ಕರ್ನಾಟಕದಾದ್ಯಂತ ಚಳಿ ಇಳಿಕೆ, ತಾಪಮಾನ ಏರಿಕೆ
ಬೆಂಗಳೂರು,ಜನವರಿ 21: ಕರ್ನಾಟಕದಾದ್ಯಂತ ಚಳಿ ಕಡಿಮೆಯಾಗಿದ್ದು, ತಾಪಮಾನ ಏರಿಕೆಯಾಗಿದೆ.
ಜ.25ರವರೆಗೆ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಪ್ರದೇಶಗಳಲ್ಲಿ ಕೆಲವು ದಿನಗಳಿಂದ ಚಳಿ ಹಾಗೂ ಮಧ್ಯಾಹ್ನ ಒಣಹವೆ ಕಂಡುಬರುತ್ತಿತ್ತು.
ಇದೀಗ ಚಳಿಯ ಪ್ರಮಾಣ ನಿಧಾನವಾಗಿ ಕಡಿಮೆಯಾಗಿ, ಉಷ್ಣಾಂಶ ಏರಿಕೆಯಾಗುತ್ತಿದೆ.ಜನವರಿ 20ರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಗಳಲ್ಲಿ ಕನಿಷ್ಠ ತಾಪಮಾನ ಬೀದರ್‌ನಲ್ಲಿ 12.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಹಾಸನ 13, ಬೆಳಗಾವಿ, ಧಾರವಾಡ, ಬಾಗಲಕೋಟೆ, ಹಾವೇರಿ, ಬೆಂಗಳೂರು ಎಚ್‌ಎಎಲ್‌ನಲ್ಲಿ ತಲಾ 14, ಬೆಂಗಳೂರು ಕೇಂದ್ರ ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಲಾ 16.5 ಡಿಗ್ರಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಪಣಂಬೂರು, ಕಾರವಾರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ರಾಜ್ಯದಲ್ಲಿ ಜನವರಿಯಲ್ಲಿ ವಾಡಿಕೆ ಚಳಿ ಕನಿಷ್ಠ ಸುಮಾರು 14 ರಿಂದ 16 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 27 ರಿಂದ 30 ಡಿಗ್ರಿ ಸೆಲ್ಸಿಯಸ್ ಇರಬೇಕು.
ಆದರೆ ಕೆಲವು ದಿನಗಳವರೆಗೂ ಈ ಪ್ರಮಾಣದ ಉಷ್ಣಾಂಶ ದಾಖಲಾಗದೇ ಚಳಿ ಸೃಷ್ಟಿಯಾಗಿತ್ತು.
ಇದೀಗ ವಾಡಿಕೆ ಪ್ರಮಾಣದ ಚಳಿ ದಾಖಲಾಗುವ ಸಾಧ್ಯತೆ ಇದೆ, ಹೀಗಾಗಿ ಜನವರಿ 25ರವರೆಗೂ ಒಣಹವೆ ಹಾಗೂ ಬೆಳಗ್ಗೆ ಮಂಜು ಕವಿದ ವಾತಾವರಣ ಇರಲಿದೆ.











Click it and Unblock the Notifications