ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇಕೆದಾಟು ಯೋಜನೆ : ಕೇಂದ್ರದ ವಿರುದ್ಧ ಡಿಕೆಶಿ ಅಸಮಾಧಾನ!

|
Google Oneindia Kannada News

ಬೆಂಗಳೂರು, ಆಗಸ್ಟ್ 09 : ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ಮಾತುಕತೆ ಆರಂಭವಾಗಿದೆ. ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೇಕೆದಾಟು ಯೋಜನೆ ಬಗ್ಗೆ ಮರು ಪರಿಶೀಲನೆ ನಡೆಸುವಂತೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಸೂಚನೆ ನೀಡಿದೆ. "ಕೇಂದ್ರದ ಸೂಚನೆ ಹಿಂದೆ ದುರುದ್ದೇಶ ಅಡಗಿದೆ. ಇದರ ವಿರುದ್ಧ ಬೃಹತ್ ಹೋರಾಟ ರೂಪಿಸಲಾಗುತ್ತದೆ" ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

ಮೇಕೆದಾಟು ಯೋಜನೆ : ಕರ್ನಾಟಕ ಸರ್ಕಾರದಿಂದ ಡಿಪಿಆರ್‌ ಸಲ್ಲಿಕೆಮೇಕೆದಾಟು ಯೋಜನೆ : ಕರ್ನಾಟಕ ಸರ್ಕಾರದಿಂದ ಡಿಪಿಆರ್‌ ಸಲ್ಲಿಕೆ

ಈ ಹಿಂದೆ ಕೇಂದ್ರ ಜಲ ಆಯೋಗ ನೀಡಿದ ಸೂಚನೆಯಂತೆ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆ ಕುರಿತು ವಿಸ್ತ್ರತ ಯೋಜನಾ ವರದಿಯನ್ನು ಆಯೋಗದ ಮೌಲ್ಯಮಾಪನ ಮುಖ್ಯ ಇಂಜಿನಿಯರ್‌ಗೆ ಸಲ್ಲಿಕೆ ಮಾಡಿತ್ತು.

ಮೇಕೆದಾಟುವಿನಲ್ಲಿ ಜಲಾಶಯ ನಿರ್ಮಾಣಕ್ಕೆ ಒಪ್ಪಿಗೆ ನೀಡಿಲ್ಲ : ಕೇಂದ್ರ ಸರ್ಕಾರಮೇಕೆದಾಟುವಿನಲ್ಲಿ ಜಲಾಶಯ ನಿರ್ಮಾಣಕ್ಕೆ ಒಪ್ಪಿಗೆ ನೀಡಿಲ್ಲ : ಕೇಂದ್ರ ಸರ್ಕಾರ

ಈ ಯೋಜನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸುತ್ತಿದೆ. ಕರ್ನಾಟಕ ಸರ್ಕಾರ ಯೋಜನೆಯ ಡಿಪಿಆರ್‌ ಅನ್ನು ತಮಿಳುನಾಡು, ಪುದುಚೇರಿ ಮತ್ತು ಕೇರಳ ರಾಜ್ಯಗಳಿಗೂ ಸಲ್ಲಿಕೆ ಮಾಡಿದೆ. ಈಗ ಕೇಂದ್ರ ಸರ್ಕಾರ ಯೋಜನೆ ಮರು ಪರಿಶೀಲನೆ ಮಾಡಬೇಕು ಎಂದು ಕರ್ನಾಟಕಕ್ಕೆ ಸೂಚನೆ ಕೊಟ್ಟಿದೆ.

ಚಿತ್ರಗಳು : ಮೇಕೆದಾಟುಗೆ ಸಚಿವ ಡಿ.ಕೆ.ಶಿವಕುಮಾರ್ ಭೇಟಿಚಿತ್ರಗಳು : ಮೇಕೆದಾಟುಗೆ ಸಚಿವ ಡಿ.ಕೆ.ಶಿವಕುಮಾರ್ ಭೇಟಿ

ಡಿ. ಕೆ. ಶಿವಕುಮಾರ್ ಹೇಳಿದ್ದೇನು?

ಡಿ. ಕೆ. ಶಿವಕುಮಾರ್ ಹೇಳಿದ್ದೇನು?

"ಮೇಕೆದಾಟು ಯೋಜನೆಯ ಬಗ್ಗೆ ಕರ್ನಾಟಕ ಸರ್ಕಾರ 40 ವರ್ಷಗಳ ಹಿಂದೆಯೇ ತೀರ್ಮಾನ ತೆಗೆದುಕೊಂಡಿದೆ. ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿಗೆ ಅನುಕೂಲವಾಗುವ ಈ ಯೋಜನೆಗೆ ಈಗಾಗಲೇ ಸ್ಥಳ ನಿಗದಿ ಮಾಡಲಾಗಿದೆ. ಸಮುದ್ರಪಾಲಾಗುವ ನೀರನ್ನು ಅಣೆಕಟ್ಟೆಯಲ್ಲಿ ಸಂಗ್ರಹಿಸಿ ವಿದ್ಯುತ್ ಉತ್ಪಾದನೆ ಹಾಗೂ ಸ್ಪಲ್ಪ ಪ್ರಮಾಣದಲ್ಲಿ ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಉದ್ದೇಶ ಯೋಜನೆಯದ್ದಾಗಿದೆ" ಎಂದು ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.

ತಮಿಳುನಾಡು ಸರ್ಕಾರದ ವಾದ

ತಮಿಳುನಾಡು ಸರ್ಕಾರದ ವಾದ

ಮೇಕೆದಾಟು ಯೋಜನೆ ಜಾರಿಗೊಂಡರೆ ತಮಿಳುನಾಡಿಗೆ ಹರಿದು ಬರುವ ನೀರಿನ ಪ್ರಮಾಣ ಕಡಿಮೆಯಾಗಲಿದೆ ಎಂಬುದು ರಾಜ್ಯ ಸರ್ಕಾರದ ವಾದವಾಗಿದೆ. ಆದ್ದರಿಂದ, ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದೆ. ಈ ಬಗ್ಗೆ ಸುಪ್ರೀಂಕೋರ್ಟ್ ಮೇಟ್ಟಿಲೇರಿದೆ, ಪ್ರಧಾನಿ ನರೇಂದ್ರ ಮೋದಿಗೂ ಪತ್ರ ಬರೆದಿದೆ.

ಕೇಂದ್ರ ಸರ್ಕಾರ ಹೇಳುವುದೇನು?

ಕೇಂದ್ರ ಸರ್ಕಾರ ಹೇಳುವುದೇನು?

ಮೇಕೆದಾಟುವಿನಲ್ಲಿ ಜಲಾಶಯ ನಿರ್ಮಾಣಕ್ಕೆ ಒಪ್ಪಿಗೆ ನೀಡಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದೆ. ಯೋಜನೆಗೆ ಸಂಬಂಧಿಸಿದಂತೆ ವಿವರ ಯೋಜನಾ ವರದಿ (ಡಿಪಿಆರ್) ತಯಾರಿ ಮಾಡಲು ಮಾತ್ರ ಒಪ್ಪಿಗೆ ನೀಡಲಾಗಿದೆ ಎಂದು ಕೇಂದ್ರ ಹೇಳಿದೆ.

ಯೋಜನೆಯ ವಿವರಗಳು

ಯೋಜನೆಯ ವಿವರಗಳು

ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣ ಮಾಡಿ ವಿದ್ಯುತ್ ಉತ್ಪಾದನೆ ಮತ್ತು ಕುಡಿಯುವ ನೀರಿನ ಯೋಜನೆ ಕೈಗೊಳ್ಳುವುದು ಕರ್ನಾಟಕ ಸರ್ಕಾರದ ಉದ್ದೇಶವಾಗಿದೆ. ಯೋಜನೆ ಪೂರ್ಣಗೊಂಡರೆ 400 ಮೆಗಾವಾಟ್ ವಿದ್ಯುತ್ ಮತ್ತು ಬೆಂಗಳೂರಿಗೆ 17 ಟಿಎಂಸಿ ನೀರು ಸಿಗಲಿದೆ ಎಂದು ಕರ್ನಾಟಕ ಹೇಳಿದೆ.

English summary
Former minister of Karnataka D.K.Shivakumar upset with union government. Govt directed Karnataka to reconsider Mekedatu project. Tamil Nadu opposing for project.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X