ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಿಲ್ಲೆಗೊಂದು ಮಿನಿ ವಿಶ್ವವಿದ್ಯಾಲಯ: ಸರ್ಕಾರದ ಹೊಸ ಚಿಂತನೆ

|
Google Oneindia Kannada News

ಬೆಳಗಾವಿ, ಡಿ.16: ರಾಜ್ಯದಲ್ಲಿ 2008ರಿಂದ 2013ರವರೆಗೆ ಹಲವು ವಿಶ್ವವಿದ್ಯಾಲಯಗಳು ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಬೆಂಬಲ ನೀಡಿದ್ದ ರಾಜ್ಯ ಬಿಜೆಪಿ ಸರ್ಕಾರ ಈಗ ಮತ್ತೆ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸುವ ಬಗ್ಗೆ ಪ್ರಸ್ತಾಪಿಸಿದೆ.

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಆವರಣದಲ್ಲಿ ಬುಧವಾರ ನಡೆದ ಜ್ಞಾನಯಜ್ಞ ಫೆಲೋಶಿಪ್ ವಿತರಣೆ ಮತ್ತು ವಿದ್ಯುನ್ಮಾನ ಪ್ರಮಾಣ ಪತ್ರಗಳ ಸೇವಾ ವ್ಯವಸ್ಥೆ' (ಎಲೆಕ್ಟ್ರಾನಿಕ್ ಡಾಕ್ಯುಮೆಂಟರಿ ಡೆಲಿವರಿ) ಹಾಗೂ ಟ್ರ್ಯಾಕಿಂಗ್ ವ್ಯವಸ್ಥೆಯ ಉದ್ಘಾಟಿಸಿ ಮಾತನಾಡಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಎಲ್ಲ ಜಿಲ್ಲೆಗಳಲ್ಲಿಯೂ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

ವಿಶ್ವವಿದ್ಯಾಲಯಗಳು ಎಂದರೆ ಬೃಹತ್ ಕ್ಯಾಂಪಸ್, ಸಾವಿರಾರು ವಿದ್ಯಾರ್ಥಿಗಳು, ನೂರಾರು ಅಧ್ಯಾಪಕರು ಇರುವುದನ್ನು ಕಾಣುತ್ತೇವೆ. ಆದರೆ, ಈ ಬಾರಿ ಮಿನಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಸರ್ಕಾರ ಚಿಂತನೆ ನಡೆಸಿದೆ.

Mini-university For The Districts: New thinking in Karnataka govt

ಎಲ್ಲ ಜಿಲ್ಲೆಗಳಲ್ಲೂ ವಿವಿ ಸ್ಥಾಪನೆ;

'ರಾಜ್ಯದಲ್ಲಿ ವಿಶ್ವವಿದ್ಯಾಲಯಗಳು ಇಲ್ಲದ ಜಿಲ್ಲೆಗಳಲ್ಲಿ ಆದಷ್ಟು ತ್ವರಿತವಾಗಿ ವಿ.ವಿ.ಗಳನ್ನು ಸ್ಥಾಪಿಸಲಾಗುವುದು. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ತಲೆ ಎತ್ತಲಿರುವ ಈ ವಿ.ವಿ.ಗಳಲ್ಲಿ ಕುಲಪತಿಯೂ ಸೇರಿದಂತೆ ಗರಿಷ್ಠ 25 ಸಿಬ್ಬಂದಿ ಮಾತ್ರ ಇರಲಿದ್ದಾರೆ' ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ನೂರಾರು ಎಕರೆ ವಿಶಾಲವಾದ ಕ್ಯಾಂಪಸ್ಸುಗಳು ಈಗ ಅಪ್ರಸ್ತುತವಾಗುತ್ತಿವೆ. ಆಧುನಿಕ ತಂತ್ರಜ್ಞಾನವು ಸಮರ್ಥವಾಗಿದ್ದು, ತುಂಬಾ ಕಡಿಮೆ ಜಾಗದಲ್ಲಿ ವಿ.ವಿ.ಗಳನ್ನು ಸ್ಥಾಪಿಸಲು ಈಗ ಸಾಧ್ಯವಿದೆ. ದೊಡ್ಡದೊಡ್ಡ ವಿ.ವಿ.ಗಳನ್ನು ಆರಂಭಿಸುವ ಬದಲು ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲೂ ವಿಶ್ವವಿದ್ಯಾಲಯಗಳು ಇರುವಂತೆ ನೋಡಿಕೊಳ್ಳುವುದಕ್ಕೆ ಸರಕಾರದ ಆದ್ಯತೆ ಕೊಟ್ಟಿದೆ' ಎಂದು ಅವರು ಹೇಳಿದರು.

ಯುವಿಸಿಇ, ವಿಟಿಯು ಐಐಟಿ ಮಟ್ಟಕ್ಕೆ

'ಬೆಂಗಳೂರಿನಲ್ಲಿರುವ ಯೂನಿವರ್ಸಿಟಿ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜನ್ನು (ಯುವಿಸಿಇ) ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದಕ್ಕಾಗಿ 10 ವರ್ಷಗಳ ಯೋಜನೆಯನ್ನು ಹಾಕಿಕೊಳ್ಳಲಾಗಿದೆ' ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

120 ಎಕರೆ ವಿಶಾಲವಾಗಿರುವ ಬೆಳಗಾವಿಯ ವಿಟಿಯು ಕೂಡ ಐಐಟಿ ಮಾದರಿಯಲ್ಲೇ ಬೆಳೆಯಬೇಕು. ಈ ನಿಟ್ಟಿನಲ್ಲಿ ಕುಲಪತಿ ಪ್ರೊ.ಕರಿಸಿದ್ಧಪ್ಪನವರು ಇನ್ನು ಒಂದು ತಿಂಗಳಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಿ, ಸರಕಾರಕ್ಕೆ ಸಲ್ಲಿಸಲು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅವರು ಹೇಳಿದರು.

Mini-university For The Districts: New thinking in Karnataka govt

ಹಾಗೆಯೇ ರಾಜ್ಯದಲ್ಲಿರುವ 17 ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಜಾಗತಿಕ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡಲು ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ಎಂಜಿನಿಯರಿಂಗ್ ಓದುವವರು ಸಹಜವಾಗಿಯೇ ಈ ಕಾಲೇಜುಗಳತ್ತ ಆಕರ್ಷಿತವಾಗುವಂತೆ ಇವುಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಇವುಗಳಿಗೆ ಹೆಚ್ಚಿನ ಸ್ವಾಯತ್ತತೆ ನೀಡುವುದರ ಜತೆಗೆ ಆಡಳಿತ ಮಂಡಳಿಯನ್ನೂ ಸ್ಥಾಪಿಸಲಾಗುವುದು ಎಂದು ಅಶ್ವತ್ಥನಾರಾಯಣ ಹೇಳಿದರು.

ಸಮಾರಂಭದಲ್ಲಿ ವಿಟಿಯು ಕುಲಪತಿ ಪ್ರೊ,ಕರಿಸಿದ್ಧಪ್ಪ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಕುಲಸಚಿವರಾದ ಪ್ರೊ.ಬಿ.ಇ.ರಂಗಸ್ವಾಮಿ, ಪ್ರೊ.ಎ.ಎಸ್.ದೇಶಪಾಂಡೆ ಮುಂತಾದವರು ಉಪಸ್ಥಿತರಿದ್ದರು.

22 ವಿದ್ಯಾರ್ಥಿಗಳಿಗೆ ಜ್ಞಾನಯಾನ ಫೆಲೋಶಿಪ್

ವಿಟಿಯು ಹಮ್ಮಿಕೊಂಡಿರುವ ಜ್ಞಾನಯಾನ ಫೆಲೋಶಿಪ್ ಕಾರ್ಯಕ್ರಮದಡಿ ಸಚಿವರು, 22 ಸಂಶೋಧನಾ ವಿದ್ಯಾರ್ಥಿಗಳಿಗೆ ಫೆಲೋಶಿಪ್ ಪತ್ರ ವಿತರಿಸಿದರು.

ಈ ಯೋಜನೆಯಡಿ ಪ್ರತಿ ವಿದ್ಯಾರ್ಥಿಗೂ ತಿಂಗಳಿಗೆ 25 ಸಾವಿರ ರೂ. ನೀಡಲಾಗುವುದು. ಆಯ್ಕೆಯಾಗಿರುವ ಸಂಶೋಧನಾ ವಿದ್ಯಾರ್ಥಿಗಳಲ್ಲಿ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್, ಕಂಪ್ಯೂಟರ್ ಸೈನ್ಸ್, ನ್ಯಾನೊ ತಂತ್ರಜ್ಞಾನ, ಏರೋಸ್ಪೇಸ್ ಪ್ರೊಪಲ್ಶನ್ ಎಂಜಿನಿಯರಿಂಗ್ ಮುಂತಾದ ವಿಭಾಗಗಳಲ್ಲಿ ಅಧ್ಯಯನ ಮಾಡುತ್ತಿರುವವರು ಇದ್ದಾರೆ ಎಂದು ಅವರು ತಿಳಿಸಿದರು.

ಎಲೆಕ್ಟ್ರಾನಿಕ್ ಡಾಕ್ಯುಮೆಂಟರಿ ಡೆಲಿವರಿ ವ್ಯವಸ್ಥೆ

ವಿಟಿಯು ಆರಂಭಿಸಿರುವ ಈ ಯೋಜನಯಡಿ ವಿದ್ಯಾರ್ಥಿಗಳು ತಮಗೆ ಬೇಕಾದ ಪ್ರಮಾಣಪತ್ರ, ಸಂಭಾವ್ಯ ಪದವಿ ಪ್ರಮಾಣ ಪತ್ರ, ಅಂಕಪಟ್ಟಿ, ವರ್ಗಾವಣೆ ಪತ್ರ, ಹೆಸರು ಬದಲಾವಣೆ, ದಾಖಲಾತಿಗಳ ಪರಿಶೀಲನೆ, ಮಾಧ್ಯಮ ಆಯ್ಕೆ ಮುಂತಾದ ಹತ್ತಾರು ಸೇವೆಗಳನ್ನು ಆನ್ ಲೈನ್ ಮೂಲಕ ಸುಲಭವಾಗಿ ಪಡೆದುಕೊಳ್ಳಬಹುದು ಎಂದು ಅಶ್ವತ್ಥನಾರಾಯಣ ಹೇಳಿದರು.

Recommended Video

BCCI ವಿರುದ್ಧ ಮಾತಾಡಿದ್ದಕ್ಕೆ ಟೆಸ್ಟ್ ನಾಯಕತ್ವವನ್ನೂ ಕಳೆದುಕೊಳ್ತಾರಾ ವಿರಾಟ್?? | Oneindia Kannada

English summary
The state BJP government, which supported the establishment of many universities and private universities in the state from 2008 to 2013, has now proposed to mini university in each district of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X