ಮಂಡ್ಯ ಸೋಲು: ಸಚಿವ ಪುಟ್ಟರಾಜುಗೆ ರಾಜ್ಯ ಸಂಪುಟದಿಂದ ಕೊಕ್?

Recommended Video

      ಸಚಿವ ಸಿ ಎಸ್ ಪುಟ್ಟರಾಜುಗೆ ಎಚ್ ಡಿ ಕುಮಾರಸ್ವಾಮಿ ಕ್ಯಾಬಿನೆಟ್ ನಿಂದ ಕೊಕ್ ನೀಡುವ ಸಾಧ್ಯತೆ | Oneindia Kannada

      ಬೆಂಗಳೂರು, ಜೂನ್ 20: ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರಸ್ವಾಮಿ ಅವರ ಭಾರಿ ಅಂತರದ ಸೋಲಿನ ಪರಿಣಾಮವಾಗಿ ಮೊದಲ ತಲೆದಂಡ ಪಡೆಯುವ ಸಾಧ್ಯತೆ ಇದೆ.

      ಅತೃಪ್ತ ಶಾಸಕರಿಗೆ ಮಣೆ ಹಾಕಲು ಮತ್ತು ಲೋಕಸಭೆ ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಕಠಿಣ ನಿರ್ಧಾರ ಕೈಗೊಳ್ಳಲು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಣ್ಣ ನೀರಾವರಿ ಇಲಾಖೆ ಸಚಿವ ಸಿ.ಎಸ್. ಪುಟ್ಟರಾಜು ಅವರನ್ನು ಸಂಪುಟದಿಂದ ಕೈಬಿಡಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿವೆ.

      ಎಲ್ಲ ಸಮುದಾಯದವರಿಗೂ ಸಂಪುಟದಲ್ಲಿ ಪ್ರಾಶಸ್ತ್ಯ ನೀಡುವ ಸಲುವಾಗಿ ಇನ್ನಷ್ಟು ಸಚಿವರು ರಾಜೀನಾಮೆ ನೀಡುತ್ತಾರೆ ಎಂದು ಸ್ವತಃ ಸಿ.ಎಸ್. ಪುಟ್ಟರಾಜು ಒಂದು ವಾರದ ಹಿಂದೆ ಹೇಳಿಕೆ ನೀಡಿದ್ದರು.

      Minister CS Puttaraju may dropped from HD Kumaraswamy cabinet

      ಸಂಪುಟ ವಿಸ್ತರಣೆ ಮಾಡುವ ಸಂದರ್ಭದಲ್ಲಿ ಅಗತ್ಯಬಿದ್ದರೆ ಸಚಿವ ಸ್ಥಾನ ತ್ಯಾಗಕ್ಕೂ ಸಿದ್ಧರಿರುವುದಾಗಿ ಅವರು ಹೇಳಿದ್ದರು. ಆದರೆ, ಪುಟ್ಟರಾಜು ಅವರನ್ನು ಸಂಪುಟದಿಂದ ತೆಗೆದುಹಾಕಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಸೋಮವಾರ ಅವರು ಪಕ್ಷದ ವರಿಷ್ಠರ ಜತೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

      ಸಚಿವ ಪುಟ್ಟರಾಜು ಅವರು ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದರೆ ರಾಜಕೀಯದಿಂದ ನಿವೃತ್ತಿ ಪಡೆಯುವುದಾಗಿ ಹೇಳಿದ್ದರು. ಆದರೆ, ಫಲಿತಾಂಶ ಬಂದ ಬಳಿಕ ಅವರು ವರಸೆ ಬದಲಿಸಿದ್ದರು. ಈಗಲೂ ರಾಜೀನಾಮೆ ನೀಡಲು ಬದ್ಧನಾಗಿದ್ದೇನೆ. ಆದರೆ, ಪಕ್ಷದ ನಾಯಕರು ಅದಕ್ಕೆ ಒಪ್ಪುತ್ತಿಲ್ಲ. ಹೀಗಾಗಿ ರಾಜೀನಾಮೆ ನೀಡಿಲ್ಲ ಎಂದಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+