ಅನ್ನ ಭಾಗ್ಯದ ಅಕ್ಕಿಯ ಮೊದಲ ತುತ್ತಿನಲ್ಲೇ ಕಲ್ಲು ಎಂದ ಬೊಮ್ಮಾಯಿಗೆ ತಿರುಗೇಟು ಕೊಟ್ಟ ದಿನೇಶ್‌ ಗುಂಡೂರಾವ್‌

ಬೆಂಗಳೂರು, ಜೂನ್‌ 29: ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಅನ್ನ ಭಾಗ್ಯ ಯೋಜನೆಯ ಅಕ್ಕಿ ವಿತರಣೆ ಕುರಿತು ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ವಾಕ್ಸಮರ ಮುಂದುವರೆದಿದ್ದು, ಅನ್ನ ಭಾಗ್ಯದ ಅಕ್ಕಿಯ ಮೊದಲ ತುತ್ತಿನಲ್ಲೇ ಕಲ್ಲು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಹೇಳಿಕೆಗೆ ಸಚಿವ ದಿನೇಶ್‌ ಗುಂಡೂರಾವ್‌ ತಿರುಗೇಟು ನೀಡಿದರು.

ಈ ಕುರಿತು ಟ್ವೀಟ್‌ ಮೂಲಕ ಕುಟುಕಿದ್ದು, ಬಸವರಾಜ ಬೊಮ್ಮಾಯಿ ಅವರೇ ನಿಮ್ಮ ಹೊಟ್ಟೆಯೊಳಗಿನ ಸಂಕಟ ಮತ್ತು ಬೇಗುದಿ ಏನೆಂದೇ ಅರ್ಥವಾಗುತ್ತಿಲ್ಲ. ಅಕ್ಕಿ ಕೊಡಲಾಗದಿದ್ದರೆ ಹಣ ಕೊಡಿ ಎಂದು ಆಕಾಶ ಭೂಮಿ ಒಂದಾಗುವಂತೆ ದೊಂಬಿ ಎಬ್ಬಿಸಿದ್ದು ನೀವು ಮತ್ತು ನಿಮ್ಮ ಪಕ್ಷದವರು. ಈಗ ಅಕ್ಕಿ ಬದಲು ನಾವು ಹಣ ಕೊಟ್ಟರೆ ಅಲ್ಲೂ ಹುಳುಕು ಹುಡುಕುತ್ತಿದ್ದೀರಿ. ಈ ನಿಮ್ಮ ರೋಗಕ್ಕೆ ಮದ್ದೆಲ್ಲಿಂದ ತರುವುದು? ಎಂದು ಪ್ರಶ್ನಿಸಿದ್ದಾರೆ.

Dinesh Gundu Rao Outrage Against Bommai

ಬಸವರಾಜ ಬೊಮ್ಮಾಯಿಯವರೇ, ಕೇಂದ್ರ ನಾವು ದುಡ್ಡು ಕೊಡುತ್ತೀವಿ ಎಂದರೂ ಅಕ್ಕಿ ಕೊಡಲಿಲ್ಲ. ಕೇಂದ್ರಕ್ಕೆ ಕೊಡುವ ದುಡ್ಡನ್ನೇ ನಾವೀಗ ಜನರಿಗೆ ಕೊಡುತ್ತಿದ್ದೇವೆ. ನಿಮ್ಮ ಪಕ್ಷದವರಿಗೆ ಅನ್ನಭಾಗ್ಯ ಯೋಜನೆ ಅನುಷ್ಟಾನ ಇಷ್ಟವಿಲ್ಲ. ಹಾಗಾಗಿ ಅಕ್ಕಿ ಸಿಗದಂತೆ ಮಾಡಿದಿರಿ. ನಾವು ಅಕ್ಕಿಯ ಬದಲು ದುಡ್ಡು ಕೊಡುತ್ತಿರುವುದು ನಿಮಗೆ ಅರಗಿಸಿಕೊಳ್ಳಲಾಗುತ್ತಿಲ್ಲ ಎಂದು ಬಸವರಾಜ ಬೊಮ್ಮಾಯಿ ಅವರಿಗೆ ತಿರುಗೇಟು ನೀಡಿದ್ದಾರೆ.

ಬಸವರಾಜ ಬೊಮ್ಮಾಯಿಯವರೇ ಗುಣಕ್ಕೆ ಮತ್ಸರವಿರಬಾರದು. ಅದೇ ರೀತಿ ಯಾರಾದರೂ ಜನರಿಗೆ ಒಳ್ಳೆಯದು ಮಾಡುತ್ತಿದ್ದರೆ ಅವರು ನಿಮ್ಮ ಶತ್ರುಗಳಾದರೂ ಅವರ ಮೇಲೆ ಮತ್ಸರವಿರಬಾರದು. ನೀವು ಅಧಿಕಾರದಲ್ಲಿದ್ದಾಗ ಜನರಿಗೆ ಒಳ್ಳೆಯದು ಮಾಡಲಿಲ್ಲ. ನಿಮ್ಮ ಕೈಲಾಗದನ್ನು ನವು ಮಾಡುತ್ತಿದೆ. ಇದಕ್ಯಾಕೆ ಹೊಟ್ಟೆಕಿಚ್ಚು? ಮೊಸರಲ್ಲಿ ಕಲ್ಲು ಹುಡುಕುವ ಬುದ್ದಿ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ಅನ್ನ ಭಾಗ್ಯದ ಅಕ್ಕಿಯ ಮೊದಲ ತುತ್ತಿನಲ್ಲೇ ಕಲ್ಲು : ಬಸವರಾಜ ಬೊಮ್ಮಾಯಿ

ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಮೊದಲ ತುತ್ತಿನಲ್ಲಿಯೇ ಕಲ್ಲು ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆ ಜಾರಿ ಮಾಡುವಲ್ಲಿ ಜನರಿಗೆ ದೋಖಾ ಮಾಡುವುದು ಮುಂದುವರೆಸಿದೆ. ಹತ್ತು ಕೆಜಿ ಅಕ್ಕಿ ಕೊಡುವ ಗ್ಯಾರೆಂಟಿ ನೀಡಿ ಈಗ ಒಬ್ಬರಿಗೆ 170 ರೂ. ಹಾಕುವುದಾಗಿ ಹೇಳಿರುವುದು ಸರ್ಕಾರದ ವಂಚನೆಯ ಇನ್ನೊಂದು ಮುಖ ಬಯಲಾಗಿದೆ.

ರಾಜ್ಯ ಸರ್ಕಾರ ನೀಡುವ 170 ರೂ. ಗ್ರಾಮೀಣ ಮಹಿಳೆಯ ದಿನದ ಕೂಲಿಯ ಅರ್ಧದಷ್ಟು ಹಣವೂ ಆಗುವುದಿಲ್ಲ. ಸುಳ್ಳು ಗ್ಯಾರೆಂಟಿ ಗಳನ್ನು ಈಡೇರಿಸಲಾಗದೇ ಈಗ ಜನರಿಗೆ ದ್ರೋಹ ಮಾಡಲಾಗುತ್ತಿದೆ. ಚುನಾವಣೆಯಲ್ಲಿ ಜನರಿಗೆ ಕೊಟ್ಟ ಮಾತಿನಂತೆ ಹತ್ತು ಕೆಜಿ ಅಕ್ಕಿ ಕೊಡಿ, ಇಲ್ಲವೇ ಮಾರುಕಟ್ಟೆ ದರದಲ್ಲಿ ಪ್ರತಿ ಕೆಜಿಗೆ 60 ರೂ. ಗಳಂತೆ ಹತ್ತು ಕೆಜಿಗೆ ತಗಲುವ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಿ. ಇಲ್ಲದಿದ್ದರೆ ಮಾತಿಗೆ ತಪ್ಪಿದ್ದಕ್ಕಾಗಿ‌ ಜನರಿಗೆ ಕ್ಷಮೆ ಕೇಳಿ ಎಂದು ಆಗ್ರಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+