ಕರ್ನಾಟಕದಲ್ಲಿ ಧಾರಾಕಾರ ಮಳೆ: 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು, ಸೆಪ್ಟೆಂಬರ್1: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸೆ.1ರಿಂದ 4ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Recommended Video

      Corona ಭೀತಿ ನಡುವೆಯೇ JEE ಪರೀಕ್ಷೆ ಶುರು | Oneindia Kannada

      ಮಳೆ-ಎಲ್ಲಿ,ಎಷ್ಟು?: ಉತ್ತರ ಕನ್ನಡ ಜಿಲ್ಲೆಯ ಮಂಕಿ ಪ್ರದೇಶದಲ್ಲಿ 9 ಸೆಂ.ಮೀ ಗರಿಷ್ಠ ಮಳೆಯಾಗಿದೆ.

      ಹೊಸಕೋಟೆ 7, ಶಿರಾ 6, ಕಾರವಾರ, ಶ್ರೀನಿವಾಸಪುರ, ಬಂಗಾರಪೇಟೆ, ಚಿಂತಾಮಣಿ, ಕುಣಿಗಲ್ 4, ಶಿಡ್ಲಘಟ್ಟ, ಚಿಕ್ಕಬಳ್ಳಾಪುರ 3, ಆಗುಂಬೆ, ಚಾಮರಾಜನಗರ, ಮದ್ದೂರು, ಬೆಂಗಳೂರು, ಗುಬ್ಬಿ, ತುಮಕೂರು, ಗೌರಿಬಿದನೂರು 2, ಬೆಳಗಾವಿ, ಮಡಿಕೇರಿ, ಕೋಲಾರ, ಗುಡಿಬಂಡೆ, ಮಧುಗಿರಿ, ಮಾಗಡಿ, ಚನ್ನಪಟ್ಟಣ, ಕನಕಪುರ, ಬಾಗೇಪಲ್ಲಿ ಹಾಗೂ ನೆಲಮಂಗಲದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

      Rain

      ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ ಮಂಗಳವಾರದಂದು 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.

      ಉತ್ತರ ಕನ್ನಡದ ಮಂಕಿ, ಗೇರುಸೊಪ್ಪ, ಹೊಸಕೋಟೆಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಮುಂದಿನ 48 ಗಂಟೆಗಳ ಕಾಲಭಾರಿ ಮಳೆಯಾಗಲಿದೆ ಎನ್ನುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

      ಬೆಂಗಳೂರಿನಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+