ಮೇಕೆದಾಟು ಯೋಜನೆ ಜಾರಿಗೆ ಕೇಂದ್ರದ ಮೇಲೆ ಕರ್ನಾಟಕ ಒತ್ತಡ

ಬೆಂಗಳೂರು, ಆಗಸ್ಟ್ 31 : ಮೇಕೆದಾಟು ಯೋಜನೆ ಜಾರಿಗೊಳಿಸಲು ಅನುಮತಿ ನೀಡುವಂತೆ ಕರ್ನಾಟಕ ಸರ್ಕಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಿದೆ. ಯೋಜನೆ ಜಾರಿಗೊಳಿಸಬಾರದು ಎಂದು ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಈ ಕುರಿತು ಮಾಹಿತಿ ನೀಡಿದ್ದಾರೆ. 'ತಮಿಳುನಾಡಿಗೆ ಇದುವರೆಗೆ ನಾವು 310 ಟಿಎಂಸಿ ಅಡಿ ನೀರು ಹರಿಸಿದ್ದೇವೆ. ವಾರ್ಷಿಕ ನೀಡಬೇಕಾಗಿರುವುದು 177.25 ಟಿಎಂಸಿ. ನಮಗೆ ನೀರು ಸಂಗ್ರಹ ಮಾಡಲು ಇಲ್ಲಿ ಯಾವುದೇ ವ್ಯವಸ್ಥೆ ಇಲ್ಲ' ಎಂದು ಹೇಳಿದ್ದಾರೆ.

'ಹೆಚ್ಚುವರಿ ನೀರನ್ನು ಹರಿಸಿದರೆ ಅದರಿಂದ ತಮಿಳುನಾಡು ರಾಜ್ಯಕ್ಕೂ ಉಪಯೋಗವಿಲ್ಲ. ನೀರು ವ್ಯರ್ಥವಾಗಿ ಸಮುದ್ರಕ್ಕೆ ಹರಿದು ಹೋಗುತ್ತದೆ. ಆದಕ್ಕೆ ಬದಲು ಮೇಕೆದಾಟು ಯೋಜನೆ ಜಾರಿಗೊಳಿಸಿದರೆ ಅಲ್ಲಿ ನೀರನ್ನು ಸಂಗ್ರಹಿಸಬಹುದು' ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

Mekedatu project : Karnataka to put pressure on centre

'ಮೇಕೆದಾಟು ಯೋಜನೆ ಜಾರಿಗೊಳಿಸಿದರೆ ತಮಿಳುನಾಡಿಗೆ ಹರಿದು ಹೋಗುವ ನೀರಿನಲ್ಲಿ ಯಾವುದೇ ವ್ಯತ್ಯಾಸವಾಗುವುದಿಲ್ಲ. 64 ಟಿಎಂಸಿ ಅಡಿ ನೀರನ್ನು ಅಲ್ಲಿ ಸಂಗ್ರಹಿಸಿ, ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸಿಕೊಳ್ಳಬಹುದಾಗಿದೆ' ಎಂದು ಸಚಿವರು ವಿವರಣೆ ನೀಡಿದರು.

ಕಾನೂನಿನ ಪ್ರಕಾರ ಕರ್ನಾಟಕ ತಮಿಳುನಾಡಿಗೆ ಪ್ರತಿ ತಿಂಗಳು ಇಷ್ಟು ನೀರನ್ನು ಹರಿಸಬೇಕು. ಹೆಚ್ಚುವರಿ ನೀರನ್ನು ಹರಿಸಿದರೆ ಮುಂದಿನ ತಿಂಗಳನಲ್ಲಿ ಅದನ್ನು ಮಾನ್ಯ ಮಾಡುವುದಿಲ್ಲ. ಆದ್ದರಿಂದ, ಹೆಚ್ಚುವರಿ ನೀರನ್ನು ಮೇಕೆದಾಟುವಿನಲ್ಲಿ ಸಂಗ್ರಹಿಸಬಹುದಾಗಿದೆ.

'ಮೇಕೆದಾಟು ಯೋಜನೆ ನಮ್ಮ ಆದ್ಯತೆಯಾಗಿದೆ. ಆದ್ದರಿಂದ, ಯೋಜನೆ ಜಾರಿಗೊಳಿಸಲು ಅನುಮತಿ ನೀಡಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಲಾಗುತ್ತದೆ' ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

2013ರಲ್ಲಿ ಕರ್ನಾಟಕ ಮೊದಲು ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣ ಮಾಡುವ ಪ್ರಸ್ತಾಪ ಮುಂದಿಟ್ಟಿತ್ತು. ಮಳೆಗಾಲದ ಸಂದರ್ಭದಲ್ಲಿ ತಮಿಳುನಾಡಿಗೆ ಹರಿದು ಹೋಗುವ ನೀರನ್ನು ಸಂಗ್ರಹಿಸಿ ಮೈಸೂರು, ಬೆಂಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆ ಇದಾಗಿದೆ.

ಆದರೆ, ತಮಿಳುನಾಡು ಸರ್ಕಾರ ಈ ಯೋಜನೆ ವಿರೋಧಿಸುತ್ತಿದೆ. ಅಣೆಕಟ್ಟು ನಿರ್ಮಾಣವಾದರೆ ಹರಿದು ರಾಜ್ಯದಕ್ಕೆ ನೀರಿನ ಕೊರತೆ ಉಂಟಾಗಲಿದೆ ಎಂಬುದು ತಮಿಳುನಾಡಿನ ವಾದವಾಗಿದೆ. ಆದ್ದರಿಂದ, ಯೋಜನೆಗೆ ಇನ್ನೂ ಒಪ್ಪಿಗೆ ಸಿಕ್ಕಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+