ಕರ್ನಾಟಕ ಪೊಲೀಸರನ್ನು ನಾಯಿಗೆ ಹೋಲಿಕೆ ಮಾಡಿ ಪೋಸ್ಟ್: ಕನ್ನಡಿಗರ ಆಕ್ರೋಶ!
ಕನ್ನಡಿಗರನ್ನು ಕೆಣಕುವ ಕೆಲಸವನ್ನು ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಮತ್ತೆ ಮಾಡುತ್ತಿದೆ. ಇದೀಗ ಕರ್ನಾಟಕದ ಪೊಲೀಸರನ್ನು ಕೆಣಕುವ ಕೆಲಸವನ್ನು ಮಾಡಿದ್ದು ಇದರಿಂದ ಕನ್ನಡಿಗರು ಆಕ್ರೋಶಗೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಉದ್ಧಟನ ಮೆರೆಯಲಾಗಿದ್ದು ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈಚೆಗಷ್ಟೇ ಬೆಳಗಾವಿಯಲ್ಲಿ ಕನ್ನಡಿಗ ಕಂಡಕ್ಟರ್ ಮೇಲೆ ಹಲ್ಲೆ ಮಾಡಲಾಗಿತ್ತು. ಇದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಈ ವಿಚಾರವಾಗಿ ಈಚೆಗಷ್ಟೇ ಕರ್ನಾಟಕ ಬಂದ್ ಸಹ ನಡೆದಿತ್ತು.
ಇದೀಗ ಬೆಳಗಾವಿಯಲ್ಲಿ ಮರಾಠಿ ಹಾಗೂ ಎಂಇಎಸ್ ಪುಂಡರ ಹಾವಳಿ ಮತ್ತೆ ಹೆಚ್ಚಾಗಿದೆ. ಕನ್ನಡಿಗರು ಹಾಗೂ ಕರ್ನಾಟಕದ ಪೊಲೀಸರನ್ನು ಅವಮಾನ ಮಾಡುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಎಂಇಎಸ್ ಮುಖಂಡ ಶುಭಂ ಶಳಕೆಯನ್ನು ಬೆಳಗಾವಿಯ ಪೊಲೀಸರು ಬಂಧಿಸಿದ್ದಾರೆ. ಈ ಬಂಧನದ ನಂತರ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಮಹಾರಾಷ್ಟ್ರದಲ್ಲಿ ಶುಭಂ ಶಳಕೆಯನ್ನು ಪೊಲೀಸರು ಬಂಧಿಸಿದ್ದರು. ಕನ್ನಡಪರ ಹೋರಾಟಗಾರರು ಹಾಗೂ ಕರ್ನಾಟಕ ಅಪಹಾಸ್ಯ ಮಾಡಿದ್ದ ಆರೋಪದ ಮೇಲೆ ಶಳಕೆಯನ್ನು ಬಂಧಿಸಲಾಗಿತ್ತು. ಇನ್ನು ಶಳಕೆ ವಿರುದ್ಧ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಆದರೆ ಇದೀಗ ಶಳಕೆ ಬಂಧನದ ಬಳಿಕ ಮತ್ತೆ ಎಂಇಎಸ್ ಮತ್ತೆ ಪೋಸ್ಟ್ ಹಾಕಿ ಪುಂಡಾಟ ಮೆರೆದಿದ್ದಾರೆ.
ಎಂಇಎಸ್ ನಾಯಕನ ಬಂಧನವಾದ ಮೇಲೆ ಸೋಷಿಯಲ್ ಮೀಡಿಯಾದಲ್ಲಿ "ಸಮಿತಿಯ ಸಿಂಹ ಏಕಾಂಗಿಯಾಗಿ ಹೋರಾಡುತ್ತಿದೆ. ಸಾವಿರಾರು ನಾಯಿಗಳು ಸಿಂಹವನ್ನು ಮುಗಿಸಲು ಬೆನ್ನತ್ತಿವೆ. ಆದರೆ, ಸಿಂಹ ಮುಗಿಸಲು ನಾಯಿಗಳಿಂದ ಸಾಧ್ಯವಾಗುತ್ತಿಲ್ಲ" ಎನ್ನುವ ಪೋಸ್ಟ್ ಹಾಕಲಾಗಿದ್ದು ಕರ್ನಾಟಕದ ಪೊಲೀಸರ ಫೋಟೋವನ್ನು ಬಳಸಲಾಗಿದೆ. ಈ ವಿಷಯ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ. ಎಂಇಎಸ್ ಮುಖಂಡನ ಬಂಧನದ ಬಗ್ಗೆ ಉದ್ಧಟನದ ಪೋಸ್ಟ್‌ಗೆ ಸೋಷಿಯಲ್ ಮೀಡಿಯಾದಲ್ಲಿ ಕನ್ನಡಿಗರಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ.
ಎಂಇಎಸ್‌ನ ಯುವ ಸಮಿತಿಯ ಸೀನಾಬಾಗ್ ಹೆಸರಿನ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿದೆ. ಬೆಳಗಾವಿ ಪೊಲೀಸರನ್ನು ನಾಯಿಗೆ ಹೋಲಿಸಿ ಎಂಇಎಸ್ ಪೋಸ್ಟ್ ಮಾಡಿದೆ.
ಬೆಳಗಾವಿಯಲ್ಲಿ ಹೆಚ್ಚಾಯ್ತು ಎಂಇಎಸ್ ಪುಂಡಾಟ: ಇನ್ನು ಇತ್ತೀಚಿನ ದಿನಗಳಲ್ಲಿ ಎಂಇಎಸ್ ಪುಂಡಾಟ ಮಿತಿ ಮೀರಿದೆ. ಬೆಳಗಾವಿಯಲ್ಲಿ ಕನ್ನಡ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಮೇಲೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಕನ್ನಡಪರ ಸಂಘಟನೆಗಳು ಈ ವಿಚಾರವಾಗಿ ಭಾರೀ ವಿರೋಧ ವ್ಯಕ್ತಪಡಸಿದ ಅಥವಾ ಸರಣಿ ಹೋರಾಟಗಳು ನಡೆದ ಮೇಲೆ ರಾಜ್ಯದಲ್ಲಿ ಎಂಇಎಸ್ ನಿಷೇಧವಾಗಬಹುದು ಎಂದು ಭಾವಿಸಲಾಗಿತ್ತು. ಆದರೆ, ಕನ್ನಡಿಗರ ವಿರೋಧದ ನಡುವೆಯೂ ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಯಾವುದೇ ಕ್ರಮ ತೆಗೆದುಕೊಳ್ಳದೆ ಇರುವುದು ಭಾರೀ ಚರ್ಚೆಗೆ ಕಾರಣವಾಗಿದೆ.
ಎಂಇಎಸ್ ನಿಷೇಧ ಮಾಡಿ: ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡಬೇಕು ಎನ್ನುವ ಆಗ್ರಹವು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಆದರೆ ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಯಾವುದೇ ಗಂಭೀರ ಕ್ರಮಗಳನ್ನು ಇಲ್ಲಿಯ ವರೆಗೆ ತೆಗೆದುಕೊಂಡಿಲ್ಲ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ಬೆಳಗಾವಿಯ ಕೆಲವು ರಾಜಕೀಯ ನಾಯಕರು ಮರಾಠಿಗರ ಪರವಾಗಿ ಹೇಳಿಕೆ ನೀಡುತ್ತಿರುವುದು ಸಹ ಕೆಲವು ಮರಾಠಿ ಪುಂಡರು ದುಂಡಾವರ್ತನೆ ತೋರಿಸುವುದಕ್ಕೆ ಕಾರಣವಾಗಿದೆ.












Click it and Unblock the Notifications