ಮಹಾರಾಷ್ಟ್ರದಲ್ಲಿ ಕನ್ನಡ ಹೋರಾಟಗಾರನನ್ನು ಕೂಡಿಹಾಕಿ ಹಲ್ಲೆ!
ಬೆಂಗಳೂರು, ಡಿ. 21: ದೇಶದ್ರೋಹ ಕೇಸು ಹಾಕುವ ಎಚ್ಚರಿಕೆ ನಡುವೆಯೂ ಮಹಾರಾಷ್ಟ್ರದ ಶಿವಸೇನೆ ಕಾರ್ಯಕರ್ತರು ಕನ್ನಡಿಗನ ಮೇಲೆ ದೌರ್ಜನ್ಯ ಎಸಗಿ ಪುಂಡತನ ಮೆರೆದಿದ್ದಾರೆ. ಮಹಾರಾಷ್ಟ್ರದಲ್ಲಿ ಕನ್ನಡ ಪರ ಸಂಘಟನೆ ಸದಸ್ಯನನ್ನು ಕೂಡಿ ಹಾಕಿ ಹಲ್ಲೆ ಮಾಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
ಕನ್ನಡಪರ ಸಂಘಟನೆಯ ಮುಖಂಡನಾಗಿರುವ ಶಿವಕುಮಾರ್ ನಾಯ್ಕ ಹಲ್ಲೆಗೆ ಒಳಗಾದವರು. ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ ಬೆನ್ನಲ್ಲೇ ಶಿವಕುಮಾರ್ ನಾಯ್ಕ ಮತ್ತು ಬೆಂಬಲಿಗರು ಮಹಾರಾಷ್ಟ್ರದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದರು. ಕೆಲವು ಕನ್ನಡ ಪರ ಸಂಘಟನೆಗಳ ಮೂಲಕ ಮಹಾರಾಷ್ಟ್ರಕ್ಕೆ ತೆರಳಿದ್ದರು. ಪ್ರತಿಭಟನೆ ನಡೆಸುವ ಮುನ್ನ ಲಾಡ್ಜ್ ನಲ್ಲಿ ತಂಗಿದ್ದ ಶಿವಕುಮಾರ್ ನಾಯ್ಕನನ್ನು ರೂಮ್‌ನಲ್ಲಿ ಕೂಡಿ ಹಾಕಿದ್ದಾರೆ. ಅಮೇಲೆ ಕ್ಷಮೆ ಕೇಳುವಂತೆ ಒತ್ತಾಯಿಸಿ ಬಹಿರಂಗವಾಗಿ ಹಲ್ಲೆ ಮಾಡಿದ್ದಾರೆ. ಕ್ಷಮೆ ಕೇಳಿದರೂ ಬಿಡದೇ ಎಂಇಎಸ್ ಪುಂಡರು ಹಲ್ಲೆ ಮಾಡಿ, ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಮಾಡಿದ್ದಾರೆ. ಒಂಟಿಯಾಗಿ ಸಿಕ್ಕಿದ ಕನ್ನಡ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದು, ಈ ಘಟನೆ ಸಂಬಂಧ ಕನ್ನಡರಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಕನ್ನಡ ಪರ ಸಂಘಟನೆಗಳ ಆಕ್ರೋಶ:
ಕನ್ನಡಿಗರನ್ನು ಅನವಶ್ಯಕವಾಗಿ ಕೆಣಕಿದರೆ ಸುಮ್ಮನೆ ಕೂರಲ್ಲ. ಏಕಾಂಗಿಯಾಗಿ ಸಿಕ್ಕಿದ ಎಂಬ ಕಾರಣಕ್ಕೆ ಕನ್ನಡ ಪರ ಸಂಘಟನೆ ಕಾರ್ಯಕರ್ತನನ್ನು ಕೂಡಿ ಹಾಕಿ ಹಲ್ಲೆ ಮಾಡುವುದು ತಪ್ಪು. ಬೆಳಗಾವಿ ವಿಚಾರದಲ್ಲಿ ಪದೇ ಪದೇ ಕಾಲು ಕೆರೆದು ಜಗಳಕ್ಕೆ ಬರುತ್ತಿರುವ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ಬ್ಯಾನ್ ಮಾಡಬೇಕು. ಮಾತ್ರವಲ್ಲ ಹಲ್ಲೆ ಮಾಡಿರುವ ಪುಂಡರ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಕನ್ನಡ ಪರ ಸಂಘಟನೆ ಹೋರಾಟಗಾರ ಯತಿರಾಜ್ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣ ಸಂಬಂಧ ಕೇಸು ದಾಖಲಿಸಿಕೊಂಡಿದ್ದ ಸದಾಶಿವನಗರ ಪೊಲೀಸರು ಘಟನೆ ನಡೆದ 24 ತಾಸಿನಲ್ಲಿ ಆರೋಪಿಗಳನ್ನು ಬಂಧಿಸಿದ್ದರು. ಈ ಮೂಲಕ ಶಾಂತಿ ಕದಡುವ ಪ್ರಯತ್ನವನ್ನು ತಪ್ಪಿಸಿದ್ದರು. ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದ ಸದಾಶಿವನಗರ ಪೊಲೀಸರು, ಎರಡು ರಾಜ್ಯಗಳ ನಡುವಿನ ಶಾಂತಿ ಕದಡುವ ಪ್ರಯತ್ನವನ್ನು ತಣ್ಣಗೆ ಮಾಡಿದ್ದರು.

ಅದೇ ರೀತಿ ಮಹಾರಾಷ್ಟ್ರದಲ್ಲಿ ಕನ್ನಡ ಪರ ಹೋರಾಟಗಾರನ ಮೇಲೆ ನಡೆದಿರುವ ಹಲ್ಲೆ ಸಂಬಂಧ ಮಹಾರಾಷ್ಟ್ರ ಪೊಲೀಸರು ಕಾನೂನು ಕ್ರಮ ಜರುಗಿಸಬೇಕು. ತಪ್ಪಿತಸ್ಥ ಆರೋಪಿಗಳನ್ನು ಬಂಧಿಸಿ ಈ ದೇಶದಲ್ಲಿ ಕಾನೂನು ದೊಡ್ಡದು ಎಂಬುದನ್ನು ತೋರಿಸಬೇಕು. ಆದರೆ, ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಪ್ರಕರಣ, ಕನ್ನಡ ಪರ ಸಂಘಟನೆ ಕಾರ್ಯಕರ್ತನ ಮೇಲಿನ ಹಲ್ಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಮಹಾರಾಷ್ಟ್ರ ಪೊಲೀಸರು ಆರೋಪಿಗಳನ್ನು ಬಂಧಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಶಾಂತಿ ಕದಡುವ ಘಟನೆಗಳಿಗೆ ಕಾರಣವಾಗುವ ವಿಕೃತರನ್ನು ಕೂಡಲೇ ಬಂಧಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.
Recommended Video
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಲವ್ ಮಾಕ್ಟೇಲ್ 3 ವಿವಾದ: ನನ್ನ ಕಥೆಯ ದ್ವಿತೀಯಾರ್ಧ ನಕಲು: ಸಿನಿಮಾ ಬರಹಗಾರರೇ ಎಚ್ಚರ ಎಂದ ನಿರ್ದೇಶಕ ರಾಘವೇಂದ್ರ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications