ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಮೇಕೆದಾಟು ಪಾದಯಾತ್ರೆ' ಭಾನುವಾರದಿಂದ (ಫೆ.27) ಪುನರಾರಂಭ: ಸಿದ್ಧತೆಗಳ ವೀಕ್ಷಣೆ

|
Google Oneindia Kannada News

ಬೆಂಗಳೂರು, ಫೆ.25: ಕೊರೊನಾ ತೀವ್ರತೆ ಕಾರಣದಿಂದ ಅರ್ಧಕ್ಕೆ ಸ್ಥಗಿತಗೊಂಡಿರುವ 'ಮೇಕೆದಾಟು ಪಾದಯಾತ್ರೆ' ಭಾನುವಾರದಿಂದ (ಫೆ.27) ಮತ್ತೆ ಆರಂಭವಾಗಲಿದೆ.

ಬಜೆಟ್ ಅಧಿವೇಶನ ಕಾರಣದಿಂದಾಗಿ ಪಾದಯಾತ್ರೆಯನ್ನು ಐದು ದಿನಗಳಿಗೆ ಸೀಮಿತಗೊಳಿಸಲಾಗಿದೆ. ಅದರಲ್ಲಿ ಮೂರು ದಿನ ಬೆಂಗಳೂರು ನಗರದಲ್ಲಿಯೇ ಪಾದಯಾತ್ರೆ ಸಂಚರಿಸಲಿದೆ. ಭಾನುವಾರ ರಾಮನಗರದಿಂದ ಆರಂಭಗೊಂಡು ಮಾರ್ಚ್ 3 ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಮಾಪ್ತಿಗೊಳ್ಳಲಿದೆ.

ಎರಡನೇ ಹಂತದ ಮೇಕೆದಾಟು ಪಾದಯಾತ್ರೆಗೆ ಡಿಕೆ ಸಹೋದರರು ಸಜ್ಜುಎರಡನೇ ಹಂತದ ಮೇಕೆದಾಟು ಪಾದಯಾತ್ರೆಗೆ ಡಿಕೆ ಸಹೋದರರು ಸಜ್ಜು

ಪಾದಯಾತ್ರೆ ಸಮಾಪ್ತಿಗೊಳ್ಳುವ ಬಸವನಗುಡಿ ನ್ಯಾಷನಲ್ ಕಾಲೇಜಿನಲ್ಲಿ ನಡೆಯುತ್ತಿರುವ ಸಿದ್ಧತೆಗಳ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಕಯ ಬಿ.ಕೆ. ಹರಿಪ್ರಸಾದ್, ಸಂಸದ ಡಿ.ಕೆ. ಸುರೇಶ್ ಶನಿವಾರ ವೀಕ್ಷಣೆ ಮಾಡಿದರು.

ಸ್ಥಗಿತಗೊಂಡ ಜಾಗದಿಂದಲೇ ಪುನರಾರಂಭ:

ಸ್ಥಗಿತಗೊಂಡ ಜಾಗದಿಂದಲೇ ಪುನರಾರಂಭ:

ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, 'ಬೆಂಗಳೂರು ನಾಗರೀಕರಿಗೆ ಕುಡಿಯುವ ನೀರು ಪೂರೈಸಲು, ಕಾವೇರಿ ಪ್ರದೇಶದ ರೈತರನ್ನು ಬದುಕಿಸಲು ನೀರಿಗಾಗಿ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಮೇಕೆದಾಟುವಿನಿಂದ ರಾಮನಗರದವರೆಗೆ ಪಾದಯಾತ್ರೆ ಮಾಡಿದ್ದೆವು. ಈ ಮಧ್ಯೆ ಕೋವಿಡ್ ಮೂರನೇ ಅಲೆ ಸಂದರ್ಭದಲ್ಲಿ ಜನರ ಆರೋಗ್ಯ, ಕೋರ್ಟ್ ಆದೇಶಕ್ಕೆ ಗೌರವ ಸೂಚಿಸಲು ಈ ಪಾದಯಾತ್ರೆಯನ್ನು ನಿಲ್ಲಿಸಿದ್ದೆವು. ಎಲ್ಲಿ ನಿಲ್ಲಿಸಿದ್ದೇವೋ ಈಗ ಅಲ್ಲಿಂದ ಮತ್ತೆ ಆರಂಭಿಸುತ್ತಿದ್ದೇವೆ' ಎಂದು ಹೇಳಿದರು.

ಇದು ಪಕ್ಷಾತೀತ ಹೋರಾಟ. ಈ ಹೋರಾಟದ ಮುಂದಾಳತ್ವವನ್ನು ಕಾಂಗ್ರೆಸ್ ಪಕ್ಷ ವಹಿಸಿಕೊಂಡಿದೆ. ಎಲ್ಲ ಅಪಾರ್ಟ್‌ಮೆಂಟ್ ಸಂಘಗಳು, ಕಾರ್ಮಿಕ, ಕೈಗಾರಿಕಾ ಸಂಘಟನೆ, ಎನ್‌ಜಿಓ, ಚಿತ್ರರಂಗದ ಎಲ್ಲ ವಿಭಾಗದವರು, ಧರ್ಮಗುರುಗಳು, ಜನಸಾಮಾನ್ಯರು ಈ ಪಾದಯಾತ್ರೆಯಲ್ಲಿ ಭಾಗವಹಿಸುತ್ತಿದ್ದಾರೆ. ನಾಳೆ ಬೆಳಗ್ಗೆ 9 ಗಂಟೆಗೆ ತಾಯಿ ಚಾಮುಂಡೇಶ್ವರಿಗೆ ಪೂಜೆ ನಂತರ ಪಾದಯಾತ್ರೆ ಆರಂಭವಾಗಲಿದೆ. ಮಾರ್ಚ್ 3 ರಂದು ಮಧ್ಯಾಹ್ನ ಪಾದಯಾತ್ರೆ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನ ತಲುಪಲಿದ್ದು, ಅಂದು ಇಲ್ಲಿ ಸಭೆ ನಡೆಸಲಾಗುವುದು. ಸಭೆಯ ಆಯೋಜನೆ ವಿಚಾರವಾಗಿ ಪರಿಶೀಲನೆ ನಡೆಸಿದ್ದೇವೆ' ಎಂದು ವಿವರಿಸಿದರು.

ಪಾದಯಾತ್ರೆಗೆ ಬರುವವರು ಮೆಟ್ರೊ ಬಳಸಿ:

ಪಾದಯಾತ್ರೆಗೆ ಬರುವವರು ಮೆಟ್ರೊ ಬಳಸಿ:

'ನಾವು ಐದು ದಿನಗಳ ಕಾಲ ಬೆಂಗಳೂರು ನಗರದಲ್ಲಿ ಪಾದಯಾತ್ರೆ ಮಾಡಬೇಕಾಗಿತ್ತು, ಬಜೆಟ್ ಅಧಿವೇಶನ ಇರುವ ಕಾರಣ ಕೇವಲ 3 ದಿನ ಪಾದಯಾತ್ರೆ ಮಾಡುತ್ತೇವೆ. ಪಾದಯಾತ್ರೆಗೆ ಬರುವವರು ಮೆಟ್ರೋರೈಲು ಬಳಸಿಕೊಳ್ಳಲು ಅನುಕೂಲವಾಗುವಂತೆ ಈ ಸ್ಥಳ ಆಯ್ಕೆ ಮಾಡಿದ್ದೇವೆ. ಪಾದಯಾತ್ರೆಗೆ ಬರುವವರು ಸಾಧ್ಯವಾದಷ್ಟು ಮೆಟ್ರೊ ಬಳಸಿ ಎಂದು ಮನವಿ ಮಾಡುತ್ತೇನೆ. ನಿಮ್ಮ ಹಕ್ಕಿಗಾಗಿ ನಡೆಯುತ್ತಿರುವ ಐತಿಹಾಸಿಕ ಹೋರಾಟಕ್ಕೆ ನಿಮ್ಮ ಬೆಂಬಲ ಅಗತ್ಯ. ನೀವು ಇದರಲ್ಲಿ ಭಾಗವಹಿಸುವ ಮೂಲಕ ಇತಿಹಾಸದ ಪುಟ ಸೇರುತ್ತೀರಿ. ಸ್ವಾತಂತ್ರ್ಯ ಪೂರ್ವದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದಂತೆ ಈಗ ನಿಮ್ಮ ಕುಡಿಯುವ ನೀರಿನ ಹಕ್ಕಿಗಾಗಿ ಹೋರಾಟ ಮಾಡಿ. ಪಾದಯಾತ್ರೆಯಲ್ಲಿ ಭಾಗವಹಿಸುವವರು ತಮ್ಮ ಹೆಸರು ನೋಂದಣಿ ಮಾಡಿಸಿಕೊಳ್ಳಿ. ಆಗ ನಿಮಗೆ ಪ್ರಮಾಣ ಪತ್ರ ನೀಡಲಾಗುವುದು. ರೈತ ಸಂಘಟನೆ, ಕನ್ನಡಪರ ಸಂಘಟನೆಗಳು ಎಲ್ಲರೂ ಸಹಕಾರ ನೀಡಲಿದ್ದಾರೆ' ಎಂದು ಶಿವಕುಮಾರ್ ವಿವರಿಸಿದರು.

ಬಿರಿಯಾನಿ, ಬಾಳೇಕಾಯಿ ಬಜ್ಜಿ..ಇದೇ ಮೇಕೆದಾಟು ಪಾದಯಾತ್ರೆ: ಎಚ್‌ಡಿಕೆ ವ್ಯಂಗ್ಯಬಿರಿಯಾನಿ, ಬಾಳೇಕಾಯಿ ಬಜ್ಜಿ..ಇದೇ ಮೇಕೆದಾಟು ಪಾದಯಾತ್ರೆ: ಎಚ್‌ಡಿಕೆ ವ್ಯಂಗ್ಯ

ಬಿ.ಕೆ. ಹರಿಪ್ರಸಾದ್ ಹೇಳಿಕೆ:

ಬಿ.ಕೆ. ಹರಿಪ್ರಸಾದ್ ಹೇಳಿಕೆ:

'ನಮ್ಮ ನೀರು ನಮ್ಮ ಹಕ್ಕು ಎಂದು ಆರಂಭವಾಗಿರುವ ಮೇಕೆದಾಟು ಪಾದಯಾತ್ರೆಯ ಮೊದಲ ಹಂತವನ್ನು ನಾವು ರಾಮನಗರದವರೆಗೂ ಮಾಡಿದ್ದೆವು. ನಾಳೆಯಿಂದ ಎರಡನೇ ಹಂತ ಆರಂಭವಾಗಲಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೆವಾಲಾ ಉದ್ಘಾಟನೆ ಮಾಡಲಿದ್ದಾರೆ' ಎಂದು ಬಿ.ಕೆ. ಹರಿಪ್ರಸಾದ್ ಹೇಳಿದರು.

ಬೆಂಗಳೂರು, ದಕ್ಷಿಣ ಏಷ್ಯಾದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರ. ಈ ನಗರಕ್ಕೆ 2050ರ ವೇಳೆಗೆ ಕುಡಿಯುವ ನೀರು ಅಭಾವ ತಲೆದೋರಲಿದೆ. ಕಾವೇರಿ ಏಳನೇ ಹಂತ ಬಂದರೂ 7 ಸಾವಿರ ಅಪಾರ್ಟ್‌ಮೆಂಟ್‌ಗಳಿಗೆ ನೀರು ಸಿಗುತ್ತಿಲ್ಲ. ಹೀಗಾಗಿ ಕಾಂಗ್ರೆಸ್ ಸದಾ ಜನಪರ ಕಾರ್ಯಕ್ರಮ ಹಮ್ಮಿಕೊಂಡು ಜನರ ಪರವಾಗಿ ಹೋರಾಡುತ್ತಿದೆ. ಜನಸಾಮಾನ್ಯರು ಈ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಈ ಮೂಲಕ ಕೋರುತ್ತೇನೆ ಎಂದರು.

ವಿದೇಶಾಂಗ ನೀತಿಯಲ್ಲಿ ಮೋದಿ ವಿಫಲ:

ವಿದೇಶಾಂಗ ನೀತಿಯಲ್ಲಿ ಮೋದಿ ವಿಫಲ:

ಉಕ್ರೇನ್ ಹಾಗೂ ರಷ್ಯಾ ವಿರುದ್ಧದ ಸಮರ ವಿಚಾರವಾಗಿ ಕೇಳಿದ ಪ್ರಶ್ನೆಗೆ, 'ನರೇಂದ್ರ ಮೋದಿ ಅವರ ಸರ್ಕಾರ ವಿದೇಶಾಂಗ ನೀತಿಯಲ್ಲಿ ಸಂಪೂರ್ಣ ವಿಫಲವಾಗಿದೆ. ಹಿಂದೆ ಅಲಿಪ್ತ ರಾಷ್ಟ್ರಗಳ ಕೂಟದ ನೇತೃತ್ವ ವಹಿಸಿದ್ದ ನೆಹರೂ ಅವರ ವಿದೇಶಾಂಗ ನೀತಿಯನ್ನು ಇಂದು ಎಲ್ಲರು ನೆನಪಿಸಿಕೊಳ್ಳುತ್ತಿದ್ದಾರೆ. ದಿನಬೆಳಗಾದರೆ ಪಂಡಿತ್ ನೆಹರೂ ಅವರ ಬಗ್ಗೆ ಮಾತನಾಡುವ ಸಂಘ ಪರಿವಾರದವರು, ಬಿಜೆಪಿ, ಮೋದಿ ಅವರಿಗೆ ಅಲಿಪ್ತ ರಾಷ್ಟ್ರಗಳ ನೀತಿ ಏನು ಎಂದು ಎಲ್ಲರಿಗೂ ಅರ್ಥವಾಗುತ್ತಿದೆ ಎಂದು ಹರಿಪ್ರಸಾದ್ ಟೀಕಿಸಿದರು.


ಉಕ್ರೇನ್ ಹಾಗೂ ರಷ್ಯಾ ನಡುವೆ ಯುದ್ಧದ ಕಾರ್ಮೋಡ ಕಳೆದ ಒಂದು ತಿಂಗಳಿಂದ ಆವರಿಸಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ನಮ್ಮವರನ್ನು ಅಲ್ಲಿಂದ ಕರೆತರಬೇಕಾಗಿತ್ತು. ಯಾವುದೇ ಕ್ರಮ ಕೈಗೊಳ್ಳದ ಕಾರಣ, ಸಂಕಷ್ಟ ಪಡುವಂತಾಗಿದೆ. ಮುನ್ನೆಚ್ಚರಿಕೆ ಇಲ್ಲದೆ ಲಾಕ್‌ಡೌನ್ ಮಾಡಿದಂತೆ ಈಗ ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡಿದಂತೆ ಈಗ ಪರದಾಡುತ್ತಿದ್ದಾರೆ. ಕೇಂದ್ರದ ವಿದೇಶಾಂಗ ನೀತಿ ಸಂಪೂರ್ಣ ವಿಫಲವಾಗಿದೆ ಎಂಬುದು ಈ ಮೂಲಕ ತಿಳಿಯುತ್ತದೆ' ಎಂದು ಉತ್ತರಿಸಿದರು.

ಮೇಕೆದಾಟು ಪಾದಯಾತ್ರೆ ವಿವರ:

ಮೇಕೆದಾಟು ಪಾದಯಾತ್ರೆ ವಿವರ:

27.02.2022 ಭಾನುವಾರ

ಸ್ಥಳ: ರಾಮನಗರದಿಂದ ಬಿಡದಿವರೆಗೂ

28.02.2022 ಸೋಮವಾರ

ಸ್ಥಳ : ಬಿಡದಿಯಿಂದ ಕೆಂಗೇರಿ (ಪೂರ್ಣಿಮ ಕನ್ವೆಂಷನ್ ಹಾಲ್)

01.03.2022 ಮಂಗಳವಾರ

ಸ್ಥಳ:ಕೆಂಗೇರಿ( ಪೂರ್ಣಿಮ ಕನ್ವೆಂಷನ್ ಹಾಲ್ ನಿಂದ ಅದ್ವೈತ್ ಪೆಟ್ರೋಲ್ ಬಂಕ್ ವರೆಗೂ

02.03.2022 ಬುಧವಾರ

ಸ್ಥಳ :ಅದ್ವೈತ್ ಪೆಟ್ರೋಲ್ ಬಂಕ್ ನಿಂದ ಅರಮನೆ ಮೈದಾನದವರೆಗೂ

03.03.2022 ಗುರುವಾರ

ಅರಮನೆ ಮೈದಾನ (ಗಾಯತ್ರಿ ಗ್ರ್ಯಾಂಡ್ ನಿಂದ) ನ್ಯಾಷನಲ್ ಕಾಲೇಜು ಮೈದಾನ

Recommended Video

ಭಾರತದ ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕೆ ಉಕ್ರೇನ್‌‌ನ್ನು ಯಾಕೆ ಆಯ್ಕೆ ಮಾಡಿಕೊಳ್ತಾರೆ? | Oneindia Kannada

English summary
The 'Meekadatu Padayatra', which was halted due to Corona 3rd wave. 5 days padayatre resume on Sunday (Feb 27).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X