Rain Alert: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೈದು ದಿನ ಗುಡುಗು ಸಹಿತ ಭಾರಿ ಮಳೆ!
ರಾಜ್ಯದಲ್ಲಿ ಮತ್ತೆ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಆಂಧ್ರಪ್ರದೇಶದ ನೈಋತ್ಯ ಬಂಗಾಳ ಕೊಲ್ಲಿಯ ಮೇಲಿನ ವಾಯು ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 3.1 ಮತ್ತು 5.8 ಕಿ.ಮೀ ನಡುವೆ ಇರಲಿದೆ ಎಂದು ಹೇಳಿದೆ.
ಮನ್ನಾರ್ ಕೊಲ್ಲಿ ಮತ್ತು ನೆರೆಹೊರೆಯಲ್ಲಿ ಚಂಡಮಾರುತದ ಪರಿಚಲನೆಯು ಮುಂದುವರಿಯುತ್ತದೆ ಮತ್ತು ಸರಾಸರಿ ಸಮುದ್ರ ಮಟ್ಟದಿಂದ 0.9 ಕಿಮೀ ಎತ್ತರದಲ್ಲಿ ಕಂಡುಬರುತ್ತದೆ. ಹಾಗಾಗಿ ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಒಳನಾಡಿನಲ್ಲಿ ಶುಷ್ಕ ಹವಾಮಾನದ ವಾತಾವರಣ ಇರಲಿದೆ.

ಇಂದು ಚಿಕ್ಕಮಗಳೂರು, ರಾಮನಗರ, ಚಾಮರಾಜನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಗದಗ ಮತ್ತು ಧಾರವಾಡ, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ.
ನಾಳೆ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ.

ನವೆಂಬರ್ 3ರಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಬೀದರ್, ಕಲಬುರ್ಗಿ, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ನವೆಂಬರ್ 4ರಂದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಬೀದರ್, ಕಲಬುರ್ಗಿ, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ ಎಂದು ಎನ್ನಲಾಗಿದೆ.

ಬೆಳ್ಳಂಬೆಳಿಗ್ಗೆ ಮಂಜು ಕೂಡ ಹೆಚ್ಚು!
ನವೆಂಬರ್ 5ರಂದು ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಬೆಂಗಳೂರು ನಗರ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಸ್ಥಳಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಬೀಳುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26 ಡಿಗ್ರಿ ಸೆಲ್ಸಿಯಸ್ ಹಾಗೂ 20 ಡಿಗ್ರಿ ಸೆಲ್ಸಿಯಸ್ ಇರಲಿದೆ.












Click it and Unblock the Notifications