ಲೋಕಸಭಾ ಚುನಾವಣೆಗೆ ಬಿಜೆಪಿ ಜೊತೆ ಮೈತ್ರಿ; ಕರ್ನಾಟಕದಲ್ಲಿ ಜೆಡಿಎಸ್‌ನ ಅಂತ್ಯ: ದಿನೇಶ್‌ ಗುಂಡೂರಾವ್‌ ಕಿಡಿ

ಬೆಂಗಳೂರು, ಜುಲೈ 17: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಸೋಲು ಅನುಭವಿಸಿದ ಬಳಿಕ, ಲೋಕಸಭಾ ಚುನಾವಣೆಗೆ ಎಚ್ಚೆತ್ತುಕೊಂಡು ಕಾಂಗ್ರೆಸ್‌ ಗೆ ಠಕ್ಕರ್‌ ಕೊಡಲು ಮೈತ್ರಿಗೆ ಮುಂದಾಗಿದ್ದು, ಜೆಡಿಎಸ್‌ ವಿರುದ್ದ ಆರೋಗ್ಯ ಸಚಿವ ದಿನೇಶ್‌ ಗುಂಡೂವರ್‌ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಬಿಜೆಪಿ ಜೊತೆಗಿನ ಮೈತ್ರಿಯಿಂದ ಜೆಡಿಎಸ್‌ ಮೇಲೆ ದೊಡ್ಡ ಪರಿಣಾಮ ಬೀರಲಿದೆ. ಇದರಿಂದ ಕರ್ನಾಟಕದಲ್ಲಿ ಜೆಡಿಎಸ್‌ನ ಅಂತ್ಯವಾಗಲಿದೆ. ಜೆಡಿಎಸ್‌ಗೆ ಜಾತ್ಯಾತೀತ ರಾಜಕೀಯದ ಬಗ್ಗೆ ನಿಜವಾಗಲೂ ನಂಬಿಕೆಯಿಲ್ಲ ಎಂಬುದು ನಮಗೆ ಗೊತ್ತಿದೆ ಎಂದು ಹೇಳಿದರು.

Health Minister Dinesh Gundu Rao

ಬಿಜೆಪಿ ಜೊತೆ ಈ ಹಿಂದೆಯೂ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದೆ, ಅದರಲ್ಲೇನು ಹೊಸದಿಲ್ಲ. ಜನತಾದಳಕ್ಕೆ ಇರುವ ಜಾತ್ಯಾತೀತ ಟ್ಯಾಗ್‌ ಅನ್ನು ತೆಗೆದುಹಾಕಬೇಕು. ಅಧಿಕಾರಕ್ಕೋಸ್ಕರ ನಾವು ಏನು ಬೇಕಾದರೂ ಮಾಡುತ್ತೇವೆ ಎಂಬುದನ್ನು ಅವರು ಒಪ್ಪಿಕೊಳ್ಳಲಿ. ಜೆಡಿಎಸ್‌ಗೆ ಜಾತ್ಯಾತೀತ ರಾಜಕೀಯದ ಬಗ್ಗೆ ನಿಜವಾಗಲೂ ನಂಬಿಕೆಯಿಲ್ಲ ಎಂಬುದು ನಮಗೆ ಗೊತ್ತಿದೆ ಎಂದು ಕಿಡಿಕಾರಿದರು.

ಜೆಡಿಎಸ್‌ ಮತ್ತು ಎಚ್‌ಡಿ ಕುಮಾರಸ್ವಾಮಿಗೆ ಅಧಿಕಾರ ಮಾತ್ರ ಮುಖ್ಯವಾಗುತ್ತದೆ. ಬಿಜೆಪಿ ಜೊತೆ ಈ ಹಿಂದೆಯೂ ಜೆಡಿಎಸ್‌ ಮೈತ್ರಿ ಮಾಡಿಕೊಂಡಿದೆ, ಅದರಲ್ಲೇನು ಹೊಸದಿಲ್ಲ. ಜನತಾದಳಕ್ಕೆ ಇರುವ ಜಾತ್ಯಾತೀತ ಟ್ಯಾಗ್‌ ಅನ್ನು ತೆಗೆದುಹಾಕಬೇಕು. ಅಧಿಕಾರಕ್ಕೋಸ್ಕರ ನಾವು ಏನು ಬೇಕಾದರೂ ಮಾಡುತ್ತೇವೆ ಎಂಬುದನ್ನು ಅವರು ಒಪ್ಪಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದರು.

ಇನ್ನೂ ಟ್ವೀಟ್‌ ಮೂಲಕ ಕಿಡಿಕಾರಿದ ಅವರು, BJP ಬಿ ಟೀಂ JDS ಎಂದು ನಾವು ಅನೇಕ ಬಾರಿ ಹೇಳಿದ್ದೆವು. ಈಗ HDK ನಮ್ಮ‌ ಮಾತು ಸತ್ಯ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ. JDS ಪಕ್ಷಕ್ಕೆ ಯಾವುದೇ ತತ್ವ ಸಿದ್ದಾಂತಗಳಿಲ್ಲ.‌ ಕೋಮುವಾದಿ ಪಕ್ಷ BJP ಜೊತೆಗೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವ JDSಗೆ ಯಾವ ಸಿದ್ದಾಂತವಿದೆ? ಎಂದು ಪ್ರಶ್ನಿಸಿದ ಅವರು, ಅದೊಂದು ಅವಕಾಶವಾದಿ ಪಕ್ಷ ಎಂದು ಹೇಳಿದರು.

ಅಧಿಕಾರಕ್ಕಾಗಿ ಯಾರ ಜೊತೆಗಾದರೂ ಸೈ. JDS ಮುಂದಿರುವ ಜಾತ್ಯಾತೀತ ಎಂಬ ಪದ ಕೇವಲ ಸೋಗಲಾಡಿತನವಷ್ಟೆ. 2006 ರಲ್ಲಿ BJP ಜೊತೆ ಸೇರಿ 20-20 ಸರ್ಕಾರ ಮಾಡಿದಾಗಲೇ ಜಾತ್ಯಾತೀತ ತತ್ವಕ್ಕೆ HDK ಎಳ್ಳು‌ ನೀರು ಬಿಟ್ಟಿದ್ದರು. ಆಗಲೇ JDSನ ಅವನತಿ ಶುರುವಾಗಿದ್ದು. 2004ರಲ್ಲಿ 59 ಸ್ಥಾನ ಗೆದ್ದಿದ್ದ JDS ಈ ಬಾರಿ 19 ಸ್ಥಾನಕ್ಕೆ ಕುಸಿಯಲು ಈ ನಕಲಿ ಜಾತ್ಯಾತೀತ ಸಿದ್ದಾಂತವೇ ಕಾರಣ ಎಂದು ಹೇಳಿದರು.

BJPಗೆ ವಿಪಕ್ಷ ನಾಯಕನ ಎರವಲು ಸೇವೆ ನೀಡುತ್ತಿರುವ HDK, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬದಲು ವಿಲೀನ ಮಾಡಿಕೊಳ್ಳಲಿ. ಆಗ ತಾವೇ ಅಧಿಕೃತವಾಗಿ ವಿಪಕ್ಷ ನಾಯಕನಾಗಬಹುದು. ಈ ಮೂಲಕವಾದರೂ HDKಯವರ ಸುಳ್ಳು ಜಾತ್ಯಾತೀತತೆಯ ನಕಲಿ‌ ಶ್ಯಾಮನ ಅವತಾರ ಕೊನೆಯಾಗಲಿ‌ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+