ಕೆಲಸ ಮಾಡದೇ ಫೋಟೋ ಅಪ್‌ಲೋಡ್‌? ಉದ್ಯೋಗ ಖಾತ್ರಿ ಅಕ್ರಮಕ್ಕೆ ಈಶ್ವರ್‌ ಖಂಡ್ರೆ ಬ್ರೇಕ್‌!

ಬೆಂಗಳೂರು: ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGS)ಯಡಿ ಕೆಲಸ ನಿರ್ವಹಿಸದೇ, ಕೆಲಸ ಮಾಡಿರುವುದಾಗಿ ತೋರಿಸಲು ಸುಳ್ಳು ಫೋಟೋಗಳನ್ನು ಅಪ್‌ಲೋಡ್‌ ಮಾಡಿರುವ ಆರೋಪಗಳ ಕುರಿತು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಗಂಭೀರವಾಗಿ ಪರಿಗಣಿಸಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಯಂತ್ರದಿಂದ ಉಳಿಮೆ ಮಾಡಿರುವ ಭೂಮಿಯಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಫಲಾನುಭವಿಗಳನ್ನು ಕೂರಿಸಿ ಫೋಟೋ ತೆಗೆದು ವಂಚಿಸಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ತನಿಖೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಆದೇಶ ನೀಡಿದ್ದಾರೆ.

MGNREGA Fake Photos Uploaded Without Doing Work Under MGNREGA Eshwar Khandre Orders Probe

ಈ ಸಂಬಂಧ ಇಲಾಖೆಯ ಕಾರ್ಯದರ್ಶಿಯವರಿಗೆ ಸಚಿವರ ಕಚೇರಿಯಿಂದ ಲಿಖಿತ ಸೂಚನೆ ನೀಡಿದ್ದು, ಚಾಮರಾಜನಗರ ತಾಲೂಕು, ಮಾದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೆಲವು ಅಧಿಕಾರಿಗಳು ಉಳಿಮೆ ಮಾಡಿರುವ ಜಮೀನಿನಲ್ಲಿ ಗ್ರಾಮದ ಮಹಿಳೆಯರು ಮತ್ತು ಪುರುಷರನ್ನು ಕೂರಿಸಿ ಫೋಟೋ ತೆಗೆದು, ಮಾನವ ದಿನ (ಪಿಡಿ) ಸೃಜನೆ ಆಗಿರುವಂತೆ ದಾಖಲಿಸಿ, 382 ರೂ. ಕೂಲಿ ಬದಲಾಗಿ 100 ರೂ. ಕೊಡಲಾಗುತ್ತಿದೆ ಎಂಬ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದ್ದು, ಇದರಿಂದ ಇಲಾಖೆಗೆ ಕೆಟ್ಟ ಹೆಸರು ಬರುವುದಲ್ಲದೆ, ಯೋಜನೆಯ ಮೂಲ ಉದ್ದೇಶವನ್ನೇ ನಾಶವಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ತಾಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ನೇತೃತ್ವದ ತಂಡದಿಂದ ತನಿಖೆ ನಡೆಸಿ, ಈ ರೀತಿ ಯೋಜನೆ ಉದ್ದೇಶವನ್ನೇ ಹಾಳು ಮಾಡುತ್ತಿರುವ ಅಧಿಕಾರಿಗಳ ವಿರುದ್ಧ ಕೈಗೊಳ್ಳಬೇಕಾದ ಶಿಸ್ತುಕ್ರಮದ ಶಿಫಾರಸಿನೊಂದಿಗೆ, ವಾಸ್ತವ ವರದಿಯನ್ನು 48 ಗಂಟೆಗಳ ಒಳಗಾಗಿ ಕಡತದಲ್ಲಿ ಮಂಡಿಸಲು ಈಶ್ವರ ಖಂಡ್ರೆ ನಿರ್ದೇಶನ ನೀಡಿದ್ದಾರೆ.

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಹಲವು ಭಾಗಗಳಲ್ಲಿ ಗ್ರಾಮೀಣ ಜನರು ಗುಳೆ ಹೋಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳಾಗುತ್ತಿದ್ದು, ವಲಸೆ ತಡೆಯಲು ಮತ್ತು ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಸಹಕಾರಿಯಾಗುವಂತಹ ಶಾಶ್ವತ ಆಸ್ತಿಗಳನ್ನು ಸೃಜಿಸಲು ಜಾಬ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ಸ್ಥಳದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆ ಅಡಿ ಗರಿಷ್ಠ ಉದ್ಯೋಗ ನೀಡುವಂತೆ ಸೂಚನೆ ನೀಡಲಾಗಿದೆ. ಆದರೆ ಕೆಲವು ಅಧಿಕಾರಿಗಳು ಹೀಗೆ ಉದ್ದೇಶವನ್ನೇ ಹಾಳು ಮಾಡುತ್ತಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಸ್ತೆ ಅಪಘಾತದಲ್ಲಿ 5 ಸಾವು: ಈಶ್ವರ ಖಂಡ್ರೆ ಸಂತಾಪ

ನೆರೆಯ ತೆಲಂಗಾಣದ ಜಹೀರಾಬಾದ್ ಬಳಿ ಇಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೀದರ್ ಜಿಲ್ಲೆ ಸಿಂಧೋಲ ಗ್ರಾ. ಪಂ. ವ್ಯಾಪ್ತಿಯ ರಾಜಗೀರಾ ಗ್ರಾಮದ 5 ಜನರು ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆಯ ಬಗ್ಗೆ ತೀವ್ರ ದಿಗ್ಭ್ರಮೆ ವ್ಯಕ್ತಪಡಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಬೀದರ್ ನಲ್ಲಿಂದು ಹೇಳಿಕೆ ನೀಡಿರುವ ಅವರು, ಇದು ಅತ್ಯಂತ ಹೃದಯ ವಿದ್ರಾವಕ ಘಟನೆ, ನೆರೆಯ ತೆಲಂಗಾಣಕ್ಕೆ ಹೋಗದ್ದವರು, ಮರಳಿ ಸ್ವಗ್ರಾಮಕ್ಕೆ ಬರುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂಬ ಮಾಹಿತಿ ಇದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಹಾಗೂ ಮೃತ ದೇಹಗಳ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲು ತೆಲಂಗಾಣದ ಆಡಳಿತದೊಂದಿಗೆ ಸತತ ಸಂಪರ್ಕದಲ್ಲಿರುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಚಿಕಿತ್ಸಾ ವೆಚ್ಚವನ್ನು ಭರಿಸುವಂತೆಯೂ ಬೀದರ್ ಜಿಲ್ಲಾಡಳಿತಕ್ಕೆ ಅವರು ಸೂಚನೆ ನೀಡಿದ್ದಾರೆ. ಈ ನೋವಿನ ಸಂದರ್ಭದಲ್ಲಿ ಮೃತರ ಕುಟುಂಬದೊಂದಿಗೆ ಕರ್ನಾಟಕ ಸರ್ಕಾರ ನಿಲ್ಲುತ್ತದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+