ಸುಮ್ಮನಹಳ್ಳಿಯಿಂದ ತಾವರೆಕೆರೆವರೆಗೆ ಮೆಟ್ರೋ ವಿಸ್ತರಣೆ; ಆಸ್ತಿ ಬೆಲೆ ಹೆಚ್ಚಳ: ಅಪ್‌ಡೇಟ್ ಕೊಟ್ಟ ಡಿ ಕೆ ಶಿವಕುಮಾರ್
ಬೆಂಗಳೂರು, ಆಗಸ್ಟ್ 30: ಮಾಗಡಿಗೆ ಶ್ರೀರಂಗ ಕುಡಿಯುವ ನೀರಿನ ಯೋಜನೆ ನೀಡಿದ್ದು ಕಾಂಗ್ರೆಸ್ ಸರ್ಕಾರ. ಈಗ ಸತ್ತೇಗಾಲದಿಂದ ಕ್ಷೇತ್ರದ 44 ಕೆರೆಗಳಿಗೆ ಕಾವೇರಿ ನೀರು ತುಂಬಿಸುವ ಯೋಜನೆ, 159 ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಣೆ, ಮಂಚನಬೆಲೆ ಅಣೆಕಟ್ಟು ಕೆಳಭಾಗದ ಅಭಿವೃದ್ದಿಗೆ ರೂ.13 ಕೋಟಿ, ರೂ.35 ಕೋಟಿ ವೆಚ್ಚದಲ್ಲಿ ರಸ್ತೆ, ಚರಂಡಿ ಅಭಿವೃದ್ಧಿ ಸೇರಿದಂತೆ ನೀರಾವರಿ ಇಲಾಖೆಯಿಂದ ಕ್ಷೇತ್ರದ ಅಭಿವೃದ್ದಿಗೆ ರೂ.100 ಕೋಟಿಗೂ ಅಧಿಕ ಅನುದಾನ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿಯಲ್ಲಿ ಶುಕ್ರವಾರ ನಡೆದ ವಿವಿಧ ಇಲಾಖೆಗಳ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಸಮಾರಂಭದಲ್ಲಿ ಡಿ ಕೆ ಶಿವಕುಮಾರ್ ಅವರು ಮಾತನಾಡಿ, ಮಾಗಡಿ ಯೋಜನಾ ಪ್ರಾಧಿಕಾರದಿಂದ ಗೌರಮ್ಮ ಕೆರೆ ಅಭಿವೃದ್ಧಿಗೆ ರೂ.20 ಕೋಟಿ ನೀಡಲಾಗಿದೆ. ಇ ಸ್ವತ್ತನ್ನು 1200 ಜನರಿಗೆ ವಿತರಣೆ ಮಾಡಲಾಗಿದ್ದು ಮಿಕ್ಕವರಿಗೂ ಶೀಘ್ರದಲ್ಲೇ ವಿತರಣೆ ಮಾಡಲಾಗುವುದು. ಇಂತಹ ನೂರಾರು ಕೆಲಸಗಳನ್ನು ನಿಮಗಾಗಿ ನೀಡಿದ್ದೇವೆ. ಸುಮ್ಮನಹಳ್ಳಿಯಿಂದ ತಾವರೆಕೆರೆವರೆಗೆ ಮೆಟ್ರೋ ಮಾರ್ಗ ವಿಸ್ತರಣೆಯಾಗಲಿದೆ. ಇದರಿಂದ ನಿಮ್ಮ ಕ್ಷೇತ್ರಕ್ಕೆ ಹೆಚ್ಚು ಲಾಭವಾಗಲಿದೆ ಎಂದು ತಿಳಿಸಿದರು.

ಆರೋಗ್ಯ ಕ್ಷೇತ್ರದಿಂದ ರೂ.40 ಕೋಟಿ ವೆಚ್ಚದ ಕಾಮಗಾರಿಗೆ ಆರೋಗ್ಯ ಸಚಿವರು ಮತ್ತು ನೂತನ ಬಸ್ ನಿಲ್ದಾಣ ಹಾಗೂ ಡಿಪೋ ಬಗ್ಗೆ ಸಾರಿಗೆ ಸಚಿವರು ವಾಗ್ದಾನ ನೀಡಿದ್ದಾರೆ. ನಾವು ಭಾವನೆ ಮೇಲೆ ರಾಜಕಾರಣ ಮಾಡುವುದಿಲ್ಲ. ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಎನ್ನುವುದಕ್ಕೆ ಕ್ಷೇತ್ರದಲ್ಲಿ ಕೈಗೆತ್ತಿಕೊಂಡಿರುವ ಕೆಲಸಗಳೇ ಸಾಕ್ಷಿ ಎಂದು ಡಿ ಕೆ ಶಿವಕುಮಾರ್ ಹೇಳಿದರು.
ನನ್ನನ್ನು ಬಂಡೆ ಎಂದು ಕರೆಯುತ್ತಾರೆ. ಆದರೆ ಕೆಂಪು ಬಂಡೆ ನಿಮ್ಮ ಬಾಲಕೃಷ್ಣ. ಇವರು ಗಟ್ಟಿಯಾಗಿ ಬಂಡೆಯಂತೆ ಕುಳಿತುಕೊಂಡು ಕ್ಷೇತ್ರದ ಕೆಲಸಗಳನ್ನು ಮಾಡಿಸಿಕೊಳ್ಳುತ್ತಾರೆ. ಎಲ್ಲೇ ಹೋದರು ಕ್ಷೇತ್ರದ ಬಗ್ಗೆ ಅರ್ಜಿ ಹಿಡಿದುಕೊಂಡು ಬರುತ್ತಾರೆ. ಕ್ಷೇತ್ರದ ಜನರ ಬಗ್ಗೆ ಕಾಳಜಿಯನ್ನಿಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ಮಾಗಡಿ ಕ್ಷೇತ್ರ ಬಾಲಕೃಷ್ಣ ಅವರದ್ದಲ್ಲ ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ಅವರ ಸ್ವಂತ ಕ್ಷೇತ್ರವಿದ್ದಂತೆ. ಕನಕಪುರದಲ್ಲಿ ಯಾವ ರೀತಿ ಕೆಲಸ ಮಾಡುತ್ತಾ ಇದ್ದೇವೋ ಅದೇ ರೀತಿ ಇಲ್ಲಿಯೂ ಕೆಲಸ ಮಾಡುತ್ತೇವೆ ಎಂದರು.
ಸಾಧನೆ ಇಲ್ಲದೇ ಸತ್ತರೆ ಸಾವಿಗೆ ಅವಮಾನ, ಆದರ್ಶ ಇಲ್ಲದಿದ್ದರೆ ಬದುಕಿಗೆ ಅವಮಾನ. ದೇವರು ನಮಗೆ ಕೊಟ್ಟ ಅವಕಾಶ ಬಳಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಶಾಸಕ ಬಾಲಕೃಷ್ಣ ಅವರು ಜನರ ಋಣ ತೀರಿಸುವ ಕೆಲಸ ಮಾಡುತ್ತಿದ್ದಾರೆ. ಈ ಐದು ಬೆರಳು ಸೇರಿ ಕೈ ಗಟ್ಟಿಯಾಯಿತು ಅದೇ ರೀತಿ ನಿಮ್ಮಿಂದ ಬಾಲಕೃಷ್ಣ ಅವರ ಕೈಗೆ ಶಕ್ತಿ ಬಂದಿದೆ. ನೀವು ಕೊಟ್ಟ ಮತಕ್ಕೆ ಅಭಿವೃದ್ದಿ ಮುಖಾಂತರ ಮರಳಿ ಕೊಡುಗೆ ನೀಡುತ್ತಿದ್ದಾರೆ. ಈ ಬಾರಿ ನೀಡಿದ ಮತಕ್ಕಿಂತ ಹೆಚ್ಚಿನ ಮತ ನೀಡಿ 2028 ರಲ್ಲಿ ಗೆಲ್ಲಿಸಬೇಕು. ಇದೇ ನೀವು ನನಗೆ ನೀಡುವ ಸನ್ಮಾನ ಎಂದರು.
ಜನ ಸಾಮಾನ್ಯರ ಬದುಕು ಏಳಿಗೆಯಾಗಬೇಕು, ಎಲ್ಲರ ಬದುಕಿನಲ್ಲಿ ಹೊಸ ರೂಪ ಕಾಣಬೇಕು, ಎಲ್ಲರ ಆಸ್ತಿ ಮೌಲ್ಯ ಹೆಚ್ಚಳವಾಗಬೇಕು ಎನ್ನುವ ಕಾರಣಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಿದ್ದೇವೆ. ಜನತಾದಳದ ನಾಯಕರು ದೆಹಲಿಗೆ ಹೋಗಿ ಜಿಲ್ಲೆಯ ಹೆಸರು ಬದಲಾವಣೆ ಸಾಧ್ಯವಿಲ್ಲ ಎಂದು ಬರೆಸಿದ್ದರು. ಕುಮಾರಣ್ಣ ಇದರ ವಿರುದ್ಧ ಬಂದ್ ಮಾಡಿಸಿದರು. ಆದರೂ ಸಹ ಹೆಸರು ಬದಲಾವಣೆಗಾಗಿ ನಾನು ದೊಡ್ಡ ಹೋರಾಟ ಮಾಡಿದೆ ಎಂದು ತಿಳಿಸಿದರು.
ಅವರ ಬದುಕನ್ನು ಏಳಿಗೆ ಮಾಡಿಕೊಳ್ಳಬೇಕು ಎಂದು ಇದೇ ಕುಮಾರಣ್ಣ ಹಾಸನದಿಂದ ಬೆಂಗಳೂರಿಗೆ ಬಂದು ಆಸ್ತಿ ತೆಗೆದುಕೊಂಡಿಲ್ಲವೇ? ರಾಮನಗರದಲ್ಲಿ ನೀವು, ನಿಮ್ಮ ತಂದೆಯವರು ರಾಜಕಾರಣ ಮಾಡಿದರೂ ನಾವು ಬೇಸರಿಸಿಕೊಳ್ಳಲಿಲ್ಲ. ನೀವು ನಿಮ್ಮ ಊರಿನಲ್ಲಿ ಆಸ್ತಿ ತೆಗೆದುಕೊಳ್ಳದೇ ಇಲ್ಲೇಕೆ ಆಸ್ತಿ ತೆಗೆದುಕೊಂಡಿರಿ? ಎಂದು ಪ್ರಶ್ನಿಸಿದರು.
ಕೆಲವರು ರಾಮನಗರ ಜಿಲ್ಲೆ ಎಂದು ಹೇಳುತ್ತಿದ್ದರು. ಇದು ಬೆಂಗಳೂರು ದಕ್ಷಿಣ ಜಿಲ್ಲೆ. ಶಾಸಕರಾದ ಹುಲಿಕಟ್ಟೆ ಬಾಲಕೃಷ್ಣ, ದೊಡ್ಡ ಆಲಹಳ್ಳಿ ಕೆಂಪೇಗೌಡ ಶಿವಕುಮಾರ್, ಎಚ್.ಡಿ ಕುಮಾರಸ್ವಾಮಿ ಹೀಗೆ ನಮ್ಮ ಗುರುತನ್ನು ಅಳಿಸಲು ಸಾಧ್ಯವಿಲ್ಲ. ಅದೇ ರೀತಿ ನಾವು ಬೆಂಗಳೂರು ಜಿಲ್ಲೆಯವರಾದ ನಮ್ಮ ಅಸ್ಮಿತೆಯನ್ನು ಬಿಟ್ಟು ಕೊಡಲು ಸಾಧ್ಯವೇ? ಎಂದರು ಪ್ರಶ್ನಿಸಿದರು. ನಾನು ಹಿಂದೆ ಬೆಂಗಳೂರಿನ ಜಿಲ್ಲಾ ಪಂಚಾಯತಿ ಸದಸ್ಯನಾಗಿದ್ದೆ. ಹೀಗಿರುವಾಗ ನಮ್ಮ ಇತಿಹಾಸ ಕಳೆದುಕೊಳ್ಳಲು ಸಾಧ್ಯವೇ? ಜಿಲ್ಲೆಯ ಹೆಸರು ಬದಲಾವಣೆಯಿಂದ ಜನರ ಆಸ್ತಿ ಮೌಲ್ಯ ಹೆಚ್ಚಾಗಲಿದೆ. ಬೆಂಗಳೂರನ್ನು ಅಂತರರಾಷ್ಟ್ರೀಯ ನಗರವನ್ನಾಗಿ ಮಾಡಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮಾಡಿದ್ದೇವೆ, ಮೆಟ್ರೋ ಸುರಂಗಮಾರ್ಗ, ಡಬಲ್ ಡೆಕ್ಕರ್ ಹೀಗೆ ಹಲವಾರು ಯೋಜನೆ ರೂಪಿಸಿದ್ದೇವೆ ಎಂದರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್‌ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ











Click it and Unblock the Notifications