Get Updates
Get notified of breaking news, exclusive insights, and must-see stories!

Mekedatu Dam: ಪ್ರತಿಭಟನೆಯ ಎಚ್ಚರಿಕೆ ನೀಡಿದ ಎಐಎಡಿಎಂಕೆ

ಚೆನ್ನೈ, ಜೂನ್‌ 1: ತಮಿಳುನಾಡಿನ ವಿರೋಧ ಪಕ್ಷ ಎಐಎಡಿಎಂಕೆಯು ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾದರೆ ಪ್ರತಿಭಟನೆ ನಡೆಸುವುದಾಗಿ ಕರ್ನಾಟಕಕ್ಕೆ ಗುರುವಾರ ಎಚ್ಚರಿಕೆ ನೀಡಿದೆ.

ಕರ್ನಾಟಕದ ಈ ಕ್ರಮ ತಮಿಳುನಾಡನ್ನು ಮರುಭೂಮಿಯನ್ನಾಗಿ ಪರಿವರ್ತಿಸುವ ಪ್ರಯತ್ನವಾಗಿದೆ ಎಂದು ಎಐಎಡಿಎಂಕೆ ಆರೋಪಿಸಿದೆ. ಕಾವೇರಿ ನದಿಗೆ ಅಡ್ಡಲಾಗಿ ಜಲಾಶಯದ ಯೋಜನೆಗೆ ಮುಂದಾಗಿರುವ ಕರ್ನಾಟಕ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ವರದಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ತಮಿಳುನಾಡು ವಿರೋಧ ಪಕ್ಷದ ನಾಯಕ ಕೆ ಪಳನಿಸ್ವಾಮಿ, ನೆರೆಯ ರಾಜ್ಯಗಳು ಕೆಳ ನದಿಯ ರಾಜ್ಯಗಳ ಹಿತಾಸಕ್ತಿ ವಿರುದ್ಧವಾಗಿ ವರ್ತಿಸಬಾರದು ಎಂದು ಹೇಳಿದರು.

Mekedatu Dam

ಅಂತರ ರಾಜ್ಯ ನದಿ ನೀರಿನ ವಿವಾದಗಳ ಕಾಯಿದೆ 1956 ರ ಪ್ರಕಾರ, ಕರ್ನಾಟಕವು ನದಿಯ ನೈಸರ್ಗಿಕ ಮಾರ್ಗವನ್ನು ತಡೆಯುವ ಅಥವಾ ಬದಲಾಯಿಸುವ ಹಕ್ಕನ್ನು ಹೊಂದಿಲ್ಲ. ಕಾವೇರಿ ಜಲವಿವಾದದ ಅಂತಿಮ ತೀರ್ಪಿನಲ್ಲಿಯೂ ಸಹ ನದಿಯ ಕೆಳಭಾಗದ ರಾಜ್ಯಗಳ ಅನುಮೋದನೆಯಿಲ್ಲದೆ ಯಾವುದೇ ನೀರಾವರಿ ಯೋಜನೆಯನ್ನು ಕೈಗೆತ್ತಿಕೊಳ್ಳಬಾರದು ಎಂಬುದು ಸ್ಪಷ್ಟವಾಗಿದೆ ಎಂದು ಪಳನಿಸ್ವಾಮಿ ತಿಳಿಸಿದ್ದಾರೆ.

ಹೀಗಿರುವಾಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಘೋಷಣೆ ತಮಿಳುನಾಡಿನ ಹಿತಾಸಕ್ತಿಗೆ ವಿರುದ್ಧವಾಗಿದೆ. ಮೇಕೆದಾಟು ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸುವ ಯಾವುದೇ ಕ್ರಮವು ನೀರಾವರಿ ಮತ್ತು ಕುಡಿಯಲು ಕಾವೇರಿ ನೀರನ್ನು ಅವಲಂಬಿಸಿರುವ ತಮಿಳುನಾಡನ್ನು ಮರುಭೂಮಿಯನ್ನಾಗಿ ಪರಿವರ್ತಿಸುತ್ತದೆ ಎಂದು ಅವರು ಪ್ರತಿಪಾದಿಸಿದರು.

ಕಾವೇರಿ ವಿಚಾರದಲ್ಲಿ ಇಲ್ಲಿ ಆಡಳಿತಾರೂಢ ಡಿಎಂಕೆಯನ್ನು ಅವಲಂಬಿಸುವುದರಲ್ಲಿ ಅರ್ಥವಿಲ್ಲ. ಮೇಕೆದಾಟು ಎಂಬಲ್ಲಿ ಅಣೆಕಟ್ಟು ನಿರ್ಮಿಸುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಪ್ರಯತ್ನವನ್ನು ಎಐಎಡಿಎಂಕೆ ತೀವ್ರವಾಗಿ ಖಂಡಿಸುತ್ತದೆ. ತಮಿಳುನಾಡು ಮರುಭೂಮಿಯಾಗುವುದನ್ನು ತಡೆಯಲು ಎಐಎಡಿಎಂಕೆ ಪ್ರತಿಭಟನೆಗಳನ್ನು ಆಯೋಜಿಸುತ್ತದೆ ಎಂದು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ ಎಂದು ಪಳನಿಸ್ವಾಮಿ ಹೇಳಿದರು.

ತಮಿಳುನಾಡು ಸಿಪಿಐ ರಾಜ್ಯ ಕಾರ್ಯದರ್ಶಿ ಆರ್ ಮುತರಸನ್ ಕೂಡ ಮೇಕೆದಾಟು ಅಣೆಕಟ್ಟು ನಿರ್ಮಿಸುವ ಪ್ರಯತ್ನವನ್ನು ಖಂಡಿಸಿದ್ದು, ಕಾವೇರಿ ವಿವಾದದ ಅಂತಿಮ ತೀರ್ಪಿನಲ್ಲಿ ಕೇರಳ, ಪುದುಚೇರಿ ಮತ್ತು ತಮಿಳುನಾಡು ಅನುಮೋದನೆಯಿಲ್ಲದೆ ಕಾವೇರಿ ನದಿಗೆ ಅಡ್ಡಲಾಗಿ ಯಾವುದೇ ನಿರ್ಮಾಣವನ್ನು ಕೈಗೊಳ್ಳಬಾರದು ಎಂದು ಆಗ್ರಹಿಸಿದ್ದಾರೆ.

ಮೇಕೆದಾಟು ಎಂಬಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಜಲಾಶಯ ನಿರ್ಮಾಣಕ್ಕೆ ಮುಂದಾಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ತಮಿಳುನಾಡು ಸರ್ಕಾರವೂ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ನೆರೆಯ ರಾಜ್ಯಕ್ಕೆ ನೀರಿನ ವಿಚಾರವಾಗಿ ತೆಗೆದುಕೊಂಡಿರುವ ನಿಲುವಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಕಾವೇರಿ ವಿವಾದ ನ್ಯಾಯಾಧಿಕರಣದ ಆದೇಶ ಅಥವಾ ಸುಪ್ರೀಂ ಕೋರ್ಟ್‌ನ ಅಂತಿಮ ತೀರ್ಪಿನಲ್ಲಿ ಕರ್ನಾಟಕದ ಉದ್ದೇಶಿತ ಯೋಜನೆ ಯಾವುದೇ ಉಲ್ಲೇಖವನ್ನು ಹೊಂದಿಲ್ಲ ಎಂದು ಜಲಸಂಪನ್ಮೂಲ ರಾಜ್ಯ ಸಚಿವ ದುರೈಮುರುಗನ್ ಬುಧವಾರ ಶಿವಕುಮಾರ್ ಅವರಿಗೆ ಒತ್ತಿ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+