ಸಬ್ಸಿಡಿ ಹೆಸರಲ್ಲಿ ಮೈಕ್ರೋ ಫೈನಾನ್ಸ್ ಸಾಲ: ಸಚಿವ ಸತೀಶ್ ಜಾರಕಿಹೊಳಿ
ಕರ್ನಾಟಕದಲ್ಲಿ ಕಳೆದ ಒಂದು ತಿಂಗಳಿನಿಂದ ಮೈಕ್ರೋ ಫೈನಾನ್ಸ್ ಕಿರುಕುಳ ಪ್ರಕರಣಗಳ ಬಗ್ಗೆ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ರಾಜ್ಯದಲ್ಲಿ ಫೈನಾನ್ಸ್ ಕಿರುಕುಳ ಎನ್ನುವುದು ವಿಪರೀತ ಹಂತಕ್ಕೆ ತಲುಪಿದ್ದು, ಇದೀಗ ರಾಜ್ಯ ಸರ್ಕಾರವು ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಬೆಳಗಾವಿಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ಕೊಟ್ಟಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಿರುಕುಳ ಕೊಡುವ ವರದಿಗಳು ಬರ್ತಿವೆ. ತೊಂದರೆ ಕೊಟ್ಟರೆ ದೂರು ದಾಖಲು ಮಾಡುವಂತೆ ತಿಳಿಸಿದ್ದೇವೆ ಎಂದಿದ್ದಾರೆ.
ಫೈನಾನ್ಸ್ ಕಿರುಕುಳದ ಬಗ್ಗೆ ಗೊಂದಲ ಇದೆ. ಸಾಲ ಪಡೆಯೋದು, ಕಿರುಕುಳ ಕೋಡೊದು ಬೇರೆ ವಿಚಾರ. ಸಬ್ಸಿಡಿ ಹೆಸರಿನಲ್ಲಿ ಸಾವಿರಾರು ಜನರಿಗೆ ಸಾಲ ಕೊಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ. ಹಣ ತುಂಬುವ ವಿಚಾರದಲ್ಲಿ ಈಗ ಸಂಘರ್ಷ ಆರಂಭವಾಗಿದೆ. ಅಲ್ಲದೆ ಈಗಾಗಲೇ ಡಿಸಿ ನೇತೃತ್ವದಲ್ಲಿ ಒಂದು ಸಭೆ ನಡೆಸಿದ್ದೇನೆ ಎಂದು ಅವರು ಹೇಳಿದ್ದಾರೆ. ಎರಡು ತಿಂಗಳ ಸಮಯ ಕೇಳಿದ್ದೇವೆ. ಈ ನಿಟ್ಟಿನಲ್ಲಿ ಒಂದು ನಿರ್ದಿಷ್ಟ ಪರಿಹಾರವನ್ನು ಕಂಡುಕೊಳ್ಳಲಾಗವುದು. ಇನ್ನೊಂದು ತಿಂಗಳಲ್ಲಿ ಸಾಧ್ಯವಿರುವ ಪರಿಹಾರ ತೆಗೆದುಕೊಳ್ಳಿದ್ದೇವೆ ಎಂದು ಭರವಸೆ ನೀಡಿದ್ದಾರೆ.

ಶಿರೂರನಲ್ಲಿ ಮೈಕ್ರೋ ಫೈನಾನ್ಸ್‌ಗೆ ಸಂಬಂಧಿಸಿದಂತೆ ಮಹಿಳೆ ಆತ್ಮಹತ್ಯೆ ಪ್ರಕರಣ ನಡೆದಿದೆ. ದೂರು ದಾಖಲು ಮಾಡಲು ಸೂಚನೆ ನೀಡಲಾಗಿದೆ.
ಮಧ್ಯವರ್ತಿಗಳೊಂದಿಗೆ ಫೈನಾನ್ಸ್ ಅವರು ಸೇರಿದ್ದಾರೆ ಎನ್ನುವ ಆರೋಪ ಇದೆ. ಮಧ್ಯವರ್ತಿಗಳಿಗೆ ಹಣ ಕೊಟ್ಟಿದ್ದಾರೆ, ಪೊಲೀಸ್ ತನಿಖೆ ನಡೆಸುವಂತೆ ಸೂಚನೆ ಕೊಡಲಾಗಿದೆ. ಈ ಸಂಬಂಧ ವರದಿ ಬಂದ ಕೂಡಲೇ ಸಂಬಂಧಪಟ್ಟವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇನ್ನು ಮೈಕ್ರೋ ಫೈನಾನ್ಸ್‌ಗೆ ಸಂಬಂಧಿಸಿದಂತೆ ಗಂಭೀರ ವಿಚಾರಗಳು ರಾಜ್ಯದಲ್ಲಿ ಚರ್ಚೆಯಾಗುತ್ತಿವೆ. ಇದರ ನಡುವೆಯೇ ಕಿರುಕುಳ ಮುಂದುವರಿದಿದೆ
ತಾರಿಹಾಳದಲ್ಲಿ ಒಂದು ತಿಂಗಳ ಬಾಣಂತಿ ಅವರನ್ನು ಮನೆಯಿಂದ ಹೊರಹಾಕಿ ಮನೆ ಹರಾಜಿಗಿಟ್ಟ ಪ್ರಕರಣದ ಬಗ್ಗೆಯೂ ಅವರು ಮಾತನಾಡಿದ್ದಾರೆ. ಕುಟುಂಬಸ್ಥರು ದೂರು ಕೊಟ್ಟರೆ, ಫೈನಾನ್ಸ್ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಇನ್ನು ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸಭೆ ನಡೆಸಲಿದ್ದಾರೆ.
ಶ್ರೀರಾಮಲು ಕಾಂಗ್ರೆಸ್ ಸೇರ್ಪಡೆ ಚರ್ಚೆ ಎಂದ ಸತೀಶ ಜಾರಕಿಹೊಳಿ
ಇನ್ನು ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಶ್ರೀರಾಮುಲು ಅವರು ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆಯೇ ಎನ್ನುವ ವಿಚಾರದ ಬಗ್ಗೆಯೂ ಸತೀಶ ಜಾರಕಿಹೊಳಿ ಅವರು ರಿಯಾಕ್ಟ್ ಮಾಡಿದ್ದಾರೆ. ಈ ಚರ್ಚೆಯಲ್ಲಿ ಇದೆ. ಆದರೆ ನಮಗೂ ಅದರ ಬಗ್ಗೆ ಸ್ಪಷ್ಟವಾಗಿ ಮಾಹಿತಿ ಇಲ್ಲ. ಈ ಸಂಬಂಧ ಬೆಂಗಳೂರು ಹೋಗಿ ಸಂಪೂರ್ಣ ಮಾಹಿತಿ ಪಡೆಯುವೆ ಎಂದಿದ್ದಾರೆ. ಈ ನಿಟ್ಟಿನಲ್ಲಿ ಪೂರ್ಣ ಪ್ರಮಾಣದಲ್ಲಿ ಏನು ಬೆಳವಣಿಗೆ ಆಗಿದೆ ಎನ್ನುವುದು ಗೊತ್ತಿಲ್ಲ. ಮಾಧ್ಯಮಗಳಲ್ಲಿ ಅಷ್ಟೇ ನೋಡಿದ್ದೇನೆ. ಬೆಂಗಳೂರಿಗೆ ಹೋದ ಮೇಲೆ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದಷ್ಟೇ ಅವರು ಹೇಳಿದ್ದಾರೆ.












Click it and Unblock the Notifications