ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಕೊರೊನಾದಿಂದ ದೇವರೇ ಕಾಪಾಡಬೇಕು' ಹೇಳಿಕೆಗೆ ಶ್ರೀರಾಮುಲು ಸ್ಪಷ್ಟನೆ

|
Google Oneindia Kannada News

ಬೆಂಗಳೂರು, ಜುಲೈ 16: ಕೊರೊನಾದಿಂದ ನಮ್ಮನ್ನು ಆ ದೇವರೇ ಕಾಪಾಡಬೇಕು ಎಂಬ ಹೇಳಿಕೆಗೆ ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.

Recommended Video

Oxford Covid Vaccine ಮಾನವ ಪ್ರಯೋಗದ ಪಲಿತಾಂಶ ಇಂದು | Oneindia Kannada

ಈ ಹೇಳಿಕೆ ನೀಡಿದ್ದರಿಂದ ಬಿ. ಶ್ರೀರಾಮುಲು ವಿರುದ್ಧ ವಿರೋಧ ಪಕ್ಷಗಳು ಹರಿಹಾಯ್ದಿದ್ದವು. ಸರ್ಕಾರದ ವೈಫಲ್ಯವನ್ನು ಬಹಿರಂಗವಾಗಿ ಒಪ್ಪಿಕೊಂಡಿರುವ ಸಚಿವರ ಸಮೇತ ಇಡೀ ಸರ್ಕಾರದ ಸಚಿವರು ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳ ನಾಯಕರು ಆಗ್ರಹಿಸಿದ್ದರು.

ತಮ್ಮ ಹೇಳಿಕೆ ತೀವ್ರ ಚರ್ಚೆಗೀಡಾದ ಬೆನ್ನಲ್ಲೇ ಸಚಿವ ಬಿ. ಶ್ರೀರಾಮುಲು ಟ್ವಿಟ್ಟರ್​ ಮೂಲಕ ಇದೀಗ ಸ್ಪಷ್ಟೀಕರಣ ನೀಡಿದ್ದಾರೆ.ಪ್ರತಿಪಕ್ಷವಾಗಿ ಈಗ ನಾವು ಅನಿವಾರ್ಯವಾಗಿ ಮಾತನಾಡುವಂತ ಪರಿಸ್ಥಿತಿ ಸೃಷ್ಟಿಯಾಗಿದೆ. ಶ್ರೀರಾಮುಲು ಹೇಳಿಕೆ ಈಗ ಇಡೀ ರಾಜ್ಯವನ್ನೇ ತಲ್ಲಣಗೊಳಿಸುತ್ತಿದೆ.

ಬಿಎಸ್ವೈ ಸರಕಾರದ ಸಾಮರ್ಥ್ಯವನ್ನೇ ಪ್ರಶ್ನಿಸುವಂತೆ ಮಾಡಿದ ಶ್ರೀರಾಮುಲು ಹೇಳಿಕೆಬಿಎಸ್ವೈ ಸರಕಾರದ ಸಾಮರ್ಥ್ಯವನ್ನೇ ಪ್ರಶ್ನಿಸುವಂತೆ ಮಾಡಿದ ಶ್ರೀರಾಮುಲು ಹೇಳಿಕೆ

ಇದು ಕೇವಲ ಶ್ರೀರಾಮುಲು ಹೇಳಿಕೆಯಲ್ಲ ಇದು ಸರ್ಕಾರದ ಮಾತಾಗಿದೆ. ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ.

ಜನರನ್ನು ರಕ್ಷಿಸುವ ಜವಾಬ್ದಾರಿಯನ್ನು ನಿಮಗೆ ನೀಡಲಾಗಿದೆ ಅದನ್ನು ನಿಭಾಯಿಸಲು ನಿಮಗೆ ಸಾಧ್ಯವಿಲ್ಲ ಎಂದಾದರೆ, ಇಡೀ ಸರ್ಕಾರ ರಾಜೀನಾಮೆ ಕೊಟ್ಟು ಹೋಗಬೇಕು ಎಂದು ಡಿಕೆ ಶಿವಕುಮಾರ್ ಆಗ್ರಹಿಸಿದ್ದರು. ಈ ಬಗ್ಗೆ ಟ್ವೀಟ್ ಮೂಲಕ ಸಚಿವ ಬಿ. ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.

ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ

ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ

ಮಾನ್ಯ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರೇ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಸೋಂಕು ಹೆಚ್ಚಾಗಲು, ಸರ್ಕಾರದ ನಿರ್ಲಕ್ಷ್ಯ, ಮಂತ್ರಿಗಳ ಬೇಜವಾಬ್ದಾರಿ, ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲ ಎಂಬ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸುವ ಸಂದರ್ಭದಲ್ಲಿ ಆ ಆರೋಪಗಳು 'ಸತ್ಯಕ್ಕೆ ದೂರವಾದದ್ದು' ಎಂದು ನಾನು ಹೇಳಿದ್ದೆ ಎಂದು ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.

ಆರೋಪಗಳು ಸತ್ಯಕ್ಕೆ ದೂರವಾದದ್ದು

ಆರೋಪಗಳು ಸತ್ಯಕ್ಕೆ ದೂರವಾದದ್ದು

ಆರೋಪಗಳು 'ಸತ್ಯಕ್ಕೆ ದೂರವಾದದ್ದು', 'ಸೋಂಕು ತಡೆಯಲು ಜನರಲ್ಲಿ ಜಾಗೃತಿ ಬರಬೇಕು, ಸೋಂಕು ತಡೆಯುವಲ್ಲಿ ಇದು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಇಲ್ಲಿ ಎಡವಿದರೆ ಪರಿಸ್ಥಿತಿ ಕ್ಲಿಷ್ಟಕರ' ಎಂದು ಹೇಳುವ ಸಂರ್ಭದಲ್ಲಿ, 'ಇನ್ನೂ ಎಡವಿದರೆ ದೇವರೇ ಕಾಪಾಡಬೇಕು' ಎಂದು ಹೇಳಿದ ಎಚ್ಚರಿಕೆಯ ಮಾತುಗಳು ಅವು

ಮುಖ್ಯಮಂತ್ರಿ, ಸಚಿವರು ಹಗಲಿರುಳು ಕಷ್ಟಪಡುತ್ತಿದ್ದಾರೆ

ಸರ್ಕಾರ, ನಮ್ಮ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಹಾಗೂ ಸಚಿವರುಗಳು ಹಗಲಿರುಳೂ ಕೆಲಸ ಮಾಡುತ್ತಿದ್ದೇವೆ. ಈ ಶತಮಾನದ ಸವಾಲೊಂದನ್ನು ಸಮರ್ಥವಾಗಿ ಎದುರಿಸಿ ಗೆಲ್ಲಲು, ಜನರಿಗಾಗಿ ದುಡಿಯುತ್ತಿದ್ದೇವೆ. ತಪ್ಪಾಗಿ ಅರ್ಥೈಸಲಾದ ಮಾತಿಗೆ ನನ್ನ ಸ್ಪಷ್ಟನೆ.

ಶ್ರೀರಾಮುಲು ರಾಜೀನಾಮೆ ನೀಡಲಿ

ಶ್ರೀರಾಮುಲು ರಾಜೀನಾಮೆ ನೀಡಲಿ

ಕೊರೊನಾ ಸೋಂಕಿನ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಲು ಸಾಧ್ಯವಿಲ್ಲ, ದೇವರೇ ನಮ್ಮನ್ನು ಕಾಪಾಡಬೇಕು ಎಂದು ಒಪ್ಪಿಕೊಳ್ಳುವವರು ಅಧಿಕಾರದಲ್ಲಿ ಯಾಕಿರಬೇಕು? ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋಗಲಿ. ಅದು ಕೇವಲ ಸಚಿವ ಶ್ರೀರಾಮುಲು ಹೇಳಿಕೆ ಅಲ್ಲ, ಸರ್ಕಾರದ ಹೇಳಿಕೆ. ಈಗ ಮುಖ್ಯಮಂತ್ರಿಯರವರ ಟೀಂ ನಾವು ಏನೂ ಮಾಡಕ್ಕೆ ಆಗಲ್ಲ ದೇವರೇ ಕಾಪಾಡಬೇಕು ಎಂದರೆ ಹೇಗೆ? ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ನಿಭಾಯಿಸೋಕೆ ಆಗದಿದ್ದರೆ ಅವರೆಲ್ಲ ಅಧಿಕಾರದಲ್ಲಿ ಯಾಕಿರಬೇಕು? ಎಂದು ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದರು.

English summary
Karnataka Health Minister B Sriramulu Given Clarificatin On Only God Can Save Us Remark. As India's coronavirus tally continues to surge, the health minister in Karnataka - which has logged over 47,000 patients so far - on Wednesday said that "only god can help save us" from the highly contagious disease.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X