ಗಣರಾಜ್ಯೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರ ನೇಮಕ: ಸಂಪೂರ್ಣ ಲಿಸ್ಟ್ ಇಲ್ಲಿದೆ ನೋಡಿ
ಬೆಂಗಳೂರು, ಜನವರಿ 21: ಜನವರಿ 26 ರ ಗಣರಾಜ್ಯೋತ್ಸವ ದಿನಾಚರಣೆಯಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರುಗಳನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತುಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ, ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದಿರುವಂತ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲಿರುವಂತ ಸಚಿವರ ಪಟ್ಟಿಯನ್ನು ಪ್ರಕಟಿಸಿದ್ದಾರೆ.
ಗಣರಾಜ್ಯೋತ್ಸವದಂದು ಯಾವ ಸಚಿವರು ಯಾವ ಜಿಲ್ಲೆಯಲ್ಲಿ ಧ್ವಜಾರೋಹಣ.?
* ಗೃಹ ಸಚಿವ ಡಾ.ಜಿ ಪರಮೇಶ್ವರ್ - ತುಮಕೂರು
* ಕಾನೂನು ಸಚಿವ ಹೆಚ್.ಕೆ ಪಾಟೀಲ್ - ಗದಗ
* ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ - ಬೆಂಗಳೂರು ಗ್ರಾಮಾಂತರ
* ಸಾರಿಗೆ ಸಚಿವ ರಾಮಲಿಂಗಾರೆಡ್ಡಿ - ರಾಮನಗರ
* ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ - ವಿಜಯಪುರ
* ಇಂಧನ ಸಚಿವ ಕೆ.ಜೆ ಜಾರ್ಜ್ - ಚಿಕ್ಕಮಗಳಊರು
* ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ - ದಕ್ಷಿಣ ಕನ್ನಡ
* ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ - ಮೈಸೂರು
* ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ - ಬೆಳಗಾವಿ
* ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ - ಕಲಬುರ್ಗಿ
* ಜವಳಿ ಸಚಿವ ಶಿವಾನಂದ ಪಾಟೀಲ್ - ಹಾವೇರಿ
* ವಸತಿ ಸಚಿವ ಜಮೀರ್ ಅಹ್ಮದ್ - ವಿಜಯನಗರ
* ಸಣ್ಣ ಕೈಗಾರಿಕೆ ಸಚಿವ ಶರಣಬಸಪ್ಪ ದರ್ಶನಾಪುರ - ಯಾದಗಿರಿ

* ಅರಣ್ಯ ಸಚಿವ ಈಶ್ವರ್ ಖಂಡ್ರೆ - ಬೀದರ್
* ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ - ಮಂಡ್ಯ
* ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್ ಎಸ್ ಮಲ್ಲಿಕಾರ್ಜುನ - ದಾವಣಗೆರೆ
* ಕಾರ್ಮಿಕ ಸಚಿವ ಸಂತೋಷ್ ಲಾಡ್ - ಧಾರವಾಡ
* ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ - ರಾಯಚೂರು
* ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ - ಬಾಗಲಕೋಟೆ
* ಪಶು ಸಂಗೋಪನ ಸಚಿವ ಕೆ.ವೆಂಕಟೇಶ್ - ಚಾಮರಾಜನಗರ
* ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಡರಗಿ - ಕೊಪ್ಪಳ
* ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ - ಚಿತ್ರದುರ್ಗ
* ಕಂದಾಯ ಸಚಿವ ಕೃಷ್ಣಭೈರೇಗೌಡ - ಉಡುಪಿ
* ಸಹಕಾರ ಸಚಿವ ಕೆ ಎನ್ ರಾಜಣ್ಣ - ಹಾಸನ
* ನಗರಾಭಿವೃದ್ಧಿ ಸಚಿವ ಬಿಎಸ್ ಬೈರತಿ ಸುರೇಶ್ - ಕೋಲಾರ
* ಪೌರಾಡಳಿತ ಸಚಿವ ರಹೀಂ ಖಾನ್ - ಬಳ್ಳಾರಿ
* ಮೀನುಗಾರಿಕಾ ಸಚಿವ ಮಂಕಾಳ ವೈದ್ಯ - ಉತ್ತರ ಕನ್ನಡ
* ಶಿಕ್ಷಣ ಸಚಿವ ಮಧು ಬಂಗಾರಪ್ಪ - ಶಿವಮೊಗ್ಗ
* ಉನ್ನತ ಶಿಕ್ಷಣ ಸಚಿವ ಡಾ.ಎಂ ಸಿ ಸುಧಾಕರ್ - ಚಿಕ್ಕಬಳ್ಳಾಪುರ
* ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜು - ಕೊಡಗು












Click it and Unblock the Notifications