ರಾಜ್ಯದ ದಕ್ಷಿಣ ಒಳನಾಡಿನ 5 ಜಿಲ್ಲೆಗಳಿಗೆ ಮಳೆಯ ಯೆಲ್ಲೋ ಅಲರ್ಟ್

ಬೆಂಗಳೂರು, ಏಪ್ರಿಲ್ 21: ರಾಜ್ಯದ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ತೀವ್ರ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

Recommended Video

      ಭಾರಿ ಮಳೆ ಸೂಚನೆ ಕೊಟ್ಟ ಹವಾಮಾನ ಇಲಾಖೆ | Oneindia Kannada

      ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹೇಳಲಾಗಿದೆ.

      ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ರಾಜ್ಯದ ಉತ್ತರ ಒಳನಾಡಿನಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕಲಬುರಗಿಯಲ್ಲಿ 40.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

      ಉಡುಪಿಯ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ

      ಉಡುಪಿಯ ವಿವಿಧೆಡೆ ಗುಡುಗು, ಸಿಡಿಲು ಸಹಿತ ಮಳೆ

      ಉಡುಪಿಯ ವಿವಿಧ ಭಾಗಗಳಲ್ಲಿ ಮಂಗಳವಾರ ಸಂಜೆ ಉತ್ತಮ ಮಳೆಯಾಗಿದೆ. ಮಧ್ಯಾಹ್ನದ ಹೊತ್ತಿಗೆ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು, ಸಂಜೆ ವೇಳೆಗೆ ಉತ್ತಮ ಮಳೆಯಾಗಿದೆ. ಉಡುಪಿಯ ಕಟಪಾಡಿ, ಕಾಪು, ಪಡುಬಿದ್ರಿ, ಕುಂದಾಪುರದ ಮಡಾಮಕ್ಕಿ, ಆರ್ಡಿ, ಶೇಡಿಮನೆ, ಅಲ್ವಾಡಿ ಭಾಗದಲ್ಲಿ ಮಳೆಯಾಗಿದೆ.

      ಏಪ್ರಿಲ್ 25ರವರೆಗೂ ರಾಜ್ಯದಲ್ಲಿ ಮಳೆ

      ಏಪ್ರಿಲ್ 25ರವರೆಗೂ ರಾಜ್ಯದಲ್ಲಿ ಮಳೆ

      ಏಪ್ರಿಲ್ 25ರವರೆಗೆ ಹಗುರದಿಂದ ಕೂಡಿದ ಸಾಧಾರಣ ಪ್ರಮಾಣದ ಮಳೆ ರಾದ್ಯಾದ್ಯಂತ ಸುರಿಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಕೂಡ ಮಳೆ ಸುರಿಯುವ ಲಕ್ಷಣಗಳಿವೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕರು ತಿಳಿಸಿದ್ದಾರೆ. ಇಂದು ಕರಾವಳಿ ಭಾಗದಲ್ಲಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆ ಸುರಿಯಲಿದೆ.

      ನಿನ್ನೆ ಶಿರಾಡಿಯಲ್ಲಿ 4 ಸೆಂ,ಮೀ, ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ 3 ಸೆಂ,ಮೀ, ಶಿವಮೊಗ್ಗ ಜಿಲ್ಲೆಯ ತ್ಯಾಗರ್ತಿಯಲ್ಲಿ 4 ಸೆಂ,ಮೀ ಮಳೆಯಾಗಿದೆ. ರಾಜ್ಯದಲ್ಲಿ ಕಲಬುರಗಿಯಲ್ಲಿ ಅತಿ ಹೆಚ್ಚು ತಾಪಮಾನ 39.7 ಡಿಗ್ರಿ ಸೆಲ್ಸಿಯಸ್, ವಿಜಯಪುರದಲ್ಲಿ 38.4, ರಾಯಚೂರಿನಲ್ಲಿ 39 ಡಿಗ್ರಿ ಸೆಲ್ಸಿಯಸ್, ಕೊಪ್ಪಳದಲ್ಲಿ 37.5 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

      ಬೆಂಗಳೂರು ವಾತಾವರಣ

      ಬೆಂಗಳೂರು ವಾತಾವರಣ

      ಬೆಂಗಳೂರಲ್ಲಿ 34 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ನಗರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಎಚ್‌ಎಎಲ್‌ನಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

      ರಾಜ್ಯದ ಯಾವ ಜಿಲ್ಲೆಗಳಲ್ಲಿ ಮಳೆ

      ರಾಜ್ಯದ ಯಾವ ಜಿಲ್ಲೆಗಳಲ್ಲಿ ಮಳೆ

      ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ಮೈಸೂರು, ಮಂಡ್ಯ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+