ಮೇಕೆದಾಟು ಅಪಡೇಟ್‌: ಜಲಶಕ್ತಿ ಸಚಿವಾಲಯದ ಕಾರ್ಯದರ್ಶಿ ಭೇಟಿ ಮಾಡಿದ ಟಿಬಿ ಜಯಚಂದ್ರ

ನವದೆಹಲಿ, ನವೆಂಬರ್‌ 14: ನವದೆಹಲಿಯಲ್ಲಿರುವ ಕರ್ನಾಟಕದ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ಸೋಮವಾರ ಜಲಶಕ್ತಿ ಸಚಿವಾಲಯದ ಕಾರ್ಯದರ್ಶಿ ದೇಬಶ್ರೀ ಮುಖರ್ಜಿ ಅವರನ್ನು ಭೇಟಿ ಮಾಡಿ ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡುವಂತೆ ಕ್ರಮಕೈಗೊಳ್ಳುವಂತೆ ಮನವಿ ಮಾಡಿದರು.

ಕೇಂದ್ರದ ವಿವಿಧ ಅಧಿಕಾರಿಗಳು ಅನುಮತಿ ನೀಡದ ಕಾರಣ ಯೋಜನೆಯು ದೀರ್ಘಕಾಲದಿಂದ ಸ್ಥಗಿತಗೊಂಡಿದೆ. ಈ ಯೋಜನೆಯ ಅನುಷ್ಠಾನದಿಂದ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವುದರ ಜೊತೆಗೆ ಬರಗಾಲದಲ್ಲೂ ತಮಿಳುನಾಡಿಗೆ ನೀರು ಬಿಡಲು ರಾಜ್ಯಕ್ಕೆ ಸಹಾಯವಾಗುತ್ತದೆ ಎಂದು ಜಯಚಂದ್ರ ಹೇಳಿದರು.

mekedatu-update-tb-jayachandra

ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಯೋಜನೆಯು ರಾಷ್ಟ್ರೀಯ ಯೋಜನೆಯಾಗಿ ಅನುಮೋದನೆಗಾಗಿ ಪ್ರಧಾನ ಮಂತ್ರಿಗಳ ಕಚೇರಿಯಲ್ಲಿ ಇರುವುದರಿಂದ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಕರಣವನ್ನು ಮಂಡಿಸುವುದಾಗಿ ಮುಖರ್ಜಿ ಭರವಸೆ ನೀಡಿದರು ಎಂದು ಜಯಚಂದ್ರ ಹೇಳಿದರು.

ಕಾಮಗಾರಿ ಪ್ರಗತಿಯಲ್ಲಿದ್ದು, ಕೆಲವೆಡೆ ಭೂಸ್ವಾಧೀನ ಪ್ರಕ್ರಿಯೆ ನಡೆಯಬೇಕಿದೆ ಎಂದು ಕಾರ್ಯದರ್ಶಿಗೆ ತಿಳಿಸಿ, ಕೇಂದ್ರ ಅಧಿಕೃತವಾಗಿ ರಾಷ್ಟ್ರೀಯ ಯೋಜನೆ ಎಂದು ಘೋಷಿಸಿದರೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬಹುದು ಎಂದು ಮನವರಿಕೆ ಮಾಡಿದರು. ಜಯಚಂದ್ರ ಅವರು ಕಳೆದ ಬಾರಿ ನವದೆಹಲಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಕರ್ನಾಟಕಕ್ಕೆ ಸಂಬಂಧಿಸಿದ ಯೋಜನೆಗಳ ಕುರಿತು ಚರ್ಚಿಸಿದ್ದರು.

'ಕರ್ನಾಟಕದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ನವರೇ, ಸುಳ್ಳು ಮತ್ತು ತಪ್ಪು ಮಾಹಿತಿಗಳನ್ನು ಹರಡುವುದು ಕಾಂಗ್ರೆಸಿಗರಿಗೆ ಅಂಟಿದ ಚಟ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಒಬ್ಬ ಮುಖ್ಯಮಂತ್ರಿಯೇ ಖುದ್ದಾಗಿ ತಪ್ಪು ಮಾಹಿತಿಗಳನ್ನು ಬಿತ್ತಿ ಜನಮಾನಸವನ್ನು ಹಾಳುಗೆಡವಲು ಮುಂದಾಗುತ್ತಾರೆಂದು ನಾವು ಭಾವಿಸಿರಲಿಲ್ಲ' ಎಂದು ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಹೇಳಿದ್ದರು.

ಮೇಕೆದಾಟು ಯೋಜನೆಯ ಬಗ್ಗೆ ಕೇಂದ್ರ ಸರ್ಕಾರದ ನಿರ್ಲಕ್ಷ ಸಂಬಂಧ ಕೇಂದ್ರ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರಿಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಣಿ ಹೇಳಿಕೆಗಳ ಮೂಲಕ ತಿರುಗೇಟು ನೀಡಿದ್ದರು.

ಕರ್ನಾಟಕ ಮತ್ತು ತಮಿಳುನಾಡು ನಡುವಿನ ನೀರು ಹಂಚಿಕೆ ವಿವಾದಕ್ಕೆ ಮೇಕೆದಾಟು ಯೋಜನೆಯೇ ಪರಿಹಾರ. ಮೇಕೆದಾಟು ಯೋಜನೆಯಿಂದ ಸಮಸ್ಯೆ ಬಗೆಹರಿಯಬಹುದು. ಇಲ್ಲಿಯವರೆಗೆ ಯಾವುದೇ ಪರಿಹಾರವಿಲ್ಲ. ಅದಕ್ಕಾಗಿ ಟ್ರಿಬ್ಯೂನಲ್ ಮತ್ತು ಸುಪ್ರೀಂ ಕೋರ್ಟ್ ಮುಂದೆ ಮನವಿ ಮಾಡಿದ್ದೇವೆ.

ಇನ್ನೊಂದು ಪರಿಹಾರವೆಂದರೆ ಮೇಕೆದಾಟು ಯೋಜನೆ. 67 ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿದೆ. ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ನೀರನ್ನು ಹಂಚಿಕೊಳ್ಳಲು ನೆರವಾಗುತ್ತದೆ. ಇದು ಎರಡೂ ರಾಜ್ಯಗಳಿಗೆ ಸಹಾಯ ಮಾಡುತ್ತದೆ ಎಂದು ಸಿದ್ದರಾಮಯ್ಯ ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+