ಕುಮಾರಸ್ವಾಮಿ ಒಬ್ಬ ಜಮೀರ್‌ನನ್ನು ಫೇಸ್ ಮಾಡಲಿ: ಸಚಿವ ಜಮೀರ್ ಅಹ್ಮದ್ ಸವಾಲು
ಬೆಂಗಳೂರು, ಆಗಸ್ಟ್ 22: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣ ಆರೋಪ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ಪ್ರತಿಪಕ್ಷಗಳು ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ತೀವ್ರ ಒತ್ತಾಯಿಸುತ್ತಿದ್ದಾರೆ.
ಈ ಬಗ್ಗೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಮಾತನಾಡಿದ್ದು, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ರಾಜೀನಾಮೆ ಕೇಳಲು ಯಾವುದೇ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ತನಿಖೆ ಆಧಾರದ ಮೇಲೆ ಅಕ್ರಮ ನಡೆದಿರುವುದು ಸಾಬೀತು ನಂತರ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಎಸ್ಐಟಿ ಮನವಿ ಮಾಡಿ ಹತ್ತು ತಿಂಗಳು ಕಳೆದಿದೆ. ನಿಜವಾಗಿಯೂ ರಾಜೀನಾಮೆ ನೀಡಬೇಕಿರುವುದು ಕುಮಾರಸ್ವಾಮಿ ಎಂದು ವ್ಯಂಗ್ಯವಾಡಿದರು.
ಸಿದ್ದರಾಮಯ್ಯ ವಿರುದ್ಧ ನೀಡಿರುವುದು ಖಾಸಗಿ ದೂರು. ಎಫ್ ಐ ಆರ್ ಆಗಿಲ್ಲ, ತನಿಖೆ ನಡೆದಿಲ್ಲ. ಆದರೆ ದೂರು ನೀಡಿದ ದಿನವೇ ನೋಟಿಸ್ ನೀಡಿರುವುದು ಎಷ್ಟು ಸರಿ. ತನಿಖೆಯಲ್ಲಿ ಅಕ್ರಮ ಸಾಬೀತು ಪ್ರಕರಣ ದಲ್ಲಿ ಕುಮಾರಸ್ವಾಮಿ ವಿರುದ್ಧ ಮೊದಲು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಬೇಕಿತ್ತು. ನೈತಿಕತೆ ಹೊತ್ತು ಕುಮಾರಸ್ವಾಮಿ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.

ನೂರು ಸಿದ್ದರಾಮಯ್ಯ ಬಂದರೂ ಏನೂ ಮಾಡಲಾಗದು ಎಂದು ಕುಮಾರಸ್ವಾಮಿ ಹೇಳುತ್ತಾರೆ. ಅವರು ಒಬ್ಬ ಜಮೀರ್‌ನನ್ನು ಫೇಸ್ ಮಾಡಲಿ ಸಾಕು ಎಂದು ಸವಾಲು ಹಾಕಿದರು.
ರಾಮನಗರದಲ್ಲಿ ಕುಮಾರಸ್ವಾಮಿ, ನಾನು ಒಂದೇ ನಂಬರ್ ಪ್ಲೀಸ್ ಎರಡು ಬಸ್‌ಗೆ ಹಾಕಿ ಓಡಿಸುತ್ತಿದ್ದೆ ಎಂದಿದ್ದಾರೆ. ಹಾಗಿದ್ದರೆ ನನ್ನ ನಿಮ್ಮ ಜೊತೆ ಹೇಗೆ ಇಟ್ಟುಕೊಡಿದ್ದಿರಿ. ಆ ಪ್ರಕರಣ ದಲ್ಲಿ ನ್ಯಾಯಾಲಯ ನನಗೆ ಕ್ಲೀನ್ ಚಿಟ್ ನೀಡಿದೆ. ನಮ್ಮ ಚಿಕ್ಕಪ್ಪನಿಗೆ ಸಂಬಂಧಿಸಿದ ಪ್ರಕರಣ ಅದು. ನನಗೆ ಸಂಬಂಧ ಇಲ್ಲ. ಆದರೆ ಕುಮಾರಸ್ವಾಮಿ ಏನು ಮಾಡಿದ್ದಾರೆ ಎಂಬುದು ನಾನು ಹೇಳಲಾ..? ಲೀಗಲ್, ಇಲ್ಲೀ ಗಲ್ ಬಗ್ಗೆ ನನ್ನ ಜೊತೆ ಬಹಿರಂಗ ಚರ್ಚೆಗೆ ಬರಲಿ. ನಾನು ಬಾಯಿ ಬಿಟ್ಟರೆ ಸಾಕಷ್ಟು ಸತ್ಯ ಹೊರಗೆ ಬರುತ್ತದೆ ಎಂದು ಹೇಳಿದರು.












Click it and Unblock the Notifications