ಮೇಕೆದಾಟು ವಿವಾದ; ಸಮಿತಿ ರಚಿಸಿದ್ದ ಆದೇಶಕ್ಕೆ ತಡೆ
ಬೆಂಗಳೂರು, ಜೂನ್ 18; ಮೇಕೆದಾಟು ಸ್ಥಳ ಪರಿಶೀಲನೆಗೆ ಸಮಿತಿ ರಚನೆ ಮಾಡಿ ದಕ್ಷಿಣ ಪೀಠ ನೀಡಿದ್ದ ಆದೇಶಕ್ಕೆ ಎನ್‌ಜಿಟಿ ಪ್ರಧಾನ ಪೀಠ ತಡೆ ನೀಡಿದೆ. ಕರ್ನಾಟಕ ಸರ್ಕಾರ ಚೆನ್ನೈನಲ್ಲಿರುವ ದಕ್ಷಿಣ ಪೀಠ ನೀಡಿದ್ದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಕೆ ಮಾಡಿತ್ತು.
ಕರ್ನಾಟಕ ಸರ್ಕಾರ ಮೇಕೆದಾಟು ಬಳಿ ಅಕ್ರಮವಾಗಿ ನಿರ್ಮಾಣ ಚಟುವಟಿಕೆ ನಡೆಸುತ್ತಿದೆ ಎಂಬ ಪತ್ರಿಕಾ ವರದಿ ಆಧರಿಸಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ಚೆನ್ನೈ ಪೀಠ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು.

ಅರ್ಜಿಯ ವಿಚಾರಣೆ ವೇಳೆ ನಿರ್ಮಾಣ ಚಟುವಟಿಕೆ ಬಗ್ಗೆ ಪರಿಶೀಲನೆ ನಡೆಸಲು ಜಂಟಿ ಸಮಿತಿಯನ್ನು ರಚನೆ ಮಾಡಿ ಮೇ 21ರಂದು ಆದೇಶ ಹೊರಡಿಸಿತ್ತು. ಕರ್ನಾಟಕ ಸರ್ಕಾರ ಎನ್‌ಜಿಜಿ ಪ್ರಧಾನ ಪೀಠದಲ್ಲಿ ಈ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಕೆ ಮಾಡಿತ್ತು.
ಎನ್‌ಜಿಟಿಯ ಚೆನ್ನೈ ಪೀಠ 2021ರ ಏಪ್ರಿಲ್ 15ರಂದು ಪತ್ರಿಕೆಗಳಲ್ಲಿ ಬಂದ ವರದಿ ಅನ್ವಯ ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡಿತ್ತು. ಅರ್ಜಿ ವಿಚಾರಣೆ ನಡೆಸುವಾಗ ಜಂಟಿ ಸಮಿತಿಯನ್ನು ರಚನೆ ಮಾಡಿ, ವರದಿ ನೀಡುವಂತೆ ಆದೇಶ ನೀಡಿತ್ತು.
ಕರ್ನಾಟಕ ಸರ್ಕಾರ ಪ್ರಧಾನ ಪೀಠಕ್ಕೆ ಈ ಕುರಿತು ಮೇಲ್ಮನವಿ ಸಲ್ಲಿಕೆ ಮಾಡಿತ್ತು. ರಾಜ್ಯದ ಪರವಾಗಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ವಾದ ಮಂಡಿಸಿದ್ದರು. ಎನ್‌ಜಿಟಿ ದಕ್ಷಿಣ ಪೀಠ ಸ್ವಯಂ ಪ್ರೇರಣೆಯಿಂದ ದೂರು ದಾಖಲಿಸಿಕೊಂಡು ವಿಚಾರಣೆ ನಡೆಸಲು ಅವಕಾಶವಿಲ್ಲ ಎಂದು ವಾದಿಸಿದ್ದರು.
ಮೇಕೆದಾಟು ಯೋಜನೆ ವಿರೋಧಿಸಿ ಈಗಾಗಲೇ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಅರ್ಜಿಯ ವಿಚಾರಣೆ ಇನ್ನೂ ಬಾಕಿ ಇದೆ. ಈ ಕುರಿತು ತಮಿಳುನಾಡು ಸರ್ಕಾರ ಕೇಂದ್ರ ಸರ್ಕಾರಕ್ಕೆ ಸಹ ಪತ್ರ ಬರೆದಿದೆ ಎಂದು ವಾದ ಮಂಡಿಸಿದ್ದರು.
ಕರ್ನಾಟಕ ಸರ್ಕಾರ ಮೇಕೆದಾಟು ಬಳಿ ಕಾವೇರಿ ನದಿಯ ಹೆಚ್ಚುವರಿ ನೀರನ್ನು ತಡೆದು ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಕ್ಕೆ ಕುಡಿಯುವ ನೀರು ಪೂರೈಕೆ ಮಾಡಲು ಯೋಜನೆ ರೂಪಿಸಿದೆ.
ಯೋಜನೆ ಸ್ಥಳದಲ್ಲಿ ಕಾಮಗಾರಿ ಆರಂಭಿಸಿಲ್ಲ. ಯಾವುದೇ ರೀತಿಯ ಅಕ್ರಮಕ್ಕೆ ಅವಕಾಶವಿಲ್ಲ ಎಂದು ಕರ್ನಾಟಕದ ಪರವಾಗಿ ವಾದ ಮಂಡಿಸಲಾಯಿತು. ವಾದ ಅಲಿಸಿದ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯೆಲ್ ನೇತೃತ್ವದ ಪ್ರಧಾನ ಪೀಠ ಚೆನ್ನೈ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿತು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications