ಸ್ವಲ್ಪ ಬಿಡುವಿನ ಬಳಿಕ ಮತ್ತೆ ರಾಜ್ಯದಲ್ಲಿ ಅಬ್ಬರಿಸಲಿದ್ದಾನೆ ಮಳೆರಾಯ
ಬೆಂಗಳೂರು, ಆಗಸ್ಟ್ 16: ವರುಣದೇವ ಸ್ವಲ್ಪ ಕರುಣೆ ತೋರಿ ಎರಡು ದಿನಗಳಿಂದ ಮಳೆ ಕಡಿಮೆಯಾಗಿತ್ತು. ಆದರೆ ಮತ್ತೆ ಅಬ್ಬರಿಸಲು ಸಿದ್ಧನಾಗಿ ನಿಂತಿದ್ದಾನೆ.
ಉತ್ತರ ಕನ್ನಡ, ಶಿವಮೊಗ್ಗ, ದಕ್ಷಿಣ ಕನ್ನಡ, ಬೆಳಗಾವಿ ಸೇರಿದಂತೆ ಇತರೆ ಕಡೆಗಳಲ್ಲಿ ಕಳೆದ 12 ದಿನಗಳಿಂದ ಅಬ್ಬರಿಸಿದ್ದ ಮಳೆರಾಯ ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ನೀಡಿದ್ದ. ಆದರೆ ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಇಂದಿನಿಂದ(ಆಗ.16)ರಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮಧ್ಯ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕೊಡಗು, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂಬರುವ 24 ಗಂಟೆಗಳಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ರಾಜ್ಯದ ಇತರ ಪ್ರದೇಶಗಳಲ್ಲಿ ಮಳೆ ಕಡಿಮೆಯಾಗಲಿದೆ ಎಂದು ಹೇಳಿದೆ.

ಪ್ರವಾಹದಿಂದಾಗಿರುವ ನಷ್ಟದಿಂದ ಮನನೊಂದು ನದಿಗೆ ಜಿಗಿದಿದ್ದ ಮಹಿಳೆ ಮೂರು ದಿನಗಳ ಬಳಿಕ ಶವವಾಗಿ ಪತ್ತೆಯಾಗಿದ್ದಾರೆ. ಹುನಗುಂದ ತಾಲೂಕಿನ ರಾಮಥಾಳ ಗ್ರಾಮದ 65 ವರ್ಷದ ರೇಣುಕಾ ಯರನಾಳ ಮೃತ ಮಹಿಳೆಯಾಗಿದ್ದು, ಈಕೆಯ ಶವ ರಾಮಥಾಳದಿಂದ 2 ಕಿಲೋ ಮೀಟರ್ ದೂರದ ಬೇನಾಳ ಬಳಿ ನದಿಯಲ್ಲಿಪತ್ತೆಯಾಗಿದೆ.
ಭಾರೀ ಮಳೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ 2 ದಿನ ರಜೆ ಘೋಷಿಸಲಾಗಿತ್ತು. ಈಗ ಮಳೆ ಕೊಂಚ ಕಡಿಮೆಯಾಗಿರೋದರಿಂದ ಇಂದಿನಿಂದ ಶಾಲೆಗಳು ಆರಂಭಗೊಳ್ಳಲಿದೆ. ಪ್ರಕೃತಿ ವಿಕೋಪಕ್ಕೆ ಸಿಲುಕಿ ತೊಂದರೆಗೊಳಗಾದವರಿಗಾಗಿ ತೆರೆಯಲಾಗಿರೋ ಶಾಲೆಗಳು, ಅಂಗನವಾಡಿ ಬಿಟ್ಟು ಉಳಿದೆಲ್ಲ ಶಾಲೆಗಳು ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಆದೇಶಿಸಿದ್ದಾರೆ.
ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ ಮತ್ತೆ ವರಣುನ ಆರ್ಭಟ ಹೆಚ್ಚಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.












Click it and Unblock the Notifications