Suhas Shetty Case: "ಬಿಜೆಪಿಯು ಹೆಣ ಬಿದ್ದ ಕೂಡಲೇ ಕ್ರಿಮಿನಲ್‌ಗಳನ್ನ ಮಹಾತ್ಮರಂತೆ ಬಿಂಬಿಸುತ್ತೆ" ಎಂದ ಪ್ರಭಾವಿ ಸಚಿವ!
Suhas Shetty Case: ಕರ್ನಾಟಕದಲ್ಲಿ ಮಂಗಳೂರಿನಲ್ಲಿ ನಡೆದಿರುವ ಸುಹಾಸ್ ಶೆಟ್ಟಿ ಹ* ಕೇಸ್‌ಗೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ವಾಕ್ಸಮರ ಮುಂದುವರಿದಿದೆ. ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಚಿವ ದಿನೇಶ್ ಗುಂಡೂರಾವ್ ಅವರು, ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ BJP ನಾಯಕರ ಗಮನಕ್ಕೆ. ಇದು ಇತ್ತೀಚೆಗೆ ಹತ್ಯೆಯಾದ ಸುಹಾಶ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿ ಎಂದು ಆದೇಶ ಪ್ರತಿಯನ್ನು ಹಂಚಿಕೊಂಡಿದ್ದಾರೆ.
#SuhasShetty ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು ಅಂದು ಕರ್ನಾಟಕದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರವೇ. ಗೃಹ ಸಚಿವರಾಗಿದ್ದ ಪುಣ್ಯಾತ್ಮ ಬಸವರಾಜ ಬೊಮ್ಮಾಯಿ @BSBommai. ಇಂದು ಸುಹಾಸ್‌ನನ್ನು ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್‌ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಮುಂದುವರಿದು ಕರಾವಳಿಯನ್ನು ಕೋಮು ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಬಿಜೆಪಿಯವರೇ ಕ್ರಿಮಿನಲ್‌ಗಳ ನಿಜವಾದ ಸೃಷ್ಟಿಕರ್ತರು. ಇವರು ಅಧಿಕಾರದಲ್ಲಿದ್ದಾಗ ಕ್ರಿಮಿನಲ್‌ಗಳನ್ನು ಸೃಷ್ಟಿಸುತ್ತಾರೆ. ಅವರ ಮೇಲೆ ರೌಡಿ ಶೀಟರ್ ತೆರೆಯುತ್ತಾರೆ. ಹೆಣ ಬಿದ್ದ ಕೂಡಲೆ ಅದೇ ಕ್ರಿಮಿನಲ್‌ಗಳನ್ನು ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ ಮಾಡುತ್ತಾರೆ ಎಂದು ದೂರಿದ್ದಾರೆ.
ಸುಹಾಸ್ ಹತ್ಯೆ ನಂತರ ಕೂಗುಮಾರಿಗಳಂತೆ ಅರಚುತ್ತಿರುವ ಬಿಜೆಪಿ ಕರ್ನಾಟಕ ನಾಯಕರ ಯಾರ ಮಕ್ಕಳಾದರೂ ಧರ್ಮದ ಅಮಲಿನಲ್ಲಿ ಬೀದಿ ಕಾಳಗ ಮಾಡುತ್ತಿದ್ದಾರೆಯೆ.? ಅಥವಾ ಧರ್ಮಕ್ಕಾಗಿ ಬಡಿದಾಡುತ್ತಿದ್ದಾರೆಯೆ.? ಬಿಜೆಪಿ ನಾಯಕರ ಧರ್ಮಾಂಧತೆಗೆ ಬೀದಿ ಹೆಣವಾಗುತ್ತಿರುವುದು ಬಡವರ ಮಕ್ಕಳು. ಇದು ಸತ್ಯವಲ್ಲವೇ ಎಂದು ಅವರು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ.
ಬಿಜೆಪಿಯವರ ಕೆಟ್ಟ ರಾಜಕೀಯಕ್ಕೆ ಕರಾವಳಿಯಲ್ಲಿ ಎಷ್ಟೋ ಜನರ ಬಲಿಯಾಗಿದೆ. ಎಷ್ಟೋ ಮನೆಗಳ ದೀಪ ಆರಿ ಹೋಗಿದೆ. ಇಷ್ಟಾದರೂ ಇವರ ರಕ್ತದಾಹ ನಿಂತಿಲ್ಲ. ಕರಾವಳಿಯಲ್ಲಿ ಇನ್ನಷ್ಟು ಹೆಣ ಬೀಳಬೇಕು ಎನ್ನುವ ಉದ್ದೇಶದಿಂದ ದುಷ್ಟ ರಾಜಕಾರಣ ಮಾಡುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜನ ಪ್ರಜ್ಞಾವಂತಿಕೆಯ ಜೊತೆಗೆ ಸೂಕ್ಷ್ಮತೆಯನ್ನು ಅರಿತುಕೊಂಡವರು. ಇನ್ನಾದರೂ ಕರಾವಳಿಯ ಜನ ಬಿಜೆಪಿಯ ಹುನ್ನಾರ ಅರಿಯಬೇಕಿದೆ. ಇಲ್ಲದಿದ್ದರೆ ಬಿಜೆಪಿಯವರ ಕೆಟ್ಟ ರಾಜಕಾರಣಕ್ಕೆ ಜಿಲ್ಲೆಯ ನೆಮ್ಮದಿಯೇ ಹಾಳಾಗಲಿದೆ ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ. ಇದೀಗ ಈ ಪೋಸ್ಟ್ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ವೈರಲ್ ಆಗುತ್ತಿದೆ.
ಬಿಜೆಪಿ ಹೇಳಿದ್ದೇನು ?
ಸರ್ವ ಜನಾಂಗದ ಶಾಂತಿಯ ತೋಟ ನಿರ್ಮಿಸುತ್ತೇವೆ ಎಂದು ಬಣ್ಣದ ಮಾತನಾಡಿ ಅಧಿಕಾರ ಹಿಡಿದ ಕಾಂಗ್ರೆಸ್ ಆಡಳಿತದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆಯೆಂಬುದೇ ಇಲ್ಲವಾಗಿದೆ ಎಂದು ಕರ್ನಾಟಕ ಬಿಜೆಪಿಯು ಆಕ್ರೋಶ ವ್ಯಕ್ತಪಡಿಸಿದೆ.
ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯು, ಹತ್ಯೆಗೀಡಾದ ಹಿಂದೂ ಸಹೋದರ ಸುಹಾಸ್ ವಿರುದ್ಧ ತಿಂಗಳ ಮೊದಲೇ ಪೋಸ್ಟ್ ಹಾಕಿ ಕೊಲೆಬೆದರಿಕೆ ಹಾಕಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಈಗ ಮತ್ತಿಬ್ಬರು ಹಿಂದೂ ಮುಖಂಡರಿಗೆ ಕೊಲೆ ಬೆದರಿಕೆ ಬಂದಿದೆ. ಕಾಂಗ್ರೆಸ್‌ನ ಓಲೈಕೆ ರಾಜಕಾರಣದಿಂದ ಹಿಂದೂಗಳಿಗೆ ಯಾವ ರಕ್ಷಣೆಯೂ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ ಎಂದಿದೆ.
ಇಷ್ಟಾದರೂ ಘನತೆವೆತ್ತ ಗೃಹಮಂತ್ರಿಗಳು, ಸಭಾಧ್ಯಕ್ಷರು ಮಾತ್ರ ಹಿಂದೂಗಳಿಗೆ ರೌಡಿ ಪಟ್ಟ ಕಟ್ಟುತ್ತಾ, ಕೊಲೆ ಆರೋಪಿಗಳು ಮತ್ತವರ ಕುಟುಂಬದವರನ್ನು ರಕ್ಷಿಸಲು ಎತ್ನಿಸುತ್ತಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಈ ಕೂಡಲೇ ಈ ಬೆದರಿಕೆ ಹಾಕಿದವರ ಹೆಡೆಮುರಿ ಕಟ್ಟಬೇಕಿದೆ. ಇಲ್ಲದಿದ್ದರೆ ಅಧಿಕಾರದಿಂದ ನೀವು ಗಂಟುಮೂಟೆ ಕಟ್ಟುವ ದಿನ ದೂರವಿಲ್ಲ ಎಂದೂ ಹೇಳಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications