ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ: ರೆಡ್ ಅಲರ್ಟ್ ಘೋಷಣೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 12: ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಅಕ್ಟೋಬರ್ 13 ರಂದು ಭರ್ಜರಿ ಮಳೆ ಸುರಿಯಲಿದೆ.ಇನ್ನುಳಿದಂತೆ ಉತ್ತರ ಒಳನಾಡಿನಾದ್ಯಂತ ಮಳೆಯಾಗಲಿದೆ.

ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ: ಪ್ರವಾಹದಲ್ಲಿ ಕೊಚ್ಚಿ ಹೋದ ಯುವಕಉತ್ತರ ಕರ್ನಾಟಕದಲ್ಲಿ ಭಾರಿ ಮಳೆ: ಪ್ರವಾಹದಲ್ಲಿ ಕೊಚ್ಚಿ ಹೋದ ಯುವಕ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದ ಬಹುತೇಕ ಕಡೆ ಮುಂದಿನ ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಂಡಮಾನ್ ಭಾಗದಲ್ಲಿ ವಾಯುಭಾರ ಕುಸಿತ ಹೆಚ್ಚಾಗಿದೆ. ಇದು ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ.

ಎಲ್ಲೆಲ್ಲಿ ಮಳೆಯಾಗಿದೆ?

ಎಲ್ಲೆಲ್ಲಿ ಮಳೆಯಾಗಿದೆ?

ನರಗುಂದ, ಮಹಾಲಿಂಗಪುರ, ಹುನಗುಂದ, ಹಾಸನ, ಧರ್ಮಸ್ಥಳ, ಸುಳ್ಯ, ಅಂಕೋಲಾ, ನಿಪ್ಪಾಣಿಯಲ್ಲಿ ಭಾರಿ ಮಳೆಯಾಗಿದೆ. ಮೂಡಬಿದಿರೆ, ಕಾರ್ಕಳ, ಬಾಗಲಕೋಟೆ, ಕೊಪ್ಪಳ, ನೆಲಮಂಗಲ, ಬೆಂಗಳೂರು ಕೆಐಎಎಲ್, ಹೊಸದುರ್ಗ, ಗೋಕರ್ಣ, ಹೊನ್ನಾವರ, ಪಣಂಬೂರು, ಥೊಂಡೆಬಾವಿ, ಚಿಕ್ಕೋಡಿ, ಗೋಪಾಲನಗರ, ಮುಲ್ಕಿ, ಸಿದ್ದಾಪುರ, ಕುಡಚಿ, ಉಡುಪಿ, ಮುದ್ದೇಬಿಹಾಳ, ಗದಗ, ಎಚ್‌ಡಿ ಕೋಟೆ, ಟಿ ನಗರಸೀಪುರದಲ್ಲಿ ಮಳೆಯಾಗಿದೆ.

ಮಳೆಯಾಗಲಿರುವ ಪ್ರದೇಶಗಳು

ಮಳೆಯಾಗಲಿರುವ ಪ್ರದೇಶಗಳು

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ವಿಜಯಪುರ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಬೆಂಗಳೂರು ವಾತಾವರಣ

ಬೆಂಗಳೂರು ವಾತಾವರಣ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಮಳೆಯಾಗುವ ಸಾಧ್ಯತೆ ಇದೆ, 25 ಡಿಗ್ರಿ ಸೆಲ್ಸಯಸ್ ಗರಿಷ್ಠ ಉಷ್ಣಾಂಶ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ.

Recommended Video

ಹಿಂದು ದೇವಸ್ಥಾನ ಹೊಡಿಯೋ ಅಂತ ಕೆಟ್ಟ ಮನಸ್ಸು ಯಾಕೆ?? | Oneindia Kannada
ಹಲವು ರಾಜ್ಯಗಳಲ್ಲಿ ಮಳೆ

ಹಲವು ರಾಜ್ಯಗಳಲ್ಲಿ ಮಳೆ

ಕರ್ನಾಟಕ ಮಾತ್ರವಲ್ಲದೆ ಒಡಿಶಾ, ಆಂಧ್ರಪ್ರದೇಶ, ತೆಲಂಗಾಣ, ರಾಯಲಸೀಮಾ, ಮಹಾರಾಷ್ಟ್ರದಲ್ಲಿಯೂ ಮಳೆ ಹೆಚ್ಚಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್​ನಲ್ಲಿ ನಿನ್ನೆಯಿಂದಲೇ ಮಳೆ ಅಬ್ಬರ ಹೆಚ್ಚಾಗಿದೆ. ಕರ್ನಾಟಕದಲ್ಲಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಲೆನಾಡು, ಕರಾವಳಿ, ತುಮಕೂರು, ಚಿತ್ರದುರ್ಗ, ಕೋಲಾರ, ಮೈಸೂರು, ಮಂಡ್ಯದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

English summary
Meteorological Department Issued Rain Red Alert For Uttarakannada, Udupi, Dakshina Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X