ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇಕೆದಾಟು ಯೋಜನೆ; ಸರ್ವಪಕ್ಷಗಳ ಸಭೆ ಕರೆಯಲಿದ್ದಾರೆ ಸಿಎಂ

|
Google Oneindia Kannada News

ಬೆಂಗಳೂರು, ಆಗಸ್ಟ್ 02; ಕರ್ನಾಟಕದ ಸರ್ಕಾರದ ಪ್ರಸ್ತಾವಿತ ಮೇಕೆದಾಟು ಯೋಜನೆಗೆ ತಮಿಳುನಾಡು, ಪುದುಚೇರಿ ಸರ್ಕಾರಗಳು ವಿರೋಧ ವ್ಯಕ್ತಪಡಿಸುತ್ತಿದೆ. ಯಾರು ವಿರೋಧ ಮಾಡಿದರೂ ಯೋಜನೆ ಜಾರಿಗೊಳಿಸುತ್ತೇವೆ ಎಂದು ಕರ್ನಾಟಕ ಹೇಳುತ್ತಿದೆ.

ಕೇಂದ್ರದಲ್ಲಿ ನಿಮ್ಮದೇ ಸರ್ಕಾರವಿದೆ. ಕೇಂದ್ರ ಸರ್ಕಾರದ ಒಪ್ಪಿಗೆ ಪಡೆದು ಮೇಕೆದಾಟು ಯೋಜನೆಯನ್ನು ಜಾರಿಗೊಳಿಸಿ ಎಂದು ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಿವೆ. ಕಾವೇರಿಕೊಳ್ಳದಲ್ಲಿ ಕೈಗೊಳ್ಳಬೇಕಾದ ಯೋಜನೆಯಾದ್ದರಿಂದ ಅಕ್ಕ-ಪಕ್ಕದ ರಾಜ್ಯಗಳ ಒಪ್ಪಿಗೆ ಅನಿವಾರ್ಯವಾಗಿದೆ.

 ಯಾರೇ ಅಡ್ಡಿ ಬಂದರೂ ಮೇಕೆದಾಟು ಯೋಜನೆ ನಿಲ್ಲುವುದಿಲ್ಲ: ಸಿಎಂ ಬೊಮ್ಮಾಯಿ ಯಾರೇ ಅಡ್ಡಿ ಬಂದರೂ ಮೇಕೆದಾಟು ಯೋಜನೆ ನಿಲ್ಲುವುದಿಲ್ಲ: ಸಿಎಂ ಬೊಮ್ಮಾಯಿ

ನೀರಾವರಿ ಸಚಿವರೂ ಆಗಿದ್ದ ಬಸವರಾಜ ಬೊಮ್ಮಾಯಿ ಈಗ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾರೆ. ಆದ್ದರಿಂದ ಮೇಕೆದಾಟು ಸೇರಿದಂತೆ ಇತರ ನೀರಾವರಿ ಯೋಜನೆಗಳ ಜಾರಿ ಕುರಿತು ರಾಜ್ಯದ ಜನರಲ್ಲಿಯೂ ನಿರೀಕ್ಷೆ ಇದೆ. ಈಗಾಗಲೇ ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್‌ರನ್ನು ಮುಖ್ಯಮಂತ್ರಿಗಳು ಭೇಟಿ ಮಾಡಿದ್ದಾರೆ.

ಮೇಕೆದಾಟು ಯೋಜನೆ ವಿರೋಧಿಸಿ ಕೆ. ಅಣ್ಣಾಮಲೈ ಉಪವಾಸ ಮೇಕೆದಾಟು ಯೋಜನೆ ವಿರೋಧಿಸಿ ಕೆ. ಅಣ್ಣಾಮಲೈ ಉಪವಾಸ

ತಮಿಳುನಾಡು ಬಿಜೆಪಿ ಎಂ. ಕೆ. ಸ್ಟಾಲಿನ್ ಸರ್ಕಾರಕ್ಕೆ ಮೇಕೆದಾಟು ಯೋಜನೆ ವಿಚಾರದಲ್ಲಿ ಬೆಂಬಲ ನೀಡಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಯೋಜನೆ ವಿರೋಧಿಸಿ ಕರ್ನಾಟಕ ಸರ್ಕಾರದ ವಿರುದ್ಧ ಆಗಸ್ಟ್ 5ರಂದು ಉಪವಾಸ ಸತ್ಯಾಗ್ರಹವನ್ನು ನಡೆಸುವುದಾಗಿ ಘೋಷಣೆ ಮಾಡಿದ್ದಾರೆ.

ಕರ್ನಾಟಕ ಮೇಕೆದಾಟು ಅಣೆಕಟ್ಟು ನಿರ್ಮಿಸಲು ಸಾಧ್ಯವಿಲ್ಲ; ತಮಿಳುನಾಡು ಸಚಿವಕರ್ನಾಟಕ ಮೇಕೆದಾಟು ಅಣೆಕಟ್ಟು ನಿರ್ಮಿಸಲು ಸಾಧ್ಯವಿಲ್ಲ; ತಮಿಳುನಾಡು ಸಚಿವ

ಸರ್ವಪಕ್ಷಗಳ ಸಭೆ ಕರೆಯಲಾಗುತ್ತದೆ

ಸರ್ವಪಕ್ಷಗಳ ಸಭೆ ಕರೆಯಲಾಗುತ್ತದೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. "ಮೇಕೆದಾಟು ಯೋಜನೆ ವಿಚಾರದಲ್ಲಿ ಮುಂದಿನ ದಿನಗಳಲ್ಲಿ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗುತ್ತದೆ. ನೆಲ, ಜಲ ಮತ್ತು ಭಾಷೆಯ ವಿಚಾರಗಳು ಬಂದಾಗ ಎಲ್ಲಾ ಪಕ್ಷಗಳು ಒಟ್ಟಾಗಿ ಸಾಗಬೇಕಾಗುತ್ತದೆ" ಎಂದು ಹೇಳಿದ್ದಾರೆ.

ಕುಮಾರಸ್ವಾಮಿ ಆತಂಕದ ಬಗ್ಗೆ ತಿಳಿದಿದೆ

ಕುಮಾರಸ್ವಾಮಿ ಆತಂಕದ ಬಗ್ಗೆ ತಿಳಿದಿದೆ

'ಅಣೆಕಟ್ಟು ನಿರ್ಮಾಣ ಮಾಡಿಯೇ ತೀರುತ್ತೇವೆ ಎಂದು ಹೇಳುತ್ತಿದ್ದ ಯಡಿಯೂರಪ್ಪ ಅವರು ಕೇಂದ್ರ ಸರ್ಕಾರದ ಅನುಮತಿ ಪಡೆಯಲಿಲ್ಲ. ಈಗ ಬೊಮ್ಮಾಯಿ ಅವರೂ ಯೋಜನೆ ಜಾರಿ ಮಾಡುತ್ತೇವೆ ಎನ್ನುತ್ತಿದ್ದಾರೆ. ಇವೆಲ್ಲ ಮಾತಿನಲ್ಲೇ ಉಳಿಯಬಾರದು.ಕೇಂದ್ರದ ಬಳಿಗೆ ಹೋಗಿ ಅನುಮತಿ ಪಡೆಯಲು ಪ್ರಯತ್ನಿಸಬೇಕು.ಈ ಕಾರ್ಯವನ್ನು ಜೆಡಿಎಸ್‌ ಯಾವಾಗಲೂ ಬೆಂಬಲಿಸುತ್ತದೆ' ಎಂದು ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು.

"ಯೋಜನೆ ವಿಚಾರದಲ್ಲಿ ಕುಮಾರಸ್ವಾಮಿ ಅವರ ಆತಂಕ ಏನು ಎಂಬುದು ತಿಳಿದಿದೆ" ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಯೋಜನೆಗಳ ವಿಚಾರದಲ್ಲಿ ಬದ್ಧತೆ ಇದ್ದರೆ

ಯೋಜನೆಗಳ ವಿಚಾರದಲ್ಲಿ ಬದ್ಧತೆ ಇದ್ದರೆ

'ಮೇಕೆದಾಟು, ಕೃಷ್ಣಾ, ಮಹದಾಯಿ ಯೋಜನೆಗಳಿಗೆ ಅನುಮತಿ ನೀಡಲು ಆಗ್ರಹಿಸಿ ಜೆಡಿಎಸ್‌ ರಾಜ್ಯಪಾಲರ ಮೂಲಕ ರಾಷ್ಟ್ರಪತಿ, ಪ್ರಧಾನಿಗೆ ಮನವಿ ಸಲ್ಲಿಸಿದೆ. ಈ ವಿಚಾರವಾಗಿ ಪ್ರಧಾನಿಯನ್ನೂ ಭೇಟಿಯಾಗಲು ನಿರ್ಧರಿಸಿದ್ದೇವೆ. ರಾಜ್ಯವನ್ನು ಆಳುತ್ತಿರುವ ಬಿಜೆಪಿಗೆ ಈ ಯೋಜನೆಗಳ ವಿಚಾರದಲ್ಲಿ ಬದ್ಧತೆ ಇದ್ದರೆ ಕೇಂದ್ರದ ಮೇಲೆ ಒತ್ತಡ ಹಾಕಿ ಅನುಮತಿ ತರಲಿ' ಎಂದು ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಏನಿದು ಮೇಕೆದಾಟು ಯೋಜನೆ?

ಏನಿದು ಮೇಕೆದಾಟು ಯೋಜನೆ?

ಸುಮಾರು 9000 ಕೋಟಿ ವೆಚ್ಚದಲ್ಲಿ ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣ ಮಾಡಿ 4.75 ಟಿಎಂಸಿ ಅಡಿ ನೀರನ್ನು ಕುಡಿಯುವ ನೀರಿನ ಉದ್ದೇಶಕ್ಕೆ ಬಳಕೆ ಮಾಡಿಕೊಳ್ಳುವುದು ಪ್ರಸ್ತಾವಿತ ಯೋಜನೆಯಾಗಿದೆ. ಬೆಂಗಳೂರು ನಗರ ಮತ್ತು ಅಕ್ಕಪಕ್ಕದ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವುದು ಯೋಜನೆ ಉದ್ದೇಶವಾಗಿದೆ. ಆದರೆ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಾಣ ಮಾಡುವ ಪ್ರಸ್ತಾವನೆಗೆ ತಮಿಳುನಾಡು ಸರ್ಕಾರ ವಿರೋಧವನ್ನು ವ್ಯಕ್ತಪಡಿಸುತ್ತಿದೆ.

Recommended Video

ದೆಹಲಿಯಲ್ಲೇ ಬೀಡುಬಿಟ್ಟಿರುವ ಬಸವರಾಜ್ ಬೊಮ್ಮಾಯಿ! | Oneindia Kannada
ತಮಿಳುನಾಡು ಸರ್ಕಾರದ ಕ್ಯಾತೆ ಏಕೆ?

ತಮಿಳುನಾಡು ಸರ್ಕಾರದ ಕ್ಯಾತೆ ಏಕೆ?

ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿಯೂ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದೆ. ಕರ್ನಾಟಕ ಸರ್ಕಾರ ಪ್ರಸ್ತಾವಿತ ಯೋಜನೆಯಂತೆ ಅಣೆಕಟ್ಟು ನಿರ್ಮಾಣ ಮಾಡಿದರೆ ತಮಿಳುನಾಡಿನ ಪಾಲಿನ ಕಾವೇರಿ ನೀರಿನ ಹರಿವಿಗೆ ಕೊರತೆ ಉಂಟಾಗಲಿದೆ ಎಂಬುದು ರಾಜ್ಯದ ವಾದ, ಅದಕ್ಕಾಗಿ ಯೋಜನೆಗೆ ಕ್ಯಾತೆ ತೆಗೆಯುತ್ತಿದೆ.

English summary
Karnataka chief minister Basavaraj Bommai said he would convene an all-party meeting in the issue of Mekedatu dam. Tamil Nadu government opposing the Karnataka government proposed project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X