ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇಕೆದಾಟು : ಆಕ್ಷೇಪಣೆ ಸಲ್ಲಿಸಲು ತಮಿಳುನಾಡಿಗೆ ಸುಪ್ರೀಂ ಸೂಚನೆ

|
Google Oneindia Kannada News

ಬೆಂಗಳೂರು, ಜನವರಿ 23 : ಮೇಕೆದಾಟು ಕುಡಿಯುವ ನೀರಿನ ಯೋಜನೆ ಬಗ್ಗೆ ಆಕ್ಷೇಪಣೆಗಳನ್ನು ಸಲ್ಲಿಸಿ ಎಂದು ಸುಪ್ರೀಂಕೋರ್ಟ್ ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳಿಗೆ ಸೂಚನೆ ನೀಡಿದೆ. ಎರಡೂ ರಾಜ್ಯಗಳು ಯೋಜನೆಯನ್ನು ವಿರೋಧಿಸುತ್ತಿವೆ.

ಮೇಕೆದಾಟು ಯೋಜನೆ ಕುರಿತು ಕರ್ನಾಟಕ ಸರ್ಕಾರವು ಕೇಂದ್ರ ಜಲ ಆಯೋಗಕ್ಕೆ ವಿಸ್ತ್ರತ ಯೋಜನಾ ವರದಿ (ಡಿಪಿಆರ್) ಸಲ್ಲಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂಕೋರ್ಟ್‌ ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳಿಗೆ ಸೂಚನೆ ನೀಡಿದೆ.

ಚಿತ್ರಗಳು : ಮೇಕೆದಾಟುಗೆ ಸಚಿವ ಡಿ.ಕೆ.ಶಿವಕುಮಾರ್ ಭೇಟಿಚಿತ್ರಗಳು : ಮೇಕೆದಾಟುಗೆ ಸಚಿವ ಡಿ.ಕೆ.ಶಿವಕುಮಾರ್ ಭೇಟಿ

ಮೇಕೆದಾಟು ಯೋಜನೆಯನ್ನು ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎ.ಎಂ.ಖನ್ವಿಲ್ಕರ್ ನೇತೃತ್ವದ ಪೀಠ, ಕಾವೇರಿ ಕಣಿವೆಯ ವ್ಯಾಪ್ತಿಗೆ ಬರುವ ಇತರ ರಾಜ್ಯಗಳಿಗೆ ಪ್ರತಿಕ್ರಿಯೆ ಸಲ್ಲಿಸಲು 4 ವಾರಗಳ ಕಾಲಾವಕಾಶ ನೀಡಿದೆ.

ಮೇಕೆದಾಟುವಿನಲ್ಲಿ ಜಲಾಶಯ ನಿರ್ಮಾಣಕ್ಕೆ ಒಪ್ಪಿಗೆ ನೀಡಿಲ್ಲ : ಕೇಂದ್ರ ಸರ್ಕಾರಮೇಕೆದಾಟುವಿನಲ್ಲಿ ಜಲಾಶಯ ನಿರ್ಮಾಣಕ್ಕೆ ಒಪ್ಪಿಗೆ ನೀಡಿಲ್ಲ : ಕೇಂದ್ರ ಸರ್ಕಾರ

ಕರ್ನಾಟಕ ಸರ್ಕಾರ ಯೋಜನೆಯ ವಿಸ್ತೃತ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗದ ಯೋಜನಾ ಮೌಲ್ಯಮಾಪನ ಮುಖ್ಯ ಇಂಜಿನಿಯರ್‌ಗೆ ಸಲ್ಲಿಸಿದೆ. ಸರ್ಕಾರ ಸಹ ತಮಿಳುನಾಡು ಸರ್ಕಾರಕ್ಕೆ ಡಿಪಿಆರ್ ಪ್ರತಿಯನ್ನು ಸಲ್ಲಿಸಿದೆ....

ಮೇಕೆದಾಟು ಯೋಜನೆ : ಕರ್ನಾಟಕ ಸರ್ಕಾರದಿಂದ ಡಿಪಿಆರ್‌ ಸಲ್ಲಿಕೆಮೇಕೆದಾಟು ಯೋಜನೆ : ಕರ್ನಾಟಕ ಸರ್ಕಾರದಿಂದ ಡಿಪಿಆರ್‌ ಸಲ್ಲಿಕೆ

ನ್ಯಾಯಾಲಯಕ್ಕೆ ಮಾಹಿತಿ

ನ್ಯಾಯಾಲಯಕ್ಕೆ ಮಾಹಿತಿ

ಕರ್ನಾಟಕ ಸರ್ಕಾರದ ಪರವಾಗಿ ವಾದ ಮಂಡನೆ ಮಾಡುವಾಗ ಮೇಕೆದಾಟು ಬಳಿ ಕಾವೇರಿ ನದಿಯ 67.16 ಟಿಎಂಸಿ ಅಡಿ ಹೆಚ್ಚುವರಿ ನೀರನ್ನು ಸಂಗ್ರಹ ಮಾಡುವ ಉದ್ದೇಶದಿಂದ ಸಮಾನಾಂತರ ಜಲಾಶಯ ನಿರ್ಮಾಣ ಮಾಡಲಾಗುತ್ತದೆ. ಯೋಜನೆಯಡಿ 400 ಮೆಗಾವಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಬೆಂಗಳೂರು, ರಾಮನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಲಾಯಿತು.

ತಮಿಳುನಾಡು ಮೇಲ್ಮನವಿ

ತಮಿಳುನಾಡು ಮೇಲ್ಮನವಿ

ಕಾವೇರಿ ಜಲವಿವಾದದ ಅಂತಿಮ ತೀರ್ಪಿನ ಬಳಿಕ ಕರ್ನಾಟಕ ಸರ್ಕಾರ ಮೇಕೆದಾಟು ಯೋಜನೆಗೆ ಅನುಮತಿ ಕೇಳಿತ್ತು. ಕೇಂದ್ರ ಜಲ ಆಯೋಗ ಡಿಪಿಆರ್ ಸಲ್ಲಿಕೆ ಮಾಡಲು ಸೂಚನೆ ನೀಡಿತ್ತು. ಆದರೆ, ತಮಿಳುನಾಡು ಸರ್ಕಾರ ಈ ಯೋಜನೆ ವಿರೋಧಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ.

ಕರ್ನಾಟಕದ ವಾದವೇನು?

ಕರ್ನಾಟಕದ ವಾದವೇನು?

ಕಾವೇರಿ ಜಲಾನಯನ ಪ್ರದೇಶದಲ್ಲಿ ಮೇಕೆದಾಟು ಯೋಜನೆ ಪೂರ್ಣಗೊಂಡರೆ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಬಹುದು. ಬೆಂಗಳೂರಿಗೆ 17 ಟಿಎಂಸಿ ಕುಡಿಯುವ ನೀರು ಸಿಗಲಿದೆ ಎಂಬುದು ಕರ್ನಾಟಕ ಸರ್ಕಾರದ ವಾದವಾಗಿದೆ.

ಕಾವೇರಿ ತೀರ್ಪಿನ ಉಲ್ಲಂಘನೆ

ಕಾವೇರಿ ತೀರ್ಪಿನ ಉಲ್ಲಂಘನೆ

ಮೇಕೆದಾಟು ಯೋಜನೆ ಆರಂಭಿಸಿದರೆ ಕಾವೇರಿ ಅಂತಿಮ ತೀರ್ಪಿನ ಉಲ್ಲಂಘನೆಯಾಗುತ್ತದೆ. ಕಾವೇರಿ ವಿವಾದದ ವಿಚಾರಣೆ ನಡೆಯುವಾಗ ಕರ್ನಾಟಕ ಯೋಜನೆ ಬಗ್ಗೆ ಪ್ರಸ್ತಾಪ ಮಾಡಿರಲಿಲ್ಲ. ಯೋಜನೆ ಜಾರಿಯಾದರೆ ರಾಜ್ಯಕ್ಕೆ ಹರಿದು ಬರುವ ನೀರಿನ ಪ್ರಮಾಣ ಕಡಿಮೆಯಾಗಲಿದೆ ಎಂಬುದು ತಮಿಳುನಾಡಿನ ವಾದ.

English summary
Supreme Court of India directed Tamil Nadu and Puducherry state to file objections on Mekedatu project DPR. Karnataka government submitted the Mekedatu project Detailed Project Report (DPR) to central water commission.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X