ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿ.2ರಿಂದ ಬಿಸಿಯೂಟ ನೌಕರರ ಮುಷ್ಕರ

|
Google Oneindia Kannada News

midday meal
ಬೆಂಗಳೂರು, ನ.4 : ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ವೇತನ ಪರಿಷ್ಕರಣೆ ಮಾಡುವಂತೆ ಒತ್ತಾಯಿಸಿ ರಾಜ್ಯದಲ್ಲಿ ಬಿಸಿಯೂಟ ತಯಾರಿಸುವ ನೌಕರರು ಡಿ.2ರಿಂದ ತಮ್ಮ ಕಾರ್ಯವನ್ನು ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದ್ದಾರೆ.

ರಾಜ್ಯ ಸರ್ಕಾರ ಬಿಸಿಯೂಟದೊಂದಿಗೆ ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತಂದಿದೆ. ಆದರೆ, ಬಿಸಿಯೂಟ ನೌಕರರಿಗೆ ವೇತನ ಹೆಚ್ಚಳ ಮಾಡಿಲ್ಲ.ಆದ್ದರಿಂದ ರಾಜ್ಯದ 1.04ಲಕ್ಷ ಬಿಸಿಯೂಟ ತಯಾರಿಸುವ ನೌಕರರು ತಮ್ಮ ಕಾರ್ಯ ಸ್ಥಗಿತಗೊಳಿಸಿ, ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.

ಸದ್ಯ ಬಿಸಿಯೂಟ ತಯಾರಿಸುವ ಮುಖ್ಯ ಅಡುಗೆಯವರಿಗೆ 1,100 ಮತ್ತು ಅವರ ಸಹಾಯಕರಿಗೆ 1000 ರೂ. ವೇತನ ನೀಡಲಾಗುತ್ತಿದೆ. ಇದು 2009ರಲ್ಲಿ ನೀಡುತ್ತಿದ್ದ ವೇತನವಾಗಿದ್ದು, ಅಂದಿನಿಂದಲೂ ವೇತನ ಹೆಚ್ಚಳ ಮಾಡಿಲ್ಲ. ಸರ್ಕಾರ ವೇತನ ಹೆಚ್ಚಳ ಮಾಡುವ ಭರವಸೆ ನೀಡಿಲ್ಲ. ಆದ್ದರಿಂದ ಪ್ರತಿಭಟನೆ ಅನಿವಾರ್ಯವಾಗಿದೆ ಎಂದು ನೌಕರರು ಹೇಳಿದ್ದಾರೆ.

ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷರಾದ ವರಲಕ್ಷ್ಮೀ ಅವರು ಹೇಳುವಂತೆ ಸರ್ಕಾರಕ್ಕೆ ವೇತನ ಹೆಚ್ಚಳ ಮಾಡುವಂತೆ ಮನವಿ ಸಲ್ಲಿಸುತ್ತಾ ಬಂದಿದ್ದೇವೆ. ಆದರೆ, ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ನೌಕರರ ಪ್ರಮುಖ ಬೇಡಿಕೆಗಳೆಂದರೆ, ವೇತನವನ್ನು 3,000 ರೂ.ಗಳಿಗೆ ಹೆಚ್ಚಿಸಬೇಕು ಎಂದು ಪ್ರತಿಭಟನೆ ನಡೆಸುತ್ತೇವೆ. ಡಿ.2ರಿಂದ ಆರಂಭವಾಗುವ ಪ್ರತಿಭಟನೆ ಮೂರು ದಿನಗಳ ಕಾಲ ನಡೆಯಲಿದೆ. ಸರ್ಕಾರ ಸಮಸ್ಯೆಗೆ ಸ್ಪಂದಿಸದಿದ್ದರೆ, ಅಡುಗೆ ಕಾರ್ಯ ನಿಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಬಿಸಿಯೂಟ ನೌಕರರ ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್, ನೌಕರರ ವೇತನ ಹೆಚ್ಚಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಆದರೆ, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

English summary
Over 1.04 lakh midday meal workers are planning to launch an indefinite strike across the State from December 2 demanding salary hike, among other benefits. Karnataka Rajya Akshara Dasoha Naukarara Sangha State president S. Varalakshmi said, several memorandums presented to the authorities had gone in vain. The workers main demand is minimum salary of Rs. 3,000.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X