MGNREGA Scheme: ನರೇಗಾ ಯೋಜನೆ ಬದಲಾವಣೆಯಿಂದ ವಲಸೆ ಹೆಚ್ಚಾಗಲಿದೆ: ಸಿದ್ದರಾಮಯ್ಯ ಕಳವಳ
ಕೇಂದ್ರ ಸರ್ಕಾರವು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂ-ನರೇಗಾ)ಯ ಹೆಸರು ಮತ್ತು ಸ್ವರೂಪವನ್ನು ಬದಲಾಯಿಸಲು ಮುಂದಾಗಿದೆ. ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಕೂಡ ಕೇಂದ್ರದ ಈ ನಡೆಯನ್ನು ಖಂಡಿಸಿದ್ದಾರೆ. ನರೇಗಾ ಯೋಜನೆಯ ಸ್ವರೂಪ ಬದಲಾಗುವುದರಿಂದ ಜನರ ವಲಸೆ ಹೆಚ್ಚಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂ-ನರೇಗಾ)ಯ ಹೆಸರು ಮತ್ತು ಸ್ವರೂಪವನ್ನು ಬದಲಾಯಿಸಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಬಡವರು ಮತ್ತು ಮಹಾತ್ಮ ಗಾಂಧೀಜಿ ಬಗೆಗಿನ ತಮ್ಮ ದ್ವೇಷವನ್ನು ತಾವೇ ಬಯಲು ಮಾಡಿಕೊಂಡಿದ್ದಾರೆ ಎಂದು ಟೀಕಿಸಿದ್ದಾರೆ.

ಇಪ್ಪತ್ತು ವರ್ಷಗಳ ಹಿಂದೆ ಯುಪಿಎ ಸರ್ಕಾರ ಜಾರಿಗೊಳಿಸಿದ್ದ ನರೇಗಾ ಯೋಜನೆ ಗ್ರಾಮೀಣ ಪ್ರದೇಶದಲ್ಲಿನ ನಿರುದ್ಯೋಗ ಮತ್ತು ಬಡತನ ನಿರ್ಮೂಲನೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಪ್ರತಿಯೊಬ್ಬ ವ್ಯಕ್ತಿಗೂ ಉದ್ಯೋಗದ ಹಕ್ಕನ್ನು ಖಾತರಿಗೊಳಿಸಿದ ಈ ಯೋಜನೆ ದೇಶ-ವಿದೇಶದ ಆರ್ಥಿಕ ತಜ್ಞರ ಶ್ಲಾಘನೆಯನ್ನೂ ಪಡೆದಿದೆ. ನರೇಗಾವು ಉದ್ಯೋಗ ಖಾತರಿ ನೀಡುವ ಒಂದು ನೈಜ ಯೋಜನೆಯಾಗಿತ್ತು. ಆದರೆ ನರೇಂದ್ರ ಮೋದಿ ಅವರ ಸರ್ಕಾರದ ಪ್ರಸ್ತಾಪಿತ ಹೊಸ ರಚನೆಯು ಆ ಖಾತರಿಯನ್ನು ಕಸಿಯಲಿದೆ, ಉದ್ಯೋಗದ ಭರವಸೆಯನ್ನು ರಾಜಕೀಯ ನಾಯಕರ ಇಚ್ಛೆಗೆ ಬಿಟ್ಟುಬಿಡುತ್ತದೆ. ಇದು ಜಾತಿ ತಾರತಮ್ಯ ಮತ್ತು ಸಾಮಾಜಿಕ ಅಸಮಾನತೆಯನ್ನು ಇನ್ನಷ್ಟು ಆಳವಾಗಿಸಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ರಾಜ್ಯಗಳಿಗೆ ವೆಚ್ಚದ ಹೊರೆ
ಕೇಂದ್ರ ಸರ್ಕಾರವೇ ಸಂಪೂರ್ಣ ವೆಚ್ಚವನ್ನು ಭರಿಸುವ ನರೇಗಾ ಯೋಜನೆಯ ಸ್ವರೂಪವನ್ನೇ ಬದಲಾಯಿಸಿರುವ ಎನ್‌ಡಿಎ ಸರ್ಕಾರ, ಯೋಜನೆಯ ಶೇಕಡಾ 40ರಷ್ಟು ವೆಚ್ಚವನ್ನು ರಾಜ್ಯ ಸರ್ಕಾಗಳ ತಲೆಗೆ ಕಟ್ಟಿರುವುದು ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ದಿನದಿಂದ ಅನುಸರಿಸಿಕೊಂಡು ಬರುತ್ತಿರುವ ಒಕ್ಕೂಟ ವಿರೋಧಿ ಧೋರಣೆಗೆ ಸಾಕ್ಷಿಯಾಗಿದೆ. ಈ ನಡೆಯಿಂದ ಬಡವರು ಕೆಲಸ ಹುಡುಕಿಕೊಂಡು ವಲಸೆ ಹೋಗುವುದು ಹೆಚ್ಚಾಗಲಿದೆ. ಏಕೆಂದರೆ ಪ್ರಸ್ತಾಪಿತ ರೂಪದಲ್ಲಿ ಸ್ವಂತ ಸ್ಥಳದಲ್ಲಿ ಉದ್ಯೋಗ ಖಾತರಿಯಿಲ್ಲ, ಜೀವನ ನಿರ್ವಹಣೆಗಾಗಿ ಕುಟುಂಬಗಳು ದೂರದ ಪ್ರದೇಶಗಳಿಗೆ ಪ್ರಯಾಣ ಮಾಡಬೇಕಾಗಲಿದೆ ಎಂದಿದ್ದಾರೆ.
ಗ್ರಾಮಸ್ವರಾಜ್ಯದ ಕನಸನ್ನು ಬಿತ್ತಿಹೋಗಿದ್ದ ಮಹಾತ್ಮ ಗಾಂಧೀಜಿಯವರ ಹೆಸರನ್ನು ಈ ಯೋಜನೆಗೆ ಇಟ್ಟಿರುವುದು ಅರ್ಥಪೂರ್ಣವಾದ ನಿರ್ಧಾರವಾಗಿತ್ತು. ವಿದೇಶದಲ್ಲಿ ಸುತ್ತಾಡುವಾಗ ಗಾಂಧಿ ಭಜನೆ ಮಾಡುವ ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಮಾತ್ರ ಗಾಂಧೀಜಿ ಹೆಸರನ್ನು ಅಳಿಸಿಹಾಕುವ ಹುನ್ನಾರಗಳನ್ನು ನಡೆಸುತ್ತಲೇ ಇದ್ದಾರೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಮೆರೆಸಲು ಹೊರಟಿರುವ ಪರಿವಾರದಿಂದ ಇದಕ್ಕಿಂತ ಬೇರೆಯಾದುದನ್ನು ಹೇಗೆ ನಿರೀಕ್ಷಿಸಲು ಸಾಧ್ಯ ಎಂದು ಹರಿಹಾಯ್ದಿದ್ದಾರೆ.
ಯೋಜನೆಗಳ ಹೆಸರು ಬದಲಾವಣೆಯೇ ಸಾಧನೆ
ಹಿಂದಿನ ಸರ್ಕಾರಗಳಿಂದ ಆರಂಭಗೊಂಡ 25ಕ್ಕೂ ಹೆಚ್ಚು ಪ್ರಮುಖ ಕಾರ್ಯಕ್ರಮಗಳನ್ನು ಈಗಿನ ಸರ್ಕಾರವು ಕೇವಲ ಹೆಸರು ಬದಲಾಯಿಸಿದೆ ಅಥವಾ ಮರುಪ್ಯಾಕೇಜ್ ಮಾಡಿದೆ. ನಿರ್ಮಲ ಭಾರತ್ ಅಭಿಯಾನವನ್ನು ಸ್ವಚ್ಛ ಭಾರತ್ ಮಿಷನ್ ಎಂದು ಮರುನಾಮಕರಣ ಮಾಡಲಾಯಿತು. ಬೇಸಿಕ್ ಸೇವಿಂಗ್ಸ್ ಬ್ಯಾಂಕ್ ಡಿಪಾಸಿಟ್ ಅಕೌಂಟ್ ಯೋಜನೆಯನ್ನು ಪ್ರಧಾನ ಮಂತ್ರಿ ಜನ್ ಧನ್ ಯೋಜನಾ ಎಂದು ಮರುಬ್ರಾಂಡ್ ಮಾಡಲಾಯಿತು. ಅದೇ ರೀತಿ ರಾಜೀವ್ ಗ್ರಾಮೀಣ ವಿದ್ಯುದೀಕರಣ ಯೋಜನೆಯನ್ನು ದೀನ್ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆಗೆ ಸೇರಿಸಲಾಯಿತು. ಜವಾಹರಲಾಲ್ ನೆಹರು ರಾಷ್ಟ್ರೀಯ ನಗರ ನವೀಕರಣ ಮಿಷನ್ (ಜೆಎನ್‌ಎನ್‌ಯುಆರ್‌ಎಂ) ಅನ್ನು ಅಟಲ್ ಮಿಷನ್ ಫಾರ್ ರಿಜುವಿನೇಷನ್ ಅಂಡ್ ಅರ್ಬನ್ ಟ್ರಾನ್ಸ್‌ಫಾರ್ಮೇಷನ್ (ಅಮ್ರುತ್) ಎಂದು ಪರಿವರ್ತಿಸಲಾಯಿತು ಎಂದು ಪಟ್ಟಿ ನೀಡಿದ್ದಾರೆ.

ಈ ಬದಲಾವಣೆಗಳು ಮೂಲ ಉದ್ದೇಶವನ್ನು ಮೂಲಭೂತವಾಗಿ ಬಲಪಡಿಸುವ ಅಥವಾ ವಿಸ್ತರಿಸುವ ಬದಲು, ಕೇವಲ ಹೆಸರು ಬದಲಾಯಿಸುವ ನಿರಂತರ ಮಾದರಿಯನ್ನು ಪ್ರತಿಬಿಂಬಿಸುತ್ತವೆ. ನರೇಂದ್ರ ಮೋದಿ ಅವರು ಯುಪಿಎ ಸರ್ಕಾರದಡಿ ಆರಂಭಗೊಂಡ ಪ್ರಮುಖ ಯೋಜನೆಗಳನ್ನು ಉಳಿಸುವ ಅಥವಾ ಬಲಪಡಿಸುವ ಬದಲು, ಕೇವಲ ಹೆಸರು ಬದಲಾಯಿಸುವುದಕ್ಕೆ ಸೀಮಿತವಾಗಿದ್ದಾರೆ. ಈ ಸರ್ಕಾರಕ್ಕೆ "ಹೆಸರು ಬದಲಾಯಿಸುವ ಸಚಿವಾಲಯ"ವನ್ನು ಆರಂಭಿಸುವುದು ಸೂಕ್ತ. ಪ್ರಧಾನಮಂತ್ರಿಯೇ ಆ ಸಚಿವಾಲಯದ ನೇತೃತ್ವವನ್ನು ವಹಿಸುವುದು ಇನ್ನಷ್ಟು ಅರ್ಥಪೂರ್ಣವಾಗಿರಲಿದೆ ಎಂದು ವ್ಯಂಗ್ಯವಾಡಿದ್ದಾರೆ.
ಬಡವರ ಅನ್ನದ ಬಟ್ಟಲಿಗೆ ಕೈ ಹಾಕಿರುವ, ಬಾಪೂಜಿಗೆ ಅವಮಾನ ಮಾಡಿರುವ ಮತ್ತು ರಾಜ್ಯ ಸರ್ಕಾರಗಳ ಕತ್ತು ಹಿಸುಕಲು ಹೊರಟಿರುವ ನರೇಂದ್ರ ಮೋದಿ ಸರ್ಕಾರದ ಈ ಜನವಿರೋಧಿ ನಿರ್ಧಾರವನ್ನು ನಮ್ಮ ಪಕ್ಷ ಮತ್ತು ಸರ್ಕಾರ ಉಗ್ರವಾಗಿ ಖಂಡಿಸುತ್ತದೆ. ಇದರ ವಿರುದ್ದ ರಾಜ್ಯವ್ಯಾಪಿ ಹೋರಾಟವನ್ನು ನಡೆಸಲಿದೆ. ನರೇಗಾ ಯೋಜನೆಯನ್ನು ಅದರ ಮೂಲಸ್ವರೂಪದಲ್ಲಿಯೇ ಉಳಿಸಿಕೊಳ್ಳುವ ಜವಾಬ್ದಾರಿಯನ್ನು ಯೋಜನೆಯ ಲಕ್ಷಾಂತರ ಫಲಾನುಭವಿಗಳು ಕೂಡ ವಹಿಸಿಕೊಳ್ಳಬೇಕು. ರಾಜ್ಯದ ಬಿಜೆಪಿ ನಾಯಕರನ್ನು ಹಿಡಿದು ನಿಲ್ಲಿಸಿ, ಈ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಧ್ವನಿ ಎತ್ತುವಂತೆ ಒತ್ತಡ ಹೇರಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications