ಅಕ್ರಮ ಗಣಿಗಾರಿಕೆಯ ಮೂಲ ಪಕ್ಷ ಯಾವುದೆಂಬುದು ದೇಶಕ್ಕೇ ಗೊತ್ತು: ಈಶ್ವರ ಖಂಡ್ರೆ
ಬೆಂಗಳೂರು, ಜೂನ್ 24: ಅಕ್ರಮ ಗಣಿಗಾರಿಕೆಯ ಮೂಲ ಪಕ್ಷ ಯಾವುದು ಎಂದು ಇಡೀ ದೇಶಕ್ಕೇ ತಿಳಿದಿದೆ. ಕಕ್ ಬ್ಯಾಕ್, ಸೂಟ್ ಕೇಸ್ ಪಡೆದು ಅಭ್ಯಾಸ ಇರೋರು ಬೇರೆಯವರೂ ತಮ್ಮಂತೆ ಎಂದು ತಿಳಿಯುತ್ತಾರೆ ಎಂದು ಸಿ ಟಿ ರವಿ ಅವರಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿರುಗೇಟು ನೀಡಿದ್ದಾರೆ.
ಕುದುರೆಮುಖ ಕಬ್ಬಿಣದ ಅದಿರು ಸಂಸ್ಥೆಯು ಈ ಹಿಂದೆ ಸಿಇಸಿ ನೀಡಿದ್ದ ನಿರ್ದೇಶನಗಳನ್ನು ಪರಿಪಾಲಿಸುವವರೆಗೆ ಉದ್ದೇಶಿತ ಸಂಡೂರು ಸ್ವಾಮಿ ಮಲೈ ವ್ಯಾಪ್ತಿಯ ದೇವದಾರಿ ಅರಣ್ಯದಲ್ಲಿ ಕೆ.ಐ.ಓ.ಸಿ.ಎಲ್.ಗೆ ಗಣಿಗಾರಿಕೆಗೆ ಒಪ್ಪಂದ ಮಾಡಿಕೊಳ್ಳದಂತೆ ನೀಡಿರುವ ನಿರ್ದೇಶನಕ್ಕೆ ಸಂಬಂಧಿಸಿದಂತೆ 'ಕಿಕ್ ಬ್ಯಾಕ್ ಕೊಟ್ಟಿಲ್ಲ. ಹೀಗಾಗಿ ತಡೆ ಒಡ್ಡಿದ್ದಾರೆ ಎಂಬ ಸಿ.ಟಿ.ರವಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಈಶ್ವರ ಖಂಡ್ರೆ ತಾನು ಕಳ್ಳ ಪರರನ್ನು ನಂಬ ಎಂಬ ಗಾದೆ ನೆನಪಿಗೆ ತರುತ್ತದೆ ಎಂದು ಹೇಳಿದ್ದಾರೆ.

ನಾವೆಲ್ಲೂ ಕೇಂದ್ರ ಸರ್ಕಾರಿ ಸ್ವಾಮ್ಯದ ಕೆ.ಐ.ಓ.ಸಿ.ಎಲ್. ಈ ಹಿಂದೆ ನಿಯಮಗಳನ್ನು ಉಲ್ಲಂಘನೆ ಮಾಡಿದೆ, ನ್ಯಾಯಾಲಯಗಳ ಆದೇಶವನ್ನೂ ಪರಿಪಾಲನೆ ಮಾಡಿಲ್ಲ. ಹೀಗಾಗಿ ಸಿಇಸಿ ನೀಡಿರುವ ನಿರ್ದೇಶನಗಳನ್ನು ಪರಿಪಾಲನೆ ಮಾಡುವವರೆಗೆ ಒಪ್ಪಂದ ಮಾಡಿಕೊಳ್ಳದಂತೆ ತಿಳಿಸಲಾಗಿದೆ. ಅವರು ಹಿಂದೆ ಮಾಡಿರುವ ತಪ್ಪು ಸರಿಪಡಿಸಲಿ ನಂತರ ಅನುಮತಿ ಪಡೆದುಕೊಳ್ಳಲಿ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಜೆಪಿಯ ಕೆಲವು ನಾಯಕರಿಗೂ ಅಕ್ರಮ ಗಣಿಗಾರಿಕೆಗೂ ಇದ್ದ ಸಂಬಂಧ ಜಗಜ್ಜಾಹೀರಾಗಿದೆ. ಅವರೇ ಪಕ್ಷದಿಂದ ಉಚ್ಚಾಚಿಸಿದ ಗಣಿ ಧಣಿಗಳನ್ನು ಈಗ ಅಪ್ಪಿಕೊಂಡು ರತ್ನಗಂಬಳಿ ಹಾಸಿ ಪಕ್ಷಕ್ಕೆ ಮತ್ತೆ ಕರೆದುಕೊಂಡಿದ್ದಾರೆ. ಇವರು ಪ್ರಾಮಾಣಿಕತೆ ಮಾತನಾಡುವುದು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದಂತೆ ಎಂದು ಲೇವಡಿ ಮಾಡಿದ್ದಾರೆ.
ಸಿ.ಟಿ. ರವಿ, ಎಲುಬಿಲ್ಲದ ನಾಲಿಗೆ ಎಂದು ಏನೇನೋ ಮಾತನಾಡಿದ್ದಾರೆ. ಸೂಟ್ ಕೇಸ್ ಕೊಡಲಿ ಎಂದು ನಾವು ತಡೆ ಒಡ್ಡಿದ್ದೇವೆ ಎಂದು ಆರೋಪಿಸಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ಎಷ್ಟು ಖಾಸಗಿ ಗಣಿಗಾರಿಕೆಗೆ ಅನುಮತಿ ಕೊಟ್ಟಿದೆ ಎಂಬುದು ರಾಜ್ಯದ ಜನರಿಗೆ ಗೊತ್ತಿದೆ. ಅದಕ್ಕೆಲ್ಲಾ ಇವರು ಎಷ್ಟೆಷ್ಟು ಸೂಟ್ ಕೇಸ್ ಪಡೆದಿದ್ದರು ಎಂದು ಹೇಳಲಿ. ಪಾಪ ಸಿ.ಟಿ. ರವಿ ತಮ್ಮ ಅನುಭವ ಹೇಳಿಕೊಂಡಿದ್ದಾರೆ ಎಂದು ಕಾಣುತ್ತದೆ ಎಂದು ಕುಹಕವಾಡಿದ್ದಾರೆ.
ಚಿಕ್ಕಮಗಳೂರು ಸುತ್ತಮುತ್ತ ಶುಂಠಿ ಬೆಳೆಯೋ ಹೆಸರಲ್ಲಿ ಮರ ಕಡಿಯುವವರ ಮತ್ತು ಅರಣ್ಯ ಒತ್ತುವರಿ ಮಾಡುವವರ ಬೆಂಬಲಕ್ಕೆ ಯಾರು ನಿಂತಿದ್ದಾರೆ ಎಂಬುದು ಜನತೆಗೆ ತಿಳಿದಿದೆ. ಎಲ್ಲವೂ ಶೀಘ್ರ ಹೊರಬರಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಪ್ರಜಾಪ್ರಭುತ್ವದ ಕತ್ತು ಹಿಸುಕಿದ್ದ ಕಾಂಗ್ರೆಸ್: ಸಿ.ಟಿ.ರವಿ
ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ ಪಕ್ಷವು ತಾನು ಮಾಡಿದ ತಪ್ಪಿಗೆ 49 ವರ್ಷಗಳಾದರೂ ಕ್ಷಮೆ ಕೇಳಿಲ್ಲ ಎಂದು ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಟೀಕಿಸಿದರು. ದೇಶಕ್ಕೆ ತುರ್ತು ಪರಿಸ್ಥಿತಿ ಹೇರುವ ಇಂಥ ಪರಿಸ್ಥಿತಿ ಯಾವತ್ತೂ ಬರಬಾರದು ಎಂದಿದ್ದರೆ, ಆ ಕರಾಳ ಅಧ್ಯಾಯದ ನೆನಪು ಮಾಡಿಕೊಳ್ಳುವ ಅವಶ್ಯಕತೆ ಇದೆ. ಕಾಂಗ್ರೆಸ್ಸಿಗೆ ತಾವು ಮಾಡಿದ್ದು ತಪ್ಪು ಎಂದು ಅನಿಸಿದರೆ, ಸಾರ್ವಜನಿಕ ಕ್ಷಮೆ ಯಾಚನೆ ಮಾಡಬೇಕು ಎಂದು ಆಗ್ರಹಿಸಿದರು.
ಕಾಂಗ್ರೆಸ್ ಪಕ್ಷದ ಡಿಎನ್‍ಎಯಲ್ಲೇ ವ್ಯಕ್ತಿಗತ ಸ್ವಾರ್ಥಕ್ಕಾಗಿ ಏನನ್ನು ಬೇಕಾದರೂ ಮಾಡುವ ಮನಸ್ಥಿತಿ ಇದೆ. ಈ ಮನಸ್ಥಿತಿ ಪ್ರಜಾಪ್ರಭುತ್ವಕ್ಕೂ ಅಪಾಯಕಾರಿ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷವು ಶ್ರೀಮತಿ ಇಂದಿರಾ ಗಾಂಧಿಯವರ ನೇತೃತ್ವದಲ್ಲಿ ತುರ್ತು ಪರಿಸ್ಥಿತಿ ಹೇರುವ ಮೂಲಕ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಕೆಲಸ ಮಾಡಿತ್ತು. ಅದೊಂದು ಕರಾಳ ದಿನ ಎಂದು ತಿಳಿಸಿದರು.
ಅವತ್ತು ಮಾನ್ಯ ಸಿದ್ದರಾಮಯ್ಯನವರು ಕಾಂಗ್ರೆಸ್ ಜೊತೆಗಿದ್ದರೋ ಇಲ್ಲವೋ ಗೊತ್ತಿಲ್ಲ. ಆದರೆ, ಮಲ್ಲಿಕಾರ್ಜುನ ಖರ್ಗೆಯವರು ಕಾಂಗ್ರೆಸ್ಸಿನ ಜೊತೆಗಿದ್ದರು. ಶ್ರೀಮತಿ ಇಂದಿರಾ ಗಾಂಧಿಯವರು ಡಾ. ಬಿ.ಆರ್.ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನವನ್ನು ದಮನ ಮಾಡಿದ್ದರು ಎಂಬುದು ಖರ್ಗೆಯವರಿಗೆ ಅರ್ಥ ಆಗಬೇಕಿತ್ತು ಎಂದು ತಿಳಿಸಿದರು.
ತನ್ನ ಸ್ವಾರ್ಥಕ್ಕಾಗಿ, ಅಧಿಕಾರದಲ್ಲಿ ಉಳಿಯಬೇಕೆಂಬ ಏಕೈಕ ದುರುದ್ದೇಶದಿಂದ ಅಲಹಾಬಾದ್ ಕೋರ್ಟ್ ತೀರ್ಪಿನ ವಿರುದ್ಧ ಸಂವಿಧಾನವನ್ನೇ ಬುಡಮೇಲು ಮಾಡಿದ್ದರು. ವಿಪಕ್ಷ ನಾಯಕರನ್ನೆಲ್ಲ ಜೈಲಿಗೆ ಅಟ್ಟಿದ್ದಲ್ಲದೆ, ಪತ್ರಿಕಾ ಸ್ವಾತಂತ್ರ್ಯ ಹರಣ ಮಾಡಿದ್ದರು ಎಂದು ಹೇಳಿದರು.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
ಬಾಗಲಕೋಟೆಯಲ್ಲಿ ಕಾಂಗ್ರೆಸ್ಗೆ ಪೂರಕ ವಾತಾವರಣ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಸಿಎಂ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ












Click it and Unblock the Notifications