ಕಾಂಗ್ರೆಸ್ ಸರ್ಕಾರ 2 ವರ್ಷ ಪೂರೈಸುವ ಮುನ್ನವೇ ಸಚಿವರಿಗೆ ಶಾಕ್
ಬೆಂಗಳೂರು, ಮಾರ್ಚ್ 12: ರಾಜ್ಯದಲ್ಲಿ ಮೇ 23, 2025 ಕ್ಕೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಲಿದೆ. ಸರ್ಕಾರ ಎರಡು ವರ್ಷಗಳ ಆಡಳಿತವನ್ನು ಆಚರಿಸಲು ಮತ್ತು ನವೆಂಬರ್‌ನಲ್ಲಿ ಸಿಎಂ ಹುದ್ದೆಗೆ ಹಕ್ಕು ಮಂಡಿಸಲು ಉತ್ಸುಕರಾಗಿರುವ ಡಿ.ಕೆ ಶಿವಕುಮಾರ್ ಸಂಭ್ರಮಾಚರಣೆ ಮಾಡಲು ಉತ್ಸುಕರಾಗಿದ್ದಾರೆ. ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡು ವರ್ಷ ಸರ್ಕಾರ ಪೂರ್ಣಗೊಳುತ್ತಿರುವ ಹಿನ್ನೆಲೆ ಸಚಿವ ಸಂಪುಟ ಪುನರಾಚನೆ ಮಾಡಲು ತಮ್ಮದೇ ಆದ ಪ್ಲಾನ್ ಹಾಕಿಕೊಂಡಿದ್ದಾರೆ.
ರಾಜ್ಯ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಮುಸುಕಿನ ಗುದ್ದಾಟ ಮುಂದುವರೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಯನ್ನು ಉಳಿಸಿಕೊಳ್ಳಲು ಸಂಪುಟ ಪುನರ್ರಚನೆಗೆ ಕೈ ಹಾಕಬಹುದು ಎನ್ನಲಾಗಿದೆ. ಅಕ್ಟೋಬರ್ 2025ಕ್ಕೆ ಅವರು ಸಿಎಂ ಆಗಿ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸುವ ಮೊದಲು ಏನು ಬೇಕಾದರೂ ಆಗಬಹುದು ಎಂದು ಕಾಂಗ್ರೆಸ್‌ನ ಹಿರಿಯ ಶಾಸಕರೊಬ್ಬರು ಹೇಳಿದ್ದಾರೆ.

ಈಗಾಗಲೇ ಕಾಂಗ್ರೆಸ್ ಪಾಳಯದಲ್ಲಿ ಸಚಿವ ಸ್ಥಾನಕ್ಕಾಗಿ ಹಲವು ಹಿರಿಯ ನಾಯಕರು ಲಾಬಿ ನಡೆಸಿದ್ದಾರೆ. ಹೀಗಾಗಿ ಸಂಪುಟ ಪುನರಾಚನೆಗೆ ಹೈಕಮಾಂಡ್ ಅನುಮೋದಿಸಿದರೆ, ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನ ಭದ್ರಪಡಿಸಿಕೊಳ್ಳುತ್ತಾರೆ ಎಂದು ಮೂಲಗಳು ತಿಳಿಸಿವೆ. ಇತ್ತ ಸಿದ್ದರಾಮಯ್ಯ ಅವರು ಈಗಾಗಲೇ ಪಕ್ಷದ ಹೈಕಮಾಂಡ್ ಮತ್ತು ಶಿವಕುಮಾರ್‌ಗೆ ಪರೋಕ್ಷವಾಗಿ ಸಂದೇಶವನ್ನು ಕಳುಹಿಸಿದ್ದಾರೆ ಎನ್ನಲಾಗಿದೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮತ್ತು ಉಪಮುಖ್ಯಮಂತ್ರಿ ಆಗಿ ಮುಂದುವರಿಯಲು ಅಭ್ಯಂತರವಿಲ್ಲ, ಅದರಲ್ಲಿ ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಸೇರಿದಂತೆ ಉತ್ತಮ ಖಾತೆ ಅವರ ಬಳಿಯಿವೆ. ತಮ್ಮ ಸಚಿವ ಸಂಪುಟದಿಂದ 15 ಸಚಿವರನ್ನು ಕೈಬಿಡಲು ಸಿದ್ದರಾಮಯಯ ಅವರು ಸಿದ್ಧರಿದ್ದಾರೆ, ಅವರಲ್ಲಿ ಕೆಲವರು ತಮ್ಮ ಬೆಂಬಲಿಗ ಸಚಿವರು ಇದ್ದಾರೆ ಎಂದು ಹೇಳಲಾಗುತ್ತಿದೆ.
ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಿದ ಸಂತಸ ಒಂದು ಕಡೆಯಾದರೆ, ಇತ್ತ ಸಿದ್ದರಾಮಯ್ಯ ಅವರು ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಶಾಕ್ ನೀಡಲು ಸಿದ್ದತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಮಂತ್ರಿಗಳ ವಿರುದ್ಧ ಈಗಾಗಲೇ ಕಾಂಗ್ರೆಸ್ ಹಲವು ಶಾಸಕರು ಬಹಿರಂಗವಾಗಿ ಅಸಮಾಧಾನವನ್ನ ಹೊರಹಾಕಿದ್ದಾರೆ. ಹೀಗಾಗಿ ಸರ್ಕಾರ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆ ಸಚಿವರಿಗೆ ಕೊಕ್ ಕೊಡಲು ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನೂ ಕೆಲವು ಶಾಸಕರಿಗೆ ಸಚಿವರ ವಿರುದ್ಧ ಅಸಮಾಧಾನವಿದೆ, ಇದನ್ನೇ ನೆಪವಾಗಿಟ್ಟುಕೊಂಡು ಸಚಿವರನ್ನು ಸಂಪುಟದಿಂದ ಕೈಬಿಡಲು ಸಿಎಂ ಮುಂದಾಗಿದ್ದಾರೆ. ಇದು ಸೋಮವಾರ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸ್ಪಷ್ಟವಾಗಿತ್ತು. ಸಚಿವರು ತಮ್ಮ ಪ್ರಸ್ತಾವನೆಗಳಿಗೆ ಸ್ಪಂದಿಸದಿರುವ ವಿಷಯವನ್ನು ಶಾಸಕರು ಬಹಿರಂಗವಾಗಿ ಪ್ರಸ್ತಾಪಿಸಿದರು. ಸಿದ್ದರಾಮಯ್ಯ ಅವರು ಸಚಿವರ ಬಗ್ಗೆ ಚಿಂತಿಸುತ್ತಿಲ್ಲ, ಬದಲಿಗೆ ಮುಖ್ಯಮಂತ್ರಿ ಆಗಿ ಮುಂದುವರಿಯಲು ಶಾಸಕರ ಬೆಂಬಲ ಹೆಚ್ಚು ಮುಖ್ಯ ಎಂದು ಅವರು ಚಿಂತಿತರಾಗಿದ್ದಾರೆ ಎಂದು ಎಂಎಲ್ ಸಿಯೊಬ್ಬರು ತಿಳಿಸಿದ್ದಾರೆ.












Click it and Unblock the Notifications