ಒಳ್ಳೆ ಸುದ್ದಿ: ಬೇಸಿಗೆ ರಜೆ ನಡುವೆಯೂ ಬರಪೀಡಿತ ತಾಲೂಕುಗಳ ಶಾಲೆಗಳಲ್ಲಿ ಮುಂದುವರೆಯಲಿದೆ ಮಧ್ಯಾಹ್ನದ ಬಿಸಿಯೂಟ
ಬೆಂಗಳೂರು, ಏಪ್ರಿಲ್.03: 2023-24 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರ ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಬರ ಪೀಡಿತ 31 ಕಂದಾಯ ಜಿಲ್ಲೆಗಳಲ್ಲಿ ಒಟ್ಟು 236 ರ ಪೈಕಿ 223 ಬರ ಪೀಡಿತ ತಾಲ್ಲೂಕುಗಳೆಂದು ಘೋಷಿಸಿದೆ. ಇದೇ ವೇಳೆ ಬರಗಾಲ ಪೀಡಿತ ಪ್ರದೇಶದಲ್ಲಿ ಬೇಸಿಗೆ ರಜೆಯಲ್ಲಿಯೂ ಸಹ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಬಿಸಿಯೂಟ ಮುಂದುವರೆಸಬೇಕು ಆದೇಶಿಸಿದೆ.
ಸರ್ವೋಚ್ಚ ನ್ಯಾಯಾಲಯುದ್ಧ ಆದೇಶಾನುಸಾರ ಬರಗಾಲ ಪೀಡಿತ ಪ್ರದೇಶದಲ್ಲಿ ಬೇಸಿಗೆ ರಜೆಯಲ್ಲಿಯೂ ಸಹ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1 ರಿಂದ 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟವನ್ನು ನೀಡಬೇಕಾಗಿರುತ್ತದೆ. ಪ್ರಸ್ತುತ 2024-25 ನೇ ಸಾಲಿನ ಬೇಸಿಗೆ ರಜೆಯ ಅವಧಿ ಏಪ್ರಿಲ್ 11 ರಿಂದ ಮೇ 28ರ ವರೆಗೆ ಇದ್ದು, ಒಟ್ಟು 41 ದಿನಗಳು ಮಧ್ಯಾಹ್ನ ಉಪಾಹಾರ ಯೋಜನೆ ಕಾರ್ಯಕ್ರಮವನ್ನು ಶಾಲೆಗಳಲ್ಲಿ ನಡೆಸಬೇಕು ಎಂದು ಸರ್ಕಾರ ಆದೇಶಿಸಿದೆ.

ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದು, 1 ರಿಂದ 8ನೇ ತರಗತಿವರೆಗಿನ ಸುಮಾರು 55 ಲಕ್ಷ ಸರಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳು ಇದರ ಪ್ರಯೋಜನ ಪಡೆಯಲಿದ್ದಾರೆ. ಬೇಸಿಗೆ ರಜೆಯ ಮಧ್ಯಾಹ್ನದ ಊಟದ ಕಾರ್ಯಕ್ರಮಕ್ಕೆ ಒಟ್ಟು 88.4 ಕೋಟಿ ವೆಚ್ಚವಾಗಲಿದೆ. 60:40 ಅನುಪಾತದಲ್ಲಿ ಕೇಂದ್ರ ಸರ್ಕಾರದ ಪಾಲು 55.82 ಕೋಟಿ ಮತ್ತು ರಾಜ್ಯ ಸರ್ಕಾರದ ಪಾಲು 32.58 ಕೋಟಿ ರೂಪಾಯಿ ಸರ್ಕಾರದಿಂದ ಬಿಡುಗಡೆಯಾಗಿದೆ.
2023-24ರ ಶೈಕ್ಷಣಿಕ ವರ್ಷಕ್ಕೆ ಮಧ್ಯಾಹ್ನದ ಊಟದ ಕಾರ್ಯಕ್ರಮವು ಏಪ್ರಿಲ್ 10 ರೊಳಗೆ ಕೊನೆಗೊಳ್ಳುತ್ತದೆ. ಕೇಂದ್ರದ ಬರ ನಿರ್ವಹಣೆ ಕೈಪಿಡಿ-2020 ಬರ ಪರಿಹಾರ ಮಾರ್ಗಸೂಚಿಗಳ ಪ್ರಕಾರ, ರಾಜ್ಯ ಸರ್ಕಾರವು ಸಮೀಕ್ಷೆ ನಡೆಸಿ ಒಟ್ಟು 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿದೆ. ಈ ತಾಲೂಕುಗಳಲ್ಲಿ ಏಪ್ರಿಲ್ ಮತ್ತು ಮೇ ತಿಂಗಳ 41 ದಿನಗಳ ಬೇಸಿಗೆ ರಜಾ ಅವಧಿಯಲ್ಲಿ ಬಿಸಿಯೂಟ ನೀಡಬೇಕಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು (ಡಿಎಸ್‌ಇಎಲ್) ಕೇಂದ್ರೀಯ ಶಾಲೆಗಳನ್ನು ಗುರುತಿಸಲು ಎಲ್ಲಾ ಬ್ಲಾಕ್ ಶಿಕ್ಷಣ ಅಧಿಕಾರಿಗಳು (ಬಿಇಒ) ಮತ್ತು ಸಾರ್ವಜನಿಕ ಶಿಕ್ಷಣದ ಉಪ ನಿರ್ದೇಶಕರಿಗೆ (ಡಿಡಿಪಿಐ) ಸೂಚನೆ ನೀಡಿದೆ. ಬರಪೀಡಿತ ತಾಲೂಕು ವ್ಯಾಪ್ತಿಯ ಗ್ರಾಮದಲ್ಲಿ ಒಂದಕ್ಕಿಂತ ಹೆಚ್ಚು ಶಾಲೆಗಳಿದ್ದರೆ ಅಂತಹ ಶಾಲೆಗಳಲ್ಲಿ ಹೆಚ್ಚು ಮಕ್ಕಳಿರುವ ಸರಕಾರಿ ಶಾಲೆ ಅಥವಾ ಅನುದಾನಿತ ಶಾಲೆಯನ್ನು ಕೇಂದ್ರ ಶಾಲೆ ಎಂದು ಗುರುತಿಸಬೇಕು.

ಈ ಕೇಂದ್ರ ಶಾಲೆಗೆ ಉಳಿದ ಸುತ್ತಮುತ್ತಲಿನ ಒಂದು ಅಥವಾ ಎರಡು ಕಿ.ಮೀ. ವ್ಯಾಪ್ತಿಯಲ್ಲಿರುವ ಕಿರಿಯ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳನ್ನು, ಪ್ರೌಢಶಾಲೆಗಳ ಎಂಟನೇ ತರಗತಿ ವಿದ್ಯಾರ್ಥಿಗಳನ್ನೂ ಸೇರಿಸಿಕೊಂಡು ಒಟ್ಟಾಗಿ ಒಂದೇ ಕಡೇ ಬಿಸಿಯೂಟ ಸಿದ್ದತೆ ಮತ್ತು ವಿತರಣೆಗೆ ಕ್ರಮ ಕೈಗೊಳ್ಳಬೇಕು.
ಗುಡ್ಡ-ಬೆಟ್ಟ, ಕಾಡು ಪ್ರದೇಶಗಳ ವ್ಯಾಪ್ತಿಯಲ್ಲಿ ಒಂದೇ ಶಾಲೆ ಇದ್ದಲ್ಲಿ ಪ್ರತಿ ಶಾಲೆಯಲ್ಲಿಯೂ ಸಹ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಿಸಿಯೂಟ ವಿತರಣೆ ಮಾಡುವ ಕೇಂದ್ರ ಶಾಲೆಗಳನ್ನು ಸ್ವತಂತ್ರವಾಗಿ ತೆರೆಯಲು ಸೂಕ್ತ ಏರ್ಪಾಟು ಮಾಡುವುದು. ಈ ಬಗ್ಗೆ ಶಾಲಾ ಶಿಕ್ಷಣ ವೆಬ್ ಸೈಟ್ ಗಳಲ್ಲಿ, ತಾಲ್ಲೂಕಿನ ಕ್ಷೇತ್ರಶಿಕ್ಷಣಾಧಿಕಾರಿಗಳು, ಬಿಆರ್‌ಸಿಸಿಆರ್‌ಪಿ ಕಚೇರಿಗಳಲ್ಲಿ ಕೇಂದ್ರ ಶಾಲೆಗಳಲ್ಲಿ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್ ಕಛೇರಿಗಳಲ್ಲಿ ಸಾರ್ವಜನಿಕರಿಗೆ, ಪೋಷಕರಿಗೆ ಮಾಹಿತಿ ದೊರೆಯುವಂತೆ ಪ್ರಕಟಿಸಬೇಕು ಎಂದು ತಿಳಿಸಲಾಗಿದೆ.
ಮಧ್ಯಾಹ್ನದ ಊಟವನ್ನು ಸ್ವೀಕರಿಸಲು ಸಿದ್ಧರಿರುವ ಮಕ್ಕಳ ಪೋಷಕರಿಂದ ಒಪ್ಪಿಗೆ ಪತ್ರವನ್ನು ಪಡೆಯುವುದು ಕಡ್ಡಾಯ. ಶಾಲಾ ಮುಖ್ಯೋಪಾಧ್ಯಾಯರು ಪೋಷಕರಿಂದ ಒಪ್ಪಿಗೆ ಪತ್ರ ಪಡೆಯಬೇಕು. ಬೇಸಿಗೆ ರಜೆಯ ಮಧ್ಯಾಹ್ನದ ಊಟವನ್ನು ಆಯಾ ಪಟ್ಟಣ ಅಥವಾ ಹಳ್ಳಿಗಳಲ್ಲಿನ ಮಕ್ಕಳಿಗೆ ಒದಗಿಸಲು ಇಲಾಖೆ ಕ್ರಮ ಕೈಗೊಂಡಿದೆ. ಬೇಸಿಗೆ ರಜೆಯಲ್ಲಿ ಮಕ್ಕಳು ಎಲ್ಲಿರುತ್ತಾರೆ, ಯಾವ ಶಾಲೆಯಲ್ಲಿ ಮಕ್ಕಳಿಗೆ ಊಟ ವಿತರಿಸಬೇಕು ಎಂಬ ಬಗ್ಗೆ ಪೋಷಕರಿಂದ ಮಾಹಿತಿ ಸಂಗ್ರಹಿಸಲಾಗುತ್ತದೆ.
ಬಿಸಿಯೂಟ ಪಡೆಯಲು ಬೇರೆ ಶಾಲೆಗಳಿಂದ ಹಾಜರಾಗುವ ಶಾಲಾ ಮಕ್ಕಳೊಂದಿಗೆ ಕೇಂದ್ರ ಶಾಲೆಯ ಮಕ್ಕಳನ್ನು ಸೇರಿಸಿ ಕೇಂದ್ರ ಶಾಲೆಯ ಅಡುಗೆ ಅನುದಾನ ವೆಚ್ಚದಲ್ಲಿಯೇ ಉತ್ತಮ ಗುಣಮಟ್ಟದ ಶುಚಿ - ರುಚಿಯಿಂದ ಕೂಡಿದ ಬಿಸಿಯೂಟವನ್ನು ನಿಗದಿತ ಪ್ರಮಾಣದಲ್ಲಿ ಸುರಕ್ಷಿತ ಕ್ರಮಗಳಲ್ಲಿ ವಿತರಿಸುವ ಜವಾಬ್ದಾರಿಯನ್ನು ಕೇಂದ್ರ ಶಾಲೆಯ ಮುಖ್ಯಸ್ಥರು ನಿರ್ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ










Click it and Unblock the Notifications