ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಲೆ ಪ್ರಾರಂಭದ ಕುರಿತು ನೂತನ ಶಿಕ್ಷಣ ಸಚಿವರ ಮಹತ್ವದ ಹೇಳಿಕೆ

|
Google Oneindia Kannada News

ಬೆಂಗಳೂರು, ಆಗಸ್ಟ್ 09: ಸೋಮವಾರ (ಆ.09)ದಂದು ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಲಾಗಿದೆ.

ಇನ್ನು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಪ್ರಾರಂಭದ ಕುರಿತು ಮಾತನಾಡಿದ ನೂತನ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, "ಆಗಸ್ಟ್ ತಿಂಗಳ ಕೊ‌ನೆ ವಾರದಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಶಿಕ್ಷಣ ತಜ್ಞರೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಗಡಿ ಜಿಲ್ಲೆಗಳಲ್ಲಿ ಪರಿಸ್ಥಿತಿ ನೋಡಿಕೊಂಡು ಶಾಲೆ ಪ್ರಾರಂಭಿಸಲಾಗುತ್ತದೆ,'' ಎಂದು ತಿಳಿಸಿದರು.

SSLC Result: 625ಕ್ಕೆ 625 ಅಂಕ ಪಡೆದವರೆಷ್ಟು?SSLC Result: 625ಕ್ಕೆ 625 ಅಂಕ ಪಡೆದವರೆಷ್ಟು?

"ಶಾಲೆ ಆರಂಭವಾಗುವುದು ವಿಳಂಬವಾದರೆ ಮತ್ತೆ ವಿದ್ಯಾಗಮ ಪ್ರಾರಂಭಿಸುತ್ತೇವೆ ಎಂದು ಹೇಳಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಆಗಸ್ಟ್ 23ರಿಂದ 9, 10, 11, 12ನೇ ತರಗತಿ ಆರಂಭವಾಗಲಿದೆ. ಇದೇ ರೀತಿ ಪ್ರಾಥಮಿಕ ತರಗತಿಗಳನ್ನೂ ಆರಂಭಿಸುವ ಕುರಿತು ಸಹ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ,'' ಎಂದು ಮಾಹಿತಿ ನೀಡಿದರು.

Karnataka Education Minister BC Nagesh Said Will Decide In The August Last Week Meeting On School Reopening

ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶವನ್ನು ನೂತನ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರಕಟಿಸಿದರು. ಇಂದು (ಆಗಸ್ಟ್ 9) 3.30ಕ್ಕೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಿದರು.

"ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್​ಸೈಟ್​ ಮೂಲಕ ವೀಕ್ಷಿಸಬಹುದಾಗಿದೆ. ಈ ಬಾರಿ ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದು, ಫಲಿತಾಂಶದ ಬಗ್ಗೆ ಅಸಮಾಧಾನ ಹೊಂದಿದವರು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ," ಎಂದು ಹೇಳಿದರು.

ಇನ್ನು ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, "ಜುಲೈ 19, 22ರಂದು ನಡೆದಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಈ ಬಾರಿ ಶೇ.99.9ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 4,70,160 ವಿದ್ಯಾರ್ಥಿಗಳು, 4,01,280 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಓರ್ವ ವಿದ್ಯಾರ್ಥಿನಿ ಗೈರಾಗಿದ್ದರಿಂದ ಅನುತ್ತೀರ್ಣರಾಗಿದ್ದಾರೆ,'' ಎಂದು ತಿಳಿಸಿದರು.

"1,28,931 ವಿದ್ಯಾರ್ಥಿಗಳು A+ ಗ್ರೇಡ್ ಪಡೆದುಕೊಂಡಿದ್ದು​, 2,50,317 ವಿದ್ಯಾರ್ಥಿಗಳು A ಗ್ರೇಡ್, 2,87,694 ವಿದ್ಯಾರ್ಥಿಗಳು B ಗ್ರೇಡ್​, 1,13,610 ವಿದ್ಯಾರ್ಥಿಗಳು C ಗ್ರೇಡ್​ ಪಡೆದುಕೊಂಡಿದ್ದಾರೆ. ಸಿ ಗ್ರೇಡ್ ಪಡೆದಿರುವ ಶೇ.9ರಷ್ಟು ವಿದ್ಯಾರ್ಥಿಗಳಿಗೆ ಕೃಪಾಂಕ (ಗ್ರೇಸ್​ ಮಾರ್ಕ್ಸ್​) ನೀಡಿ ಉತ್ತೀರ್ಣ ಮಾಡಲಾಗಿದೆ," ಎಂದು ವಿವರಿಸಿದರು.

ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಒಟ್ಟು 157 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆದಿದ್ದು, 289 ವಿದ್ಯಾರ್ಥಿಗಳು 623 ಅಂಕ ಪಡೆದಿದ್ದಾರೆ. ಇಬ್ಬರು 622 ಅಂಕ ಪಡೆದಿದ್ದರೆ, 449 ವಿದ್ಯಾರ್ಥಿಗಳು 621, 28 ವಿದ್ಯಾರ್ಥಿಗಳು 620 ಅಂಕ ಪಡೆದಿದ್ದಾರೆ.

ಪ್ರಥಮ ಭಾಷೆಯಲ್ಲಿ 25,702 ವಿದ್ಯಾರ್ಥಿಗಳಿಗೆ 125ಕ್ಕೆ 125 ಅಂಕ, ದ್ವಿತೀಯ ಭಾಷೆಯಲ್ಲಿ 36,628 ವಿದ್ಯಾರ್ಥಿಗಳಿಗೆ 100ಕ್ಕೆ 100 ಅಂಕ, ತೃತೀಯ ಭಾಷೆಯಲ್ಲಿ 36,776 ವಿದ್ಯಾರ್ಥಿಗಳಿಗೆ 100ಕ್ಕೆ 100 ಅಂಕ ಪಡೆದಿದ್ದಾರೆ.
ಗಣಿತ ವಿಷಯದಲ್ಲಿ 6321 ಮಕ್ಕಳಿಗೆ 100ಕ್ಕೆ 100, ವಿಜ್ಞಾನ ವಿಷಯದಲ್ಲಿ 3,649 ಮಕ್ಕಳು 100ಕ್ಕೆ 100, ಸಮಾಜ ವಿಜ್ಞಾನ ವಿಷಯದಲ್ಲಿ 9,367 ಮಕ್ಕಳು 100ಕ್ಕೆ 100 ಅಂಕ ಪಡೆದುಕೊಂಡಿದ್ದಾರೆ.

ಗಮನಾರ್ಹವೆಂದರೆ ಈ ಬಾರಿ ಬಹುತೇಕ ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದಾರೆ. ಈ ಬಾರಿ ಒಟ್ಟಾರೆ ಪಾಸ್​ ಪರ್ಸೆಂಟೇಜ್ ಶೇಕಡಾ 99.9ರಷ್ಟು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ 4,70,160 ಎಸ್‌ಎಸ್‌ಎಲ್‌ಸಿ ಬಾಲಕರು ಪಾಸಾಗಿದ್ದರೆ, 4,01,280 ಬಾಲಕಿಯರು ತೇರ್ಗಡೆಯಾಗಿದ್ದಾರೆ.

"ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆಯ ನೂತನ ಸಚಿವ ಬಿ.ಸಿ. ನಾಗೇಶ್ ಫಲಿತಾಂಶ ಪ್ರಕಟಿಸಿದ್ದಾರೆ. ವಿದ್ಯಾರ್ಥಿಗಳು ಅಧಿಕೃತ ವೆಬ್​ಸೈಟ್​ ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ. ಈ ಬಾರಿ ಎಲ್ಲಾ ವಿದ್ಯಾರ್ಥಿಗಳೂ ಉತ್ತೀರ್ಣರಾಗಿದ್ದರೂ ಫಲಿತಾಂಶದ ಬಗ್ಗೆ ಅಸಮಾಧಾನ ಹೊಂದಿದವರು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ," ಎಂದು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಮಾಹಿತಿ ನೀಡಿದ್ದಾರೆ.

Recommended Video

SSLC ರಿಸಲ್ಟ್ ನಲ್ಲಿ ಯಾವ ಜಿಲ್ಲೆ ಪ್ರಥಮ? 625ಕ್ಕೆ 625 ಅಂಕ ಪಡೆದವರೆಷ್ಟು? | Oneindia Kannada

English summary
Will decide in the August last week meeting on School Reopening, Education Minister B.C. Nagesh said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X