ಮೇರಾ ಪರಿವಾರ್ ಬಿಜೆಪಿ ಪರಿವಾರ್ ಅಭಿಯಾನಕ್ಕೆ ಬಿಎಸ್‌ವೈ ಚಾಲನೆ

ಬೆಂಗಳೂರು, ಫೆಬ್ರವರಿ 12 : ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು 'ಮೇರಾ ಪರಿವಾರ್ ಬಿಜೆಪಿ ಪರಿವಾರ್' ಅಭಿಯಾನಕ್ಕೆ ಚಾಲನೆ ನೀಡಿದರು. 2019ರ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಈ ಅಭಿಯಾನ ಆರಂಭಿಸಿದೆ.

ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಂಗಳವಾರ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜಯೇಂದ್ರ ಅವರು ಮನೆಗೆ ಪಕ್ಷದ ಬಾವುಟ ಕಟ್ಟುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು. ಪ್ರತಿ ಕಾರ್ಯಕರ್ತರ ಮನೆಯ ಮೇಲೆ ಬಿಜೆಪಿ ಬಾವುಟವನ್ನು ಹಾಕಲಾಗುತ್ತದೆ.

2019ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ 'ಮೇರಾ ಪರಿವಾರ್ ಬಿಜೆಪಿ ಪರಿವಾರ್' ಅಭಿಯಾನಕ್ಕೆ ಚಾಲನೆ ನೀಡಿದೆ. ಅಹಮದಾಬಾದ್‌ನಲ್ಲಿ ತಮ್ಮ ಮನೆಗೆ ಬಾವುಟ ಕಟ್ಟುವ ಮೂಲಕ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅಭಿಯಾನ ಆರಂಭಿಸಿದ್ದಾರೆ.

ಕರ್ನಾಟಕದಲ್ಲಿ ಈ ಬಾರಿಯ ಚುನಾವಣೆಯಲ್ಲಿ 20+ ಸ್ಥಾನಗಳಲ್ಲಿ ಜಯಗಳಿಸಲು ಬಿಜೆಪಿ ತಂತ್ರ ರೂಪಿಸಿದೆ. ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ.

ಮೇರಾ ಪರಿವಾರ್ ಬಿಜೆಪಿ ಪರಿವಾರ್

ಮೇರಾ ಪರಿವಾರ್ ಬಿಜೆಪಿ ಪರಿವಾರ್

ಮೇರಾ ಪರಿವಾರ್ ಬಿಜೆಪಿ ಪರಿವಾರ್ ಅಭಿಯಾನದಡಿ ಮನೆಯ ಮೇಲೆ ಪಕ್ಷದ ಧ್ವಜ ಹಾರಿಸಲಾಗುತ್ತದೆ. ಮನೆ ಬಾಗಿಲಿಗೆ ಬಿಜೆಪಿ ಸ್ಟಿಕ್ಕರ್ ಅಂಟಿಸುವ ಮೂಲಕ ಮತದಾರರನ್ನು ಪಕ್ಷದತ್ತ ಆಕರ್ಷಿಸಲಾಗುತ್ತದೆ. ಕರ್ನಾಟಕದಲ್ಲಿ 70 ಲಕ್ಷ ಮನೆಗಳನ್ನು ತಲುಪುವ ಗುರಿ ಹೊಂದಲಾಗಿದೆ.

ಮತ್ತೊಮ್ಮೆ ಪ್ರಧಾನಿ ಮಾಡೋಣ

ಮತ್ತೊಮ್ಮೆ ಪ್ರಧಾನಿ ಮಾಡೋಣ

'ಮೇರಾ ಪರಿವಾರ್ ಬಿಜೆಪಿ ಪರಿವಾರ್' ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಯಡಿಯೂರಪ್ಪ ಅವರು, 'ರಾಜ್ಯದಿಂದ 22 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲಿದ್ದೇವೆ. ಇಂದು ಎಲ್ಲಾ ಮುಖಂಡರ ಮನೆಗಳಲ್ಲಿ ಪಕ್ಷದ ಧ್ವಜ ಹಾರಿಸಲಾಗುತ್ತದೆ' ಎಂದರು.

ದೇಶಕ್ಕಾಗಿ ಮೋದಿ ಬೇಕು

ದೇಶಕ್ಕಾಗಿ ಮೋದಿ ಬೇಕು

'ಮೇರಾ ಪರಿವಾರ್ ಬಿಜೆಪಿ ಪರಿವಾರ್' ಅಭಿಯಾನದ ಮೂಲಕ ದೇಶಕ್ಕಾಗಿ ಮೋದಿ ಬೇಕು, ಭ್ರಷ್ಟಾಚಾರ ಮುಕ್ತ ಸ್ವಚ್ಛ ದೇಶಕ್ಕಾಗಿ ಮೋದಿ ಅವರ ಕೈಯನ್ನು ಬಲಪಡಿಸಿ ಎಂದು ಪ್ರತಿ ಮನೆಗೂ ಬಿಜೆಪಿ ನಾಯಕರು ಸಂದೇಶವನ್ನು ತಲುಪಿಸಲಿದ್ದಾರೆ.

5 ಕೋಟಿ ಮನೆಗಳು

5 ಕೋಟಿ ಮನೆಗಳು

'ಮೇರಾ ಪರಿವಾರ್ ಬಿಜೆಪಿ ಪರಿವಾರ್' ಅಭಿಯಾನದ ಮೂಲಕ ಬಿಜೆಪಿ ದೇಶದ 5 ಕೋಟಿ ಮನೆಗಳನ್ನು ತಲುಪಲು ತೀರ್ಮಾನಿಸಿದೆ. ಆದ್ದರಿಂದ ದೇಶಾದ್ಯಂತ ಇಂದು ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.

ಡಾ.ಅಶ್ವಥ್ ನಾರಾಯಣ

'ಮೇರಾ ಪರಿವಾರ್ ಬಿಜೆಪಿ ಪರಿವಾರ್' ಅಭಿಯಾನದ ಅಂಗವಾಗಿ ಮಲ್ಲೇಶ್ವರಂ ಕ್ಷೇತ್ರದ ಶಾಸಕ ಡಾ.ಅಶ್ವಥ್ ನಾರಾಯಣ ಅವರು ಮನೆಯ ಮೇಲೆ ಪಕ್ಷದ ಬಾವುಟ ಹಾಕಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+