ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ 10 ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 25: ಸಾಮಾನ್ಯವಾಗಿ ಸೆಪ್ಟೆಂಬರ್ ಮಧ್ಯದಿಂದಲೇ ಮಳೆ ಕಡಿಮೆಯಾಗಿ, ಅಕ್ಟೋಬರ್ ಅಷ್ಟೊತ್ತಿಗೆ ಚಳಿಗಾಲ ಆರಂಭವಾಗುತ್ತದೆ. ಆದರೆ ಈ ವರ್ಷ ಅಕ್ಟೋಬರ್ ಹತ್ತಿರವಾಗುತ್ತಿದ್ದರೂ ಮಳೆ ಇನ್ನೂ ಕಡಿಮೆಯಾಗಿಲ್ಲ.

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ 10 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸುರಯಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಕಳೆದ ಒಂದೆರೆಡು ದಿನಗಳಿಂದ ಕೊಂಚ ಬಿಡುವು ನೀಡಿದ್ದ ಮಳೆ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ 2 ದಿನ ಹಾಗೂ ಉತ್ತರ ಒಳನಾಡಿನ ಬೀದರ್, ಧಾರವಾಡ, ಗದಗ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಮುಂದಿನ 24 ಗಂಟೆ ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಭಾರಿ ಮಳೆ ಬಳಿಕ ಯಥಾಸ್ಥಿತಿಗೆ ಮರಳಿದ ಮುಂಬೈ: ಮತ್ತೆ ಮಳೆ ಮುನ್ಸೂಚನೆ ಇದೆಯೇ? ಭಾರಿ ಮಳೆ ಬಳಿಕ ಯಥಾಸ್ಥಿತಿಗೆ ಮರಳಿದ ಮುಂಬೈ: ಮತ್ತೆ ಮಳೆ ಮುನ್ಸೂಚನೆ ಇದೆಯೇ?

ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ ಮಳೆಯಾಗುವ ನಿರೀಕ್ಷೆ ಇದೆ.

Meteorological Department Issued Yellow Alert For 10 Districts Of Karnataka

ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣ ಇರಲಿದ್ದು, ಅಗಾಗ್ಗೆ ಮಳೆಯಾಗುವ ನಿರೀಕ್ಷೆ ಇದೆ.

ಕಾರವಾರದಲ್ಲಿ 7 ಸೆಂ.ಮೀ ಮಳೆಯಾಗಿದೆ. ಗೋಕರ್ಣ, ಭಟ್ಕಳ, ಕೊಲ್ಲೂರು, ಮಂಕಿ, ಅಂಕೋಲಾ, ಬೀದರ್, ಆಗುಂಬೆ, ಹೊನ್ನಾವರ, ಶಿರಾಲಿ, ಉಡುಪಿ, ಖಾನಾಪುರ, ಬಸವಕಲ್ಯಾಣದಲ್ಲಿ ಮಳೆಯಾಗಿದೆ.

Recommended Video

IPL 2020 CSK vs DC | Toss ಗೆದ್ದ ಧೋನಿ , ಶ್ರೇಯಸ್ ಮಾಡ್ತಾರಂತೆ ಮೋಡಿ..!! | Oneindia Kannada

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಗರಿಷ್ಠ 28 ಡಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕರಾವಳಿಯಲ್ಲಿ ಸೆಪ್ಟೆಂಬರ್ 26-27ರಂದು ಮಳೆಯ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

English summary
Southwest monsoon was active over Coastal Karnataka however was weak over Interior Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X