿ 919ಕ್ಕೆ ಏರಿಕೆ ಮಾಡುವಂತೆ ಮತ್ತು ರಾಜ್ಯದಲ್ಲಿ ಹೊಸ ರೈಲು ಮಾರ್ಗಗಳನ್ನು ನಿರ್ಮಿಸಲು ಆದ್ಯತೆ ನೀಡುವಂತೆ ಕೇಂದ್ರ ರೈಲ್ವೆ ಮತ್ತು ಕಲ್ಲಿದ್ದಲು ಸಚಿವರಾದ ಪಿಯೂಷ್ ಗೋಯೆಲ್ ಅವರನ್ನು ಭೇಟಿ ಮಾಡಿ ಮನವರಿಕೆ ಮಾಡಿದ್ದು, ಈ ವೇಳೆ ಅವರಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

ಈರುಳ್ಳಿ, ಟೊಮೊಟೊ ಮತ್ತು ಆಲೂಗಡ್ಡೆ

ಈರುಳ್ಳಿ, ಟೊಮೊಟೊ ಮತ್ತು ಆಲೂಗಡ್ಡೆ

ಬೆಲೆಗಳ ವೈಪರೀತ್ಯಕ್ಕೆ ಒಳಗಾಗುವ ಈರುಳ್ಳಿ, ಟೊಮೊಟೊ ಮತ್ತು ಆಲೂಗಡ್ಡೆಗೆ ಕನಿಷ್ಟ ಬೆಲೆಯನ್ನು ನಿಗದಿಗೊಳಿಸುವಂತೆ ತೋಟಗಾರಿಕಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿಗೊಳಿಸುವುದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮಣ್ಣು ಪರೀಕ್ಷಾ ಕೇಂದ್ರಗಳ ಸ್ಥಾಪನೆ, ಚಿತ್ರದುರ್ಗದ ಚಳ್ಳಕೆರೆಯಲ್ಲಿ ಕೃಷಿ ವೈಜ್ಞಾನಿಕ ಸಂಶೋಧನಾ ಕೇಂದ್ರಗಳನ್ನು ತೆರೆಯುವ ಬಗ್ಗೆ ರಾಜ್ಯ ಸರಕಾರದ ಮನವಿಗೆ ಕೃಷಿ ಸಚಿವರು ಪರಿಶೀಲಿಸುವುದಾಗಿ ತಿಳಿಸಿದರು. ಮುಖ್ಯಮಂತ್ರಿಗಳೊಂದಿಗೆ ಲೋಕೋಪಯೋಗಿ ಸಚಿವರಾದ ಹೆಚ್. ಡಿ. ರೇವಣ್ಣ, ಕೃಷಿ ಸಚಿವರಾದ ಶಿವಶಂಕರ ರೆಡ್ಡಿ, ಸಹಕಾರ ಸಚಿವರಾದ ಬಂಡೆಪ್ಪ ಕಾಶೇಂಪೂರ ಅವರುಗಳು ಇದ್ದರು.

English summary
Meeting with Union Ministers Radha Mohan, Nitin Gadkari, Piyush Goyal, Nirmala Seetharaman is fully successful, Karnataka Chief Minister HD Kumaraswamy. Union Ministers agreed various our projects and they assured us to release the funds.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X