ಮೈಕ್ರೋ ಫೈನಾನ್ಸ್: ಸರ್ಕಾರದ ಈ ನಡೆಯಿಂದ ಜನ ಆತ್ಮಹತ್ಯೆಗೆ ಶರಣು: ಅಂಕಿ ಸಂಖ್ಯೆ ವಿವರಿಸಿದ ಆರ್.ಅಶೋಕ್
ಬೆಂಗಳೂರು, ಜನವರಿ 27: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಾಲ ನೀಡಿ, ಹೆಚ್ಚು ಬಡ್ಡಿ ಹೇರಿಕೆ, ಮರು ಪಾವತಿಗೆ ನೀಡಿದ ಕಿರುಕುಳದಿಂದ ಜನರು ಸಾವನ್ನಪ್ಪಿದ್ದಾರೆ. ಊರುಗಳನ್ನು ತೊರೆದಿದ್ದಾರೆ. ಅವರ ಬದುಕು ದುಸ್ತರವಾಗಿದೆ. ಇದಕ್ಕೆಲ್ಲ ರಾಜ್ಯ ಸರ್ಕಾರವೇ ಕಾರಣ ಎನ್ನುವಂತೆ ಬಿಜೆಪಿ ವಿಪಕ್ಷ ನಾಯಕ ಆರ್.ಅಶೋಕ್ ಅವರು ಗಂಭೀರ ಆರೋಪ ಮಾಡಿದ್ದಾರೆ. ಜೊತೆಗೆ ಸರ್ಕಾರ ನಿರ್ಧಾರಗಳು ಸೇರಿದಂತೆ ಅಂಕಿ ಸಮೇತವಾಗಿ ವಿವರಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಾಡಿದ ಪಾಪದಿಂದಾಗಿ ಜನರು ಮೈಕ್ರೋ ಫೈನಾನ್ಸ್‌ನಲ್ಲಿ ಸಾಲ ಪಡೆಯುತ್ತಿದ್ದಾರೆ. ಸರ್ಕಾರವೇ ಸಾಲ ನೀಡಿದ್ದರೆ ಜನರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಗಂಗಾ ಕಲ್ಯಾಣ ಯೋಜನೆಗೆ 2022-23 ರಲ್ಲಿ ಬಿಜೆಪಿ ಸರ್ಕಾರ 60 ಕೋಟಿ ರೂ. ಅನುದಾನ ನೀಡಿತ್ತು. 2024-25 ರಲ್ಲಿ ಕಾಂಗ್ರೆಸ್ 40 ಕೋಟಿ ರೂ. ನೀಡಿದೆ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 100 ಕೋಟಿ ರೂ. ನೀಡಿದರೆ, ಕಾಂಗ್ರೆಸ್ 45 ಕೋಟಿ ರೂ. ನೀಡಿದೆ.
ತಾಂಡಾ ಅಭಿವೃದ್ಧಿ ನಿಗಮದ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ 110 ಕೋಟಿ ರೂ. ನೀಡಿದರೆ ಕಾಂಗ್ರೆಸ್ 60 ಕೋಟಿ ರೂ. ಹಂಚಿದೆ. ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 100 ಕೋಟಿ ರೂ., ಕಾಂಗ್ರೆಸ್ ಮಾತ್ರ 50 ಕೋಟಿ ರೂ. ಕೊಟ್ಟಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರದಿಂದ ಹಣ ಫ್ರೀಜ್ ಆಗಿದೆ. ನಿಗಮಗಳಿಗೆ 1,700 ಕೋಟಿ ರೂ. ನೀಡಬೇಕಿದ್ದು, 643 ಕೋಟಿ ರೂ. ಮಾತ್ರವೇ ಜಾರಿ ಮಾಡಿದೆ.

ಅಂದರೆ ಎಲ್ಲ ನಿಗಮಗಳಿಗೆ ಒಟ್ಟು 1,055 ಕೋಟಿ ರೂ. ಕೊರತೆಯಾಗಿದೆ. ಈ ಹಣದಲ್ಲಿ ಜನರಿಗೆ ಸಾಲ ನೀಡಬಹುದಿತ್ತು. ಕೊರತೆಯಾದ ಹಣವನ್ನು ಸಾಲವಾಗಿ ಮೈಕ್ರೋ ಫೈನಾನ್ಸ್‌ಗಳು ನೀಡುತ್ತಿವೆ ಎಂದು ಅವರು ತಿಳಿಸಿದರು.
ಪ್ರತಿ ಬಜೆಟ್‌ನಲ್ಲೂ ಅನುದಾನ ಶೇ.20 ರಷ್ಟು ಹೆಚ್ಚಾಗಬೇಕು. 2022-23 ರಲ್ಲಿ ಬಿಜೆಪಿ ಸರ್ಕಾರ ಕೃಷಿ ಇಲಾಖೆಗೆ 7,288 ಕೋಟಿ ರೂ. ನೀಡಿದರೆ, ಕಾಂಗ್ರೆಸ್ ಕೇವಲ ಸರ್ಕಾರ 5,035 ಕೋಟಿ ರೂ. ನೀಡಿದೆ. ಅಂದರೆ 2,253 ಕೋಟಿ ರೂ. ಕೊರತೆಯಾಗಿದೆ. ಇದು ರೈತರ ಬದುಕಿನ ಮೇಲೆ ಪರಿಣಾಮ ಬೀರಿದೆ. ತೋಟಗಾರಿಕಾ ಇಲಾಖೆಗೆ ಬಿಜೆಪಿ 1,374 ಕೋಟಿ ರೂ. ನೀಡಿದರೆ, ಕಾಂಗ್ರೆಸ್ 1,207 ಕೋಟಿ ರೂ. ನೀಡಿದೆ. ಕೃಷಿ, ತೋಟಗಾರಿಕೆ, ಗ್ರಾಮೀಣಾಭಿವೃದ್ಧಿ, ಸಹಕಾರಿ ಎಲ್ಲ ಸೇರಿ ಬಿಜೆಪಿ 15,383 ಕೋಟಿ ರೂ. ನೀಡಿದರೆ, ಕಾಂಗ್ರೆಸ್ 14,768 ಕೋಟಿ ರೂ. ನೀಡಿದೆ. ಇದರಿಂದ ಬರೀ 614 ಕೋಟಿ ರೂ. ಕೊರತೆ ಉಂಟಾಗಿದೆ.
ಬಿಜೆಪಿ ಕಂದಾಯ ಇಲಾಖೆಗೆ 1534 ಕೋಟಿ ರೂ.ನೀಡಿತ್ತು. ಸದ್ಯ ಕಾಂಗ್ರೆಸ್‌ನಿಂದ ಕೇವಲ 940 ಕೋಟಿ ರೂ. ನೀಡಲಾಗಿದೆ. 594 ಕೋಟಿ ರೂ. ಕೊರತೆಯಾಗಿದೆ. ಲೋಕೋಪಯೋಗಿ ಇಲಾಖೆಗೆ ಬಿಜೆಪಿ 12,410 ಕೋಟಿ ರೂ. ನೀಡಿದರೆ, ಕಾಂಗ್ರೆಸ್‌ನಿಂದ 9,699 ಕೋಟಿ ರೂ. ನೀಡಲಾಗಿದೆ. 2,710 ಕೋಟಿ ರೂ. ಕೊರತೆಯಾಗಿದೆ. ನೀರಾವರಿಗೆ ಬಿಜೆಪಿ 19,610 ಕೋಟಿ ರೂ. ಒದಗಿಸಿದ್ದರೆ, ಕಾಂಗ್ರೆಸ್ 16,834 ಕೋಟಿ ರೂ. ನೀಡಿದೆ. ಇದರಿಂದ 2755 ಕೋಟಿ ರೂ. ಕೊರತೆಯಾಗಿದೆ.
ರಾಜ್ಯ ಸರ್ಕಾರ ಸಾಲ ನೀಡಬೇಕಿತ್ತು!
ಮೈಕ್ರೋ ಫೈನಾನ್ಸ್‌ನ ಮೀಟರ್ ಬಡ್ಡಿ ದಂಧೆಯಲ್ಲಿ ರೌಡಿಗಳು ಈವರೆಗೆ ಸುಮ್ಮನಿದ್ದರು. ಕಾಂಗ್ರೆಸ್ ಸರ್ಕಾರದಿಂದಾಗಿ ರೌಡಿಗಳಿಗೆ ಉದ್ಯೋಗ ಸಿಕ್ಕಿದೆ. ಬಡ ಜನರು ಸಾಲ ಮಾಡಿದರೆ ಮನೆ ಬಿಟ್ಟು ಹೊರಡಬೇಕಾಗಿದೆ. ಜನರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಹಿಂದಿನ ಬಿಜೆಪಿ ಸರ್ಕಾರ ಸಾಲ ನೀಡುತ್ತಿತ್ತು. ಈಗ ಕಾಂಗ್ರೆಸ್ ಸರ್ಕಾರ ನಿಗಮಗಳ ಮೂಲಕ ಸಾಲ ನೀಡದೆ, ಜನರು ಅನಿವಾರ್ಯವಾಗಿ ಮೈಕ್ರೋ ಫೈನಾನ್ಸ್‌ಗಳ ಮೊರೆ ಹೋಗಿದ್ದಾರೆ ಎಂದು ದೂರಿದರು.
ಮೈಕ್ರೋ ಫೈನಾನ್ಸ್‌ನಲ್ಲಿ 10 ಜನರ ಗುಂಪು ರಚಿಸಿ, ಪ್ರತಿಯೊಬ್ಬರಿಗೂ 50 ಸಾವಿರ ರೂ. ಸಾಲ ನೀಡುತ್ತಾರೆ. ಒಬ್ಬರಿಗೆ ಉಳಿದವರು ಶೂರಿಟಿ ಕೊಡಬೇಕಾಗುತ್ತದೆ. ಪ್ರತಿ ತಿಂಗಳು ಅಧಿಕ ಬಡ್ಡಿ ಕಟ್ಟಬೇಕಾಗುತ್ತದೆ. 50 ಸಾವಿರ ರೂ. ಸಾಲ ಪಡೆದರೆ 67 ಸಾವಿರ ರೂ. ವಾಪಸ್ ನೀಡಬೇಕು. ಎರಡು ತಿಂಗಳು ಕಟ್ಟಲಿಲ್ಲವೆಂದರೆ ರೌಡಿಗಳು ಮನೆಗೆ ಹೋಗಿ ಗಲಾಟೆ ಮಾಡುತ್ತಾರೆ. ಅನೇಕ ಹಳ್ಳಿಗಳಲ್ಲಿ ಜನರು ಮನೆ ಬಿಟ್ಟು ವಲಸೆ ಹೋಗಿದ್ದಾರೆ ಎಂದು ತಿಳಿಸಿದರು.
ಕೋಟಿ ಲೂಟಿ ಬಳಿಕ ಕ್ರಮ
ಕೋಟೆ ಲೂಟಿಯಾದ ನಂತರ ಬಾಗಿಲು ಹಾಕಿದರು ಎಂಬಂತೆ, ಸಿಎಂ ಸಿದ್ದರಾಮಯ್ಯ ಈಗ ಹೊಸ ಕಾನೂನು ತರಲು ಮುಂದಾಗಿದ್ದಾರೆ. ನೋಟಿಸ್ ಕೊಡದೆ ಜನರನ್ನು ಮನೆಯಿಂದ ಹೊರಕ್ಕೆ ಕಳುಹಿಸಲಾಗಿದೆ. ಇಂತಹ ಸಮಯದಲ್ಲಿ ಪೊಲೀಸರು ಕ್ರಮ ಕೈಗೊಳ್ಳಬೇಕಿತ್ತು. ಆದರೆ ಪೊಲೀಸರು ಕೂಡ ಇದಕ್ಕೆ ಸಹಕಾರ ನೀಡಿದ್ದಾರೆ. ಕಂಟ್ರೋಲ್ ರೂಮ್ ರೂಪಿಸಿದರೂ ಅದರಿಂದ ಜನರಿಗೆ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿಎಂ ಸಿದ್ದರಾಮಯ್ಯ ಸಾಲ ಮನ್ನಾ ಬಗ್ಗೆ ಹೇಳಿದ್ದರಿಂದ ಡಿಸಿಸಿ ಬ್ಯಾಂಕ್‌ಗಳಿಗೆ ನಷ್ಟವಾಗಿದೆ. ಸಾಲ ಪಡೆದವರು ಕಾಂಗ್ರೆಸ್ ಸರ್ಕಾರವನ್ನು ನಂಬಿಕೊಂಡು ಕೂತಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾಂಗಲ್ಯ ಕಿತ್ತುಕೊಳ್ಳುತ್ತಾರೆಂದು ಪ್ರಧಾನಿ ಮೋದಿ ಹೇಳಿದ್ದು ಈಗ ನಿಜವಾಗಿದೆ. ಗೃಹಲಕ್ಷ್ಮಿಯ ಹಣ ಮಹಿಳೆಯರಿಗೆ ನಿಜವಾಗಿಯೂ ಸಿಕ್ಕಿದ್ದರೆ ಏಕೆ ಮೈಕ್ರೋ ಫೈನಾನ್ಸ್‌ಗೆ ಹೋಗುತ್ತಾರೆ ಎಂದು ಪ್ರಶ್ನೆ ಮಾಡಿದರು.
ಸರ್ವ ಧರ್ಮಿಯರಿಗೆ ಸಮಾನ ಕಾನೂನು ಅನ್ವಯ
ಏಕರೂಪ ನಾಗರಿಕ ಸಂಹಿತೆ ಜಾರಿಯಾದರೆ ಎಲ್ಲರೂ ಸಮಾನ ಎಂಬ ಭಾವನೆ ಬೆಳೆಯುತ್ತದೆ. ಬೇರೆ ದೇಶಗಳಲ್ಲಿ ಎಲ್ಲ ನಾಗರಿಕರು ಒಂದೇ ಎಂದು ಪರಿಗಣಿಸಲಾಗುತ್ತದೆ. ಅದೇ ರೀತಿ ಭಾರತದಲ್ಲೂ ಹಿಂದೂಗಳಿಗೆ ಇರುವ ಕಾನೂನು ಎಲ್ಲ ಧರ್ಮೀಯರಿಗೆ ಅನ್ವಯವಾಗಬೇಕು ಎಂದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ












Click it and Unblock the Notifications