Karnataka Rain : ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು, ಏಪ್ರಿಲ್‌ 22: ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ ಚೇತರಿಕೆ ಕಂಡಿದೆ. ಈ ಕಳೆದ ವರ್ಷಕ್ಕಿಂತ ಈ ವರ್ಷ ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಮಾಹಿತಿ ನೀಡಿದೆ. ಇನ್ನೂ ಹವಾಮಾನ ಇಲಾಖೆಯ ಪ್ರಕಾರ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ. ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ. ಕೆಲವೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಾದ್ಯಂತ ಮುಂದಿನ ಐದು ದಿನಗಳ ಕಾಲ ಮೋಡ ಕವಿದ ವಾತಾವರಣದೊಂದಿಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-50 ಕಿಮೀ ತಲುಪುವ ಸಾದ್ಯತೆಯಿದ್ದು, ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಅಲ್ಲದೇ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Meteorological Department has said that rain will occur in 14 districts of the state

ಇನ್ನೂ ಈ ವರ್ಷ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಮಾರ್ಚ್‌ 1 ರಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ವಾಡಿಕೆಗಿಂತ ಶೇ.70ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ 27.9 ಮಿ.ಮೀ ವಾಡಿಕೆ ಮಳೆಯಾಗಿದ್ದು, 47.4 ಮಿ.ಮೀ.ನಷ್ಟು ಮಳೆಯಾಗಿದೆ. ಇನ್ನೂ ಏಪ್ರಿಲ್‌ 1 ರಿಂದ ನಿನ್ನೆವರೆಗೆ ವಾಡಿಕೆ ಮಳೆಯ ಪ್ರಮಾಣ 18.8 ಮಿ.ಮೀ.ನಷ್ಟಿದ್ದು, 35.4ರಷ್ಟು ಮಳೆಯಾಗಿದ್ದು, ಶೇ.88 ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.
ಕಳೆದ ಎರಡು ದಿನಗಳಿಂದ ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಇಂದು ಕೂಡ ಮಳೆ ಮುಂದುವರಿಯುವ ಸಾಧ್ಯತೆ ಇದೆ.

ಇನ್ನೂ ಕಳೆದ ಒಂದು ವಾರದಲ್ಲಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆ ಪ್ರಮಾಣ ಇಳಿಕೆಯಾಗಿದ್ದು, ವಾಡಿಕೆಗಿಂತ ಕಡಿಮೆ ಮಳೆಯಾಗಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಬೇಸಿಗೆ ಮಳೆ ಮುಂದುವರೆಯುತ್ತಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು ಆರಂಭಗೊಂಡಿದ್ದು, ಭೂಮಿ ಸಿದ್ಧತೆ, ಪೂರ್ವ ಮುಂಗಾರಿನ ಬೆಳೆಗಳ ಬಿತ್ತನೆ ಕಾರ್ಯದಲ್ಲಿ ರೈತರು ತೊಡಗಿಕೊಂಡಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು, ಮುಂದಿನ ಮೂರು ಗಂಟೆಯಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.

ಬಿಸಿಲಿನ ಧಗೆಗೆ ಬಸವಳಿದ ಹುಬ್ಬಳ್ಳಿ ಜನತೆಗೆ ಇಂದು ಮಧ್ಯಾಹ್ನ ಸುರಿದ ಉತ್ತಮ ಮಳೆಗೆ ತಂಪಿನ ಅನುಭವವಾಗಿದೆ. ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಮಿಶ್ರಿತ ಮಳೆ ಮಳೆ ಆಗಿದ್ದು, ಕಳೆದ ಕೆಲ ದಿನಗಳಿಂದ ಭಾರೀ ಬಿಸಿಲಿನಿಂದ ಜನರು ಕಂಗಾಲು ಆಗಿದ್ದರು. ಇದೀಗ ಭರ್ಜರಿ ಮಳೆಯಾಗಿರುವುದರಿಂದ ಉತ್ತರ ಕರ್ನಾಟಕ ಭಾಗದ ಜನತೆ ಸಂತಸಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+