ಮೈಕ್ರೋ ಫೈನಾನ್ಸ್‌ ಶಾಕಿಂಗ್‌: ರಾಜ್ಯದಲ್ಲಿ ಇಷ್ಟು ಸಾವಿರ ಕೋಟಿ ರೂ. ಸಾಲ!

Microfinance Harassment: ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಮೈಕ್ರೋಫೈನಾನ್ಸ್‌ ಕಿರುಕುಳ ಹೆಚ್ಚಾಗಿದೆ. ಇದರ ನಡುವೆಯೇ ಎಷ್ಟು ಜನರಿಗೆ ಹಾಗೂ ಎಷ್ಟು ಕೋಟಿ ಸಾಲ ಕೊಡಲಾಗಿದೆ ಎನ್ನುವ ವಿಷಯವನ್ನು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರೇ ಶಾಕಿಂಗ್‌ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಮೈಕ್ರೋಫೈನಾನ್ಸ್‌ ಕಿರುಕುಳ ತಪ್ಪಿಸುವುದಕ್ಕೆ ಅಗತ್ಯ ಹಾಗೂ ಕಠಿಣ ಕಾನೂನು ರೂಪಿಸುವುದರ ಬಗ್ಗೆಯೂ ಮಾತನಾಡಿದ್ದಾರೆ.‌ ಕರ್ನಾಟಕದಲ್ಲಿ ಮೈಕ್ರೋಫೈನಾನ್ಸ್‌ಗೆ ಸಂಬಂಧಿಸಿದಂತೆ ಈಗಾಗಲೇ ಕಾನೂನುಗಳಿವೆ. ಅವುಗಳನ್ನು ಯಾವ ರೀತಿ ಹೊಸ ಕಾನೂನಿಗೆ ಸೇರಿಸಬಹುದು ಎಂಬುದನ್ನು ಪರಿಶೀಲಿಸುವಂತೆ‌ ಮುಖ್ಯಮಂತ್ರಿಗಳು ಹೇಳಿದ್ದಾರೆ. ಎರಡು ಮೂರು ದಿನದೊಳಗೆ ಎಲ್ಲವೂ ಅಂತಿಮವಾಗಲಿದೆ ಅಂತ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ.

ಮುಖ್ಯಮಂತ್ರಿಗಳು ನಿನ್ನೆಯ ಸಭೆಯಲ್ಲಿ ಕಾನೂನು ಸೆಕ್ರೆಟರಿಗಳಿಗೆ, ಪಾರ್ಲಿಮೆಂಟರಿ ಸೆಕ್ರೆಟರಿಗಳಿಗೆ ಸೂಚಿಸಿದ್ದಾರೆ. ಶೀಘ್ರವಾಗಿ ಮಾಡುತ್ತಾರೆ. ಮೈಕ್ರೋಫೈನಾನ್ಸ್ ಸಂಸ್ಥೆಗಳು ದೌರ್ಜನ್ಯ ಮಾಡುತ್ತಿರುವ ಕಾರಣಕ್ಕಾಗಿ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ‌. ಊರು ಬಿಟ್ಟು ಹೋಗುತ್ತಿದ್ದಾರೆ. ಇದು ನಿಲ್ಲಬೇಕಿದೆ. ಇದಕ್ಕೆ ಮುಖ್ಯವಾಗಿ ಕಾನೂನು ತರಬೇಕಿದೆ ಎಂದಿದ್ದಾರೆ.

Micro Finance Shocking 59 000 Crore Loans in Karnataka

ನನ್ನ ಕ್ಷೇತ್ರದಲ್ಲಿ 2.50 ಲಕ್ಷ ರೂ. ಸಾಲ ತೆಗೆದುಕೊಂಡಿದ್ದಾರೆ. ಅದಕ್ಕೆ 4.50 ಲಕ್ಷ ರೂ. ವಾಪಸ್ ಕಟ್ಟಿದ್ದಾರೆ. ಆದರೂ ಇನ್ನು 80 ಸಾವಿರ ರೂ. ಕಟ್ಟಬೇಕು ಅಂತ ಮನೆಗೆ ಬೀಗ ಹಾಕಿ, ಮನೆ ಮೇಲೆ ಬರೆದಿದ್ದಾರೆ. ಕುಟುಂಬಸ್ಥರು ಊರು ಬಿಟ್ಟು ಹೋಗಿದ್ದರು. ನನ್ನ ಗಮನಕ್ಕೆ ಬಂದ‌‌ಕೂಡಲೇ ಜಿಲ್ಲಾಧಿಕಾರಿ, ಎಸ್‌ಪಿ ಅವರನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ತಪ್ಪಿತಸ್ಥರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಮನೆ ಬಿಟ್ಟು ಹೋಗಿದ್ದವರನ್ನು ವಾಪಸ್ ಕರೆತರಲಾಗಿದೆ. ಮನೆಗೆ ಪೇಂಟ್ ಮಾಡಿಸಿ ಕೊಡಲಾಗಿದೆ. ಇಂತಹ ಘಟನೆಗಳನ್ನು ನಿಲ್ಲಿಸಲು ಕಾನೂನು ಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಕರ್ನಾಟಕದಲ್ಲಿ 59 ಸಾವಿರ ಕೋಟಿ ಸಾಲ!

ಕರ್ನಾಟಕದಲ್ಲಿ ಮೈಕ್ರೋಫೈನಾನ್ಸ್‌ಗಳ ಕಿರುಕುಳದ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತಿರುವಾಗಲೇ ಎಷ್ಟು ಜನರಿಗೆ ಎಷ್ಟು ಸಾಲ ನೀಡಲಾಗಿದೆ ಎನ್ನುವ ಬಗ್ಗೆಯೂ ಚರ್ಚೆ ನಡೆದಿದೆ. ಮೈಕ್ರೋಫೈನಾನ್ಸ್ ಸೆಟಲ್‌ಮೆಂಟ್ ಬೇರೆ ವಿಚಾರ ಎಂದು ಜಿ. ಪರಮೇಶ್ವರ್‌ ಅವರು ಹೇಳಿದ್ದಾರೆ. ರಾಜ್ಯದಲ್ಲಿ 59 ಸಾವಿರ ಕೋಟಿ ರೂ. ಸಾಲ ಕೊಡಲಾಗಿದೆ. ಇದರ ಬಗ್ಗೆ ಹೆಚ್ಚು ಒತ್ತು ನೀಡಲು ಹೋಗಿಲ್ಲ. ಕೂಡಲೇ ಕಾನೂನು ತಂದು ದೌರ್ಜನ್ಯ ತಡೆಯಬೇಕಿದೆ. ಎಂಎಫ್‌ಐಗಳು ಕೋರ್ಟ್‌ಗೆ ಹೋಗುತ್ತಾರೆ ಎಂಬುದು ಗಮನಕ್ಕೆ ಇದೆ. ಅವರು ಕೋರ್ಟ್‌ಗೆ ಹೋಗದಿರುವಂತಹ ಕಾನೂನು ರೂಪಿಸುವ ಅವಶ್ಯಕತೆ ಇದೆ. ಈ ಬಗ್ಗೆಯೂ ನಾವು ಸಭೆಯಲ್ಲಿ ಚರ್ಚೆ‌ ಮಾಡಿದ್ದೇವೆ ಎಂದಿದ್ದಾರೆ.

ವಿಧಾನ ಪರಿಷತ್ ಸದಸ್ಯರ ನಾಮನಿರ್ದೇಶನದ ಬಗ್ಗೆ ಮಾತನಾಡಿದ ಅವರು, ರಾಜ್ಯಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರನ್ನು ನಾಮನಿರ್ದೇಶನ ಮಾಡುವಾಗ ನಮ್ಮ‌ ಪಕ್ಷದಲ್ಲಿ ಕೆಲವು ಪದ್ಧತಿಗಳಿವೆ.‌ ಎಲ್ಲರ ಪರವಾಗಿ ಮುಖ್ಯಮಂತ್ರಿಗಳು ಮತ್ತು ಅಧ್ಯಕ್ಷರು‌ ಮಾಡುತ್ತಾರೆ. ವಿವಿಧ ನಿಗಮ ಮಂಡಳಿಗೆ ಸದಸ್ಯರ ಆಯ್ಕೆಯನ್ನು ಅಂತಿಮಗೊಳಿಸಿ, ಪಟ್ಟಿಯನ್ನು ಮುಖ್ಯಮಂತ್ರಿಗಳಿಗೆ ಮತ್ತು ಕೆಪಿಸಿಸಿ ಅಧ್ಯಕ್ಷರಿಗೆ ನೀಡಿದ್ದೇನೆ.‌ ಕಾರ್ಯಕರ್ತರದ್ದು ಅಧ್ಯಕ್ಷರು‌ ಮಾಡಬೇಕಿದೆ ಎಂದು ಹೇಳಿದ್ದಾರೆ.

ಸಚಿವರೊಂದಿಗೆ ಸಭೆ ಮಾಡಿಲ್ಲ: ಸಚಿವರಾದ ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ, ಹೆಚ್.ಸಿ.ಮಹದೇವಪ್ಪ ಅವರೊಂದಿಗೆ ಯಾವುದೇ ರೀತಿಯ ಸಭೆ ಮಾಡಿಲ್ಲ ಎಂದು ಪರಮೇಶ್ವರ ಅವರು ಸ್ಪಷ್ಟಪಡಸಿದ್ದಾರೆ. ಗುರುವಾರ ವಾಲ್ಮೀಕಿ ಸಮುದಾಯದ ಸ್ವಾಮೀಜಿಯವರು ಜಾತ್ರೆಗೆ ಆಹ್ವಾನಿಸಲು ವಿಧಾನಸೌದದ ನನ್ನ ಕಾರ್ಯಾಲಯಕ್ಕೆ ಬಂದಿದ್ದರು. ರಾಜಣ್ಣ, ಸತೀಶ್ ಜಾರಕಿಹೊಳಿಯವರಿಗೆ ಸ್ವಾಮೀಜಿಯವರು ನನ್ನ ಕಾರ್ಯಾಲಯದಲ್ಲಿ ಇದ್ದಾರೆ ಎಂಬುದು ಗೊತ್ತಾಗಿ ಅಲ್ಲಿಗೆ ಬಂದರು. ಸ್ವಾಮೀಜಿಯವರ ಆಶೀರ್ವಾದ ತೆಗೆದುಕೊಂಡು ಹೋದರು ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+