ಈ ಜಿಲ್ಲೆಗಳ ನಿವೇಶನ ಮಾಲೀಕರಿಗೆ ಸರ್ಕಾರ ಗುಡ್‌ನ್ಯೂಸ್, ಸದನದಲ್ಲಿ ಮಹತ್ವದ ನಿರ್ಧಾರ
ರಾಜ್ಯ ಸರ್ಕಾರವು ನಿವೇಶನದಾರರಿಗೆ ಸಿಹಿಸುದ್ದಿ ನೀಡಿದೆ. ಒಂದು ಅಥವಾ ಬಹು ನಿವೇಶನ ವಿನ್ಯಾಸ ಅನುಮೋದನೆ ನೀಡುವ ಕುರಿತು ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಬಗ್ಗೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರು ಮಾಹಿತಿ ನೀಡಿದ್ದಾರೆ. ಕೆಲವು ಜಿಲ್ಲೆಗಳಿಗೆ ಮಾತ್ರ ಅನ್ವಯವಾಗುವಂತೆ ಏಕ ಅಥವಾ ಬಹು ನಿವೇಶನ ವಿನ್ಯಾಸ ಅನುಮೋದನೆ ನೀಡುವ ಕುರಿತು ವಿಶೇಷ ಸೇವೆಗಳನ್ನು ಕಲ್ಪಿಸಲಾಗಿದೆ ಎಂದು ಬೈರತಿ ಸುರೇಶ್ ಉತ್ತರಿಸಿದ್ದಾರೆ.
ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಉತ್ತರ ನೀಡಿದರು. ಕರಾವಳಿ ಜಿಲ್ಲೆಗಳನ್ನು ಒಳಗೊಂಡಂತೆ ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಬಹು ನಿವೇಶನ ವಿನ್ಯಾಸ ಅನುಮೋದನೆ ನೀಡುವ ಕುರಿತ ನಿಯಮಗಳನ್ನು ಸಮನ್ವಯಗೊಳಿಸಲು ಹಾಗೂ ವಿನ್ಯಾಸ ಅನುಮೋದನೆಯನ್ನು ಪಾರದರ್ಶಕತೆ ಹಾಗೂ ಜನ ಸ್ನೇಹಿಯಾಗಿಸಲು ಅನುಕೂಲವಾಗುವಂತೆ ಸೆಂಟರ್ ಫಾರ್ ಇ ಗವರ್ನೆನ್ಸ್ ವತಿಯಿಂದ ಯೂನಿಫೈಡ್ ಲ್ಯಾಂಡ್ ಮ್ಯಾನೇಜ್ಮೆಂಟ್ ಸಿಸ್ಟಂ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಜ್ಯದ ಇತರೆ ಜಿಲ್ಲೆಗಳಿಗಿಂತ ಕರಾವಳಿ ಜಿಲ್ಲೆಗಳು ಭೌಗೋಳಿಕವಾಗಿ ಭಿನ್ನವಾಗಿವೆ. ಹೀಗಾಗಿ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಅನ್ವಯವಾಗುವಂತೆ ಒಂದು ಅಥವಾ ಬಹು ನಿವೇಶನ ವಿನ್ಯಾಸ ಅನುಮೋದನೆ ನೀಡುವ ಕುರಿತು ವಿಶೇಷ ಸೇವೆಗಳನ್ನು ಕಲ್ಪಿಸಲಾಗಿದೆ ಎಂದಿದ್ದಾರೆ.
ತಾ.ಪಂಚಾಯಿತಿ ಕಚೇರಿಯಲ್ಲೇ ಹೊಸ ಸೇವೆ
ಕರಾವಳಿ ಜಿಲ್ಲೆಗಳಲ್ಲಿ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಗೆ ಒಳಪಡದೇ ಇರುವ ಗ್ರಾಮ ಪಂಚಾಯಿತಿಗಳ ಕುರಿತಂತೆ ಮಹತ್ವದ ವಿಚಾರವನ್ನು ತಿಳಿಸಿದ್ದಾರೆ. ಈ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಎಕರೆ ಒಳಗಿನ ಜಮೀನುಗಳಿಗೆ ತಾಂತ್ರಿಕ ಅನುಮೋದನೆ ನೀಡಲು ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಹತ್ತಿರದ ಯೋಜನಾ ಪ್ರಾಧಿಕಾರಗಳ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅಧಿಕಾರಿಗಳಿಗೆ ತಾಲ್ಲೂಕು ಪಂಚಾಯತಿ ಕಚೇರಿಯಲ್ಲಿಯೇ ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯ ಅಧಿಕಾರಿಗಳು ಕಾರ್ಯ ನಿರ್ವಹಿಸಲು ಆದೇಶಿಸಲಾಗಿದೆ ಎಂದಿದ್ದಾರೆ.
6 ಸಕ್ಕರೆ ಕಾರ್ಖಾನೆಗಳಿಗೆ ನೆರವು
ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಪ್ರಸ್ತಾವನೆ ಒಳಗೊಂಡಂತೆ ಒಟ್ಟು 6 ಸಹಕಾರಿ ಸಕ್ಕರೆ ಕಾರ್ಖಾನೆಗಳಿಗೆ ಎನ್.ಸಿ.ಡಿ.ಸಿ.ಯಿಂದ ನೆರವು ಪಡೆಯುವ ಕುರಿತು ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್ ಸದನದಲ್ಲಿ ಉತ್ತರಿಸಿದ್ದಾರೆ. ಎನ್.ಸಿ.ಡಿ.ಸಿ.ಯಿಂದ ಆರ್ಥಿಕ ನೆರವು ಲಭ್ಯವಾಗದಿದ್ದಲ್ಲಿ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಎಲ್.ಆರ್.ಓ.ಟಿ. ಆಧಾರದ ಮೇಲೆ ಇದ್ದಲ್ಲಿ, ಯಥಾಸ್ಥಿತಿಯಲ್ಲಿ ಖಾಸಗಿಯವರಿಗೆ ದೀರ್ಘಾವಧಿಗೆ ಗುತ್ತಿಗೆ ನೀಡಲು ಮತ್ತೊಮ್ಮೆ ಟೆಂಡರ್ ಪ್ರಕಟಣೆ ಹೊರಡಿಸಲು ಪರಿಶೀಲಿಸಲಾಗುವುದು ಎಂದಿದ್ದಾರೆ.












Click it and Unblock the Notifications